ರೆಪೋ ದರ ಏರಿಕೆ ಮಾಡಿ ಶಾಕ್ ಕೊಟ್ಟ ಬೆನ್ನಲ್ಲೇ ಇದೀಗ ಆರ್ಬಿಐ ಬಾಗಲಕೋಟೆಯ ಮುಧೋಳ ಸಹಕಾರಿ ಬ್ಯಾಂಕ್ ಲಿಮಿಟೆಡ್ ಪರವಾನಗಿಯನ್ನು ರದ್ದುಗೊಳಿಸಿದೆ. ಬ್ಯಾಂಕಿನ ಬಳಿ ಸಾಕಷ್ಟು ಬಂಡವಾಳ ಇಲ್ಲದ ಕಾರಣ ಈ ನಿರ್ಧಾರ ಕೈಗೊಂಡಿರೋದಾಗಿ ಆರ್ ಬಿಐ ತಿಳಿಸಿದೆ. ಠೇವಣಿಗಳ ಸ್ವೀಕೃತಿ ಹಾಗೂ ಮರುಪಾವತಿ ಸೇರಿದಂತೆ ಯಾವುದೇ ವ್ಯವಹಾರಗಳನ್ನು ನಡೆಸದಂತೆ ಬ್ಯಾಂಕಿಗೆ ಆರ್ ಬಿಐ ನಿರ್ಬಂಧ ವಿಧಿಸಿದೆ.
ಬ್ಯಾಂಕಿನ ಪ್ರಸ್ತುತ ಆರ್ಥಿಕ ಪರಿಸ್ಥಿತಿಯಲ್ಲಿ ಅದು ತನ್ನ ಠೇವಣಿದಾರರಿಗೆ ಪೂರ್ಣ ಪ್ರಮಾಣದಲ್ಲಿ ಹಣ ಪಾವತಿಸೋದು ಅಸಾಧ್ಯ. ಹೀಗಾಗಿ ಬ್ಯಾಂಕಿಂಗ್ ವ್ಯವಹಾರಗಳನ್ನು ಮುಂದುವರಿಸಲು ಬ್ಯಾಂಕಿಗೆ ಅವಕಾಶ ನೀಡಿದರೆ ಸಾರ್ವಜನಿಕರ ಹಿತಾಸಕ್ತಿ ಮೇಲೆ ವ್ಯತಿರಿಕ್ತ ಪರಿಣಾಮ ಬೀರಲಿದೆ’ ಎಂದು ಆರ್ ಬಿಐ ತಿಳಿಸಿದೆ.
ಮುಧೋಳ ಸಹಕಾರಿ ಬ್ಯಾಂಕ್ ಲಿಮಿಟೆಡ್ ಸಲ್ಲಿಸಿರುವ ಅಂಕಿಅಂಶಗಳ ಪ್ರಕಾರ ಶೇ.99ಕ್ಕಿಂತಲೂ ಅಧಿಕ ಠೇವಣಿದಾರರು ಡಿಐಸಿಜಿಸಿಯಿಂದ ಪೂರ್ಣ ಪ್ರಮಾಣದ ಠೇವಣಿ ಪಡೆಯಲು ಅರ್ಹರಾಗಿದ್ದಾರೆ ಎಂದು ಆರ್ ಬಿಐ ಹೇಳಿದೆ.
ಇನ್ನು ಕರ್ನಾಟಕದ ಸಹಕಾರ ಹಾಗೂ ಸಹಕಾರ ಸೊಸೈಟಿಗಳ ನೋಂದಣಾಧಿಕಾರಿಗೆ ಕೂಡ ಬ್ಯಾಂಕನ್ನು ಮುಚ್ಚಿ ಒಬ್ಬರು ಅಧಿಕಾರಿಯನ್ನು ನೇಮಕ ಮಾಡುವಂತೆ ಆರ್ ಬಿಐ ಆದೇಶಿಸಿದೆ.ಬ್ಯಾಂಕ್ ದಿವಾಳಿಯಾದ ಸಂದರ್ಭದಲ್ಲಿ ಠೇವಣಿದಾರರು ಡಿಐಸಿಜಿಸಿಯಿಂದ (DICGC) 5 ಲಕ್ಷ ರೂ.ವರೆಗೆ ಠೇವಣಿಯ ವಿಮೆ ಕ್ಲೈಮ್ ಮೊತ್ತ ಸ್ವೀಕರಿಸಲು ಅರ್ಹರಾಗಿದ್ದಾರೆ ಎಂದು ಆರ್ ಬಿಐ ತಿಳಿಸಿದೆ. ಬ್ಯಾಂಕಿನ ಠೇವಣಿದಾರರ ಮನವಿ ಮೇರೆಗೆ ಡಿಐಸಿಜಿಸಿ ಕಾಯ್ದೆ1961ರ ಸೆಕ್ಷನ್ 18ರಡಿಯಲ್ಲಿ 16.69 ಕೋಟಿ ರೂ. ಒಟ್ಟು ವಿಮಾ ಮೊತ್ತವನ್ನು ಪಾವತಿ ಮಾಡೋದಾಗಿ ಆರ್ ಬಿಐ (RBI) ಹೇಳಿದೆ.
ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ. ಫೆ. 23…
ಸುದ್ದಿಒನ್ ವಿರಾಟ್ ಕೊಹ್ಲಿ 14,000 ಏಕದಿನ ರನ್ ಗಳಿಸಿದ ವೇಗದ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗುವ ಮೂಲಕ ಸಚಿನ್…
ದಾವಣಗೆರೆ; ರಾಜ್ಯದಲ್ಲಿ ಇನ್ನೇನು ತಾಲೂಕು, ಜಿಲ್ಲಾ ಪಂಚಾಯತಿಗಳ ಚುನಾವಣೆಗೆ ದಿನಾಂಕ ಘೋಷಣೆಯಾಗಲಿದೆ. ಈ ಸಂಬಂಧ ರೇಣುಕಾಚಾರ್ಯ ಅವರು…
ತುಮಕೂರು: ಬೆಸ್ಕಾಂ ತುಮಕೂರು ನಗರ ಉಪ ವಿಭಾಗ 1ರ ವ್ಯಾಪ್ತಿಯಲ್ಲಿ ಅಟಲ್ ಭೂ ಜಲ ಯೋಜನೆಯಡಿಯಲ್ಲಿ ಪ್ರತ್ಯೇಕ ಕೃಷಿ…
ಸುದ್ದಿಒನ್ ಪ್ರತಿಯೊಬ್ಬ ಭಾರತೀಯ ಅಭಿಮಾನಿಯೂ ಟೀಮ್ ಇಂಡಿಯಾದ ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ಬ್ಯಾಟ್‌ನಿಂದ ರನ್‌ಗಳನ್ನು ನಿರೀಕ್ಷಿಸುತ್ತಾರೆ.…
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 23 : ಮಕ್ಕಳ ಅರೋಗ್ಯದ ಬಗ್ಗೆ ಹೆಚ್ಚಿನ ಲಕ್ಷ್ಯವಹಿಸಿ ಜಂಕ್ ಪುಡ್ ಕಡೆಗೆ ಅವರ…