ರಾಮನಗರ: ಕೊರೊನಾ ಹೆಚ್ಚಳದ ಹಿನ್ನೆಲೆ ಸರ್ಕಾರದಿಂದ ರಾಜ್ಯದಲ್ಲಿ ಟಫ್ ರೂಲ್ಸ್ ಜಾರಿ ಮಾಡಿದೆ. ಈ ರೂಲ್ಸ್ ನಡುವೆ ಕಾಂಗ್ರೆಸ್ ನಾಯಕರು ನಿನ್ನೆ ಪಾದಯಾತ್ರೆ ಮಾಡಿದ್ದಾರೆ. ಕನಕಪುರದ ಸಂಗಮ ಕ್ಷೇತ್ರದಲ್ಲಿ ಸಾಕಷ್ಟು ಜನ ಸೇರಿ ಮೇಕೆದಾಟು ಪಾದಯಾತ್ರೆಗೆ ಚಾಲನೆ ನೀಡಿದ್ದರು. ಇದರ ಪರಿಣಾಮ ಇದೀಗ ಕಾಂಗ್ರೆಸ್ ನಾಯಕರ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಮಾಜಿ ಸಿಎಂ ಸಿದ್ದರಾಮಯ್ಯ, ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಕಾರ್ಯಕ್ರಮದ ವೇದಿಕೆ ಮೇಲಿದ್ದವರ ವಿರುದ್ಧ ರಾಮನಗರ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. ಸುಮಾರು 30 ಜನರ ವಿರುದ್ಧ ದೂರು ದಾಖಲಾಗಿದೆ.
ಮೇಕೆದಾಟು ಯೋಜನೆಗೆ ಆಗ್ರಹಿಸಿ ಕಾಂಗ್ರೆಸ್ ಪಾದಯಾತ್ರೆ ಮಾಡಲು ಕಳೆದ ಒಂದು ತಿಂಗಳ ಹಿಂದೆಯೇ ಫ್ಲ್ಯಾನ್ ಮಾಡಿಕೊಂಡಿತ್ತು. ಇದಕ್ಕೆ ಸಾಕಷ್ಟು ಜನರ ಬೆಂಬಲ ಕೂಡ ದೊರಕಿತ್ತು. ಆದ್ರೆ ಕೊರಿನಾ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿರುವ ಕಾರಣ ಸರ್ಕಾರ ಟಫ್ ರೂಲ್ಸ್ ಜಾರಿ ಮಾಡಿದ ಹಿನ್ನೆಲೆ, ಕಾಂಗ್ರೆಸ್ ನಿರೀಕ್ಷಿಸಿದ ಮಟ್ಟಿಗೆ ಪಾದಯಾತ್ರೆ ನಡೆಯಲಿಲ್ಲ. ಆದರೂ ಹಠ ಬಿಡದ ನಾಯಕರು ಪಾದಯಾತ್ರೆ ಬದಲಿಗೆ ನೀರಿಗಾಗಿ ನಡಿಗೆ ಮಾಡಿದ್ದು, ಎಫ್ಐಆರ್ ದಾಖಲಾಗಿದೆ.
ಕೊರೊನಾ ರೂಲ್ಸ್ ಬ್ರೇಕ್: ಡಿಜೆಶಿ, ಸಿದ್ದರಾಮಯ್ಯ ಸೇರಿ 30 ಜನರ ವಿರುದ್ಧ FIR..!