Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಮತ್ತೆ ಬಂದಿದೆ ಕೊರೋನಾ : ಮಾಸ್ಕ್ ಹಾಕಿ ಬಂದ ಸಿಎಂ ಸಿದ್ದರಾಮಯ್ಯ

---Advertisement---

ಬೆಂಗಳೂರು; ಕೊರೋನಾ ಎಂಬ ಮಹಾಮಾರಿ ಎರಡ್ಮೂರು ವರ್ಷ ಇಡೀ ಜಗತ್ತನ್ನೇ ನಲುಗಿಸಿತ್ತು. ಅದರಿಂದ ಚೇತರಿಸಿಕೊಳ್ಳುವುದಕ್ಕೆ ಸಾಕಷ್ಟು ಸಮಯವೇ ಬೇಕಾಯ್ತು. ಇದೀಗ ಮತ್ತೆ ಅದರಿಂದಾನೇ ಸಂಕಷ್ಟ ಎದುರಾಗಿದೆ. ಇದು ಜನರಿಗೆ ಆತಂಕವನ್ನ ಸೃಷ್ಟಿ ಮಾಡಿದೆ. ಇದರ ನಡುವೆ ಸಿಎಂ ಸಿದ್ದರಾಮಯ್ಯ ಅವರು ಕೂಡ ಮಾಸ್ಕ್ ಧರಿಸಿಯೇ ಜಾಗೃತಿ ಮೂಡಿಸಿದ್ದಾರೆ.

ಪ್ರಸ್ತುತ ರಾಜ್ಯದಲ್ಲಿ 35 ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ. ಅದರಲ್ಲಿ ಮೂರು ಪಾಸಿಟಿವ್ ಪ್ರಕರಣಗಳು ಮಗುವಿನಲ್ಲಿ ಕಂಡು ಬಂದಿದೆ. ಬೆಂಗಳೂರು ಒಂದರಲ್ಲಿಯೇ 32 ಕೇಸ್ ಗಳು ಪತ್ತೆಯಾಗಿವೆ‌. ಕೇಸ್ ಗಳು ಹೆಚ್ಚಾಗುತ್ತಿರುವ ಕಾರಣ ರಾಜ್ಯ ಸರ್ಕಾರ ಅಲರ್ಟ್ ಆಗಿದ್ದು, ಜಾಗೃತಿ ಮೂಡಿಸುತ್ತಿದೆ. ಅದರ ಭಾಗವಾಗಿಯೇ ಸಿಎಂ ಸಿದ್ದರಾಮಯ್ಯ ಅವರು ಮಾಸ್ಕ್ ಧರಿಸಿ ಬಂದಿದ್ದಾರೆ. ಮೈಸೂರಿನ ನಿವಾಸದ ಬಳಿ ಸಿಎಂ ಸಿದ್ದರಾಮಯ್ಯ ಬಳಿ ಮನವಿ ಸಲ್ಲಿಸಲು ಹಲವಾರು ಜನ ಆಗಮಿಸಿದ್ದರು. ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಕೊಡಲು ಸಾರ್ವಜನಿಕರು ಮುಗಿಬಿದ್ದಿದ್ದರು. ಈ ಹಿನ್ನೆಲೆ ಸಿದ್ದರಾಮಯ್ಯ ಅವರು ಮಾಸ್ಕ್ ಧರಿಸಿ ಬಂದಿದ್ದರು.

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಾಳೆಯಿಂದಾನೇ ಕೋವಿಡ್ ಟೆಸ್ಟ್ ಮಾಡಲಾಗುತ್ತದೆ. ಮೆಡಿಕಲ್ ಕಾಲೇಜು ಆಸ್ಪತ್ರೆ ಮತ್ತು ಸರ್ಕಾರಿ ಆಸ್ಪತ್ರೆಯಲ್ಲಿ ಟೆಸ್ಟ್ ಮಾಡಲಾಗುತ್ತದೆ. ಕೊರೋನಾ ವೈರಸ್ ಏರಿಕೆಯ ಭಯದಿಂದ ಈಗ ಟೆಸ್ಟಿಂಗ್ ಶುರು ಮಾಡಲಾಗಿದೆ. ಯಾಕಂದ್ರೆ ಕೊರೊನಾ ಎಂಬ ವೈರಸ್ ನೋಡ ನೋಡುತ್ತಿದ್ದಂತೆಯೇ ಹೆಚ್ಚಾಗುತ್ತಾ ಹೋಗುತ್ತದೆ. ಎರಡು ಬಾರಿ ಬಂದ ವೈರಸ್ ನಿಂದ ಜೀವ ಕಳೆದುಕೊಂಡವರ ಸಂಖ್ಯೆ ಲೆಕ್ಕಕ್ಕೆ ಇಲ್ಲ. ಹೀಗಾಗಿ ಆ ಭಯದಿಂದ ಸರ್ಕಾರ ಮೊದಲೇ ಜಾಗೃತಿಯನ್ನ ವಹಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...