ಮಂಡ್ಯ: ಮೊದಲೇ ಕೊರೊನಾದಿಂದ ಗಾಬರಿಗೊಂಡ ಜನರಿಗೆ ಮತ್ತೊಂದು ಶಾಕ್ ಸಿಕ್ಕಿದೆ. ಕೇರಳದಲ್ಲಿ ಕಾಣಿಸಿಕೊಳ್ಳುತ್ತಿರುವ ಕೊರೊನಾ ವೈರಸ್ ಬಗ್ಗೆ ಈಗಾಗಲೇ ರಾಜ್ಯದಲ್ಲೂ ಎಚ್ಚರಿಕೆ ವಹಿಸಲಾಗಿತ್ತು. ಆದರೆ ಇದೀಗ ಕರ್ನಾಟಕದಲ್ಲೂ ವೈರಸ್ ಕಂಡು ಬಂದಿದೆ. ಮಂಡ್ಯದಲ್ಲಿ ಒಂದು ಕೇಸ್ ದಾಖಲಾಗಿದೆ.
ಕೊರೊನಾ ಬಂದಂತ ಸಮಯದಲ್ಲಿ ಒಬ್ಬರಿಗೆ ಬಂದಿದ್ದೇ ತಡ, ಹೇಗೆ ಬೇಗನೇ ಹರಡುತ್ತಿತ್ತು ಎಂಬುದು ಎಲ್ಲರಿಗೂ ಗೊತ್ತು. ಇದೀಗ ಮಂಡ್ಯದಲ್ಲಿ ವೈರಸ್ ಕಂಡು ಬಂದಿರುವುದು ಒಂದಷ್ಟು ಆತಂಕಕ್ಕೆ ಕಾರಣವಾಗಿದೆ. ಮದ್ದೂರಿನ 75 ವರ್ಷದ ವ್ಯಕ್ತಿಯೊಬ್ಬರಿಗೆ ಕೋವಿಡ್ ದೃಢಪಟ್ಟಿದೆ. ಅದಿ ಜಿಎನ್1ರೂಪಾಂತರಿ ವೈರಸ್ ಆಗಿದೆಯೇ ಎಂದು ವೈದ್ಯರು ಇನ್ನು ದೃಢಪಟ್ಟಿಲ್ಲ.
ಕೊರೊನಾ ದೃಢಪಟ್ಟಿರುವ ವ್ಯಕ್ತಿಗೆ ಪ್ರಯಾಣದ ಇತಿಹಾಸವಿಲ್ಲ. ಆದರೆ ಶಸ್ತ್ರಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಈ ವೇಳೆ ಪರೀಕ್ಷೆ ಮಾಡಿದಾಗ, ಆ ವ್ಯಕ್ತಿಯಲ್ಲಿ ಸೋಂಕು ಇರುವುದು ದೃಢಪಟ್ಟಿದೆ. ಹೀಗಾಗಿ ಸೋಂಕಿತ ವ್ಯಕ್ತಿಯನ್ನು ಕ್ವಾರಂಟೈನ್ ನಲ್ಲಿ ಇಡಲಾಗಿದೆ. ಅವರ ಜೊತೆಗೆ ಸಂಪರ್ಕದಲ್ಲಿದ್ದವರು ಪರೀಕ್ಷೆ ಮಾಡಿಸಿಕೊಳ್ಳಲು ಸೂಚನೆ ನೀಡಲಾಗಿದೆ.
ಇನ್ನು ಸೋಂಕಿನ ಬಗ್ಗೆ ಸುದ್ದಿಯಾಗುತ್ತಿದ್ದಂತೆಯೇ ಸಚಿವ ದಿನೇಶ್ ಗುಂಡೂರಾವ್ ಜನರಿಗೆ ಎಚ್ಚರದಿಂದ ಇರಲು ಸೂಚಿಸಿದ್ದಾರೆ. ಲಕ್ಷಣಗಳು ಕಂಡು ಬಂದರೆ ತಕ್ಷಣ ಆರ್ಟಿಪಿಎಸ್ ಟೆಸ್ಟ್ ಮಾಡಿಸಿಕೊಳ್ಳುವುದು ಉತ್ತಮ ಎಂದಿದ್ದಾರೆ. ಜೊತೆಗೆ ಮಾಸ್ಕ್ ಅನ್ನು ಕಡ್ಡಾಯವಾಗಿ ಧರಿಸಬೇಕು ಎಂಬ ಸೂಚನೆಯನ್ನು ನೀಡಿದ್ದಾರೆ. ಕೊರೊನಾ ಬಂದಂತ ಸಮಯದಲ್ಲಿ ಏನೆಲ್ಲಾ ನಿಯಮಗಳನ್ನು ಪಾಲನೆ ಮಾಡಲಾಗುತ್ತಿತ್ತೋ, ಅದೇ ಮಾರ್ಗಸೂಚಿಗಳನ್ನು ಪಾಲನೆ ಮಾಡಿದರೆ ಅಪಾಯದಿಂದ ತಪ್ಪಿಸಿಕೊಳ್ಳಬಹುದು. ವಾತಾವರಣ ಕೂಡ ನೆಗಡಿ, ಜ್ವರ ಕಾಣೀಸಿಕೊಳ್ಳುವಂತೆ ಇದೆ. ಹೀಗಾಗಿ ಆರೋಗ್ಯ ಕಾಪಾಡಿಕೊಳ್ಳುವುದಕ್ಕೂ ನಿಯಮಗಳನ್ನು ಪಾಲನೆ ಮಾಡುವುದು ಉತ್ತಮ.