Connect with us

Hi, what are you looking for?

ಪ್ರಮುಖ ಸುದ್ದಿ

ಕರೋನ ಎರಡನೇ ಅಲೆ : ಹೊಸ ಮಾರ್ಗಸೂಚಿ ಅನ್ವಯ ಯಾವುದಕ್ಕೆಲ್ಲಾ ನಿರ್ಬಂಧ ಇದೆ ಗೊತ್ತಾ..?

ಬೆಂಗಳೂರು: ಕೊರೊನಾ ಎರಡನೇ ಅಲೆ ರಾಜ್ಯದಲ್ಲಿ ಜೋರಾಗಿದೆ. ನಿರೀಕ್ಷೆಗೂ ಮೀರಿ ಕೊರೊನಾ ಹಬ್ಬುತ್ತಿದೆ. ಈ ಹಿನ್ನೆಲೆ ಸರ್ಕಾರ ಕಟ್ಟುನಿಟ್ಟಿನ ಕ್ರಮ ತೆಗೆದುಕೊಂಡಿದ್ದು, ಹೊಸ ಮಾರ್ಗಸೂಚಿ ಹೊರಡಿಸಿದೆ.

ಕೋವಿಡ್ ಪ್ರಕರಣಗಳು ಹೆಚ್ಚಿರುವ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬೀದರ್, ಮೈಸೂರು, ಉಡುಪಿ ಮುಂತಾದ ಜಿಲ್ಲೆಗಳಿಗೆ ಕೆಲವೊಂದು ನಿರ್ಬಂಧಗಳನ್ನು ಹೇರಲಾಗಿದೆ.

6 ರಿಂದ 9ನೇ ತರಗತಿ, ವಿದ್ಯಾಗಮ ಸ್ಥಗಿತ. 10, 11 ಮತ್ತು 12ನೇ ತರಗತಿ ಮುಂದುವರಿಕೆ. ತರಗತಿಯಲ್ಲಿ ಖುದ್ದು ಹಾಜರಾತಿ ಕಡ್ಡಾಯವಲ್ಲ.

ಜಿಮ್, ಸ್ವಿಮ್ಮಿಂಗ್ ಪೂಲ್ ಮುಚ್ಚಲು ಆದೇಶ. ಯಾವುದೇ ಕಾರಣಕ್ಕೂ ಪ್ರತಿಭಟನೆ, ಜಾಥಗಳಿಗೆ ಅವಕಾಶವಿಲ್ಲ. ದೇವಾಲಯ, ಪ್ರಾರ್ಥನಾ ಮಂದಿರಕ್ಕೆ ಜನರು ಭೇಟಿ ನೀಡಲು ಅವಕಾಶ. ಆದರೆ, ಗುಂಪು ಸೇರುವ ಕಾರ್ಯಕ್ರಮ ಮಾಡುವಂತಿಲ್ಲ.

ಅಪಾರ್ಟ್‌ಮೆಂಟ್‌ಗಳಲ್ಲಿ ಜಿಮ್, ಪಾರ್ಟಿ ಹಾಲ್, ಕ್ಲಬ್, ಸ್ವಿಮ್ಮಿಂಗ್ ಫುಲ್ ಮುಚ್ಚಲು ಆದೇಶ.

ಧಾರ್ಮಿಕ ಸ್ಥಳಗಳಲ್ಲಿ ವೈಯುಕ್ತಿಕವಾಗಿ ಪ್ರಾರ್ಥನೆ ಮಾಡಲು ಅವಕಾಶ. ಆದ್ರೆ ಗುಂಪು ಸೇರುವ ಕಾರ್ಯಕ್ರಮಗಳಿಗೆ ಅವಕಾಶವಿಲ್ಲ.

ಯಾವುದೇ ತರಹದ ರ್ಯಾಲಿ, ಮುಷ್ಕರ, ಧರಣಿ ನಿಷೇಧ. ಬೆಂಗಳೂರು ನಗರ, ಗ್ರಾಮಾಂತರ ಸೇರಿದಂತೆ ಮೈಸೂರು, ಕಲಬುರಗಿ, ದಕ್ಷಿಣ ಕನ್ನಡ, ಉಡುಪಿ,ಧಾರವಾಡ, ಬೀದರ್ ಜಿಲ್ಲೆಗಳಲ್ಲಿ ಪಬ್ ಬಾರ್, ರೆಸ್ಟೋರೆಂಟ್ ಶೇ 50 ರಷ್ಟು ಅವಕಾಶ.

ಆದಷ್ಟು ವರ್ಕ್ ಫ್ರಮ್ ಹೋಮ್ ಕಡೆ ಒತ್ತು. ಜಾತ್ರೆ, ಧಾರ್ಮಿಕ ಆಚರಣೆಗಳು ನಿಷೇಧ. ಶಾಪಿಂಗ್ ಹಾಲ್ ಹಾಗೂ ಮಾರ್ಕೆಟ್ ಗಳಲ್ಲಿ ಶಿಷ್ಟಾಚಾರ ಪಾಲಿಸುವುದು. ಬೆಂಗಳೂರು ಸೇರಿದಂತೆ 8 ಜಿಲ್ಲೆಗಳಿಗೆ ಮಾರ್ಗಸೂಚಿ ಅನ್ವಯ

Click to comment

Leave a Reply

Your email address will not be published. Required fields are marked *

You May Also Like

ಪ್ರಮುಖ ಸುದ್ದಿ

ಕೊಡಗು: ಸದ್ಯ ಲಾಕ್ಡೌನ್ ನಿಂದಾಗಿ ಅದೆಷ್ಟೋ ಜನ ತುತ್ತು ಅನ್ನಕ್ಕೂ ಪರದಾಡುವಂತ ಪರಿಸ್ಥಿತಿ ನಿರ್ಮಾಣವಾಗಿದೆ. ಇಂಥವರ ಸಹಾಯಕ್ಕಾಗಿ ಅದೆಷ್ಟೋ ಜನ ತಮ್ಮ ಕೈಲಾದ ಸಹಾಯ ಮಾಡುತ್ತಿದ್ದಾರೆ. ಈ ಮಧ್ಯೆ ಅಲ್ಲೊಬ್ಬ ಯುವಕ ತನ್ನ...

ಪ್ರಮುಖ ಸುದ್ದಿ

ಸುದ್ದಿಒನ್, ದಾವಣಗೆರೆ,(ಜೂನ್.15): ಜಿಲ್ಲೆಯಲ್ಲಿ ಕೋವಿಡ್-19 ವೈರಸ್‍ಗೆ ಸಂಬಂಧಿಸಿದಂತೆ ಮಂಗಳವಾರ ವರದಿಯಲ್ಲಿ 183 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 47668 ಕ್ಕೆ ಏರಿಕೆಯಾಗಿದೆ. ಇಂದು ಹೊಸದಾಗಿ ದಾವಣಗೆರೆ 69...

ಪ್ರಮುಖ ಸುದ್ದಿ

ಸುದ್ದಿಒನ್, ಚಿತ್ರದುರ್ಗ, (ಜೂ.15) : ನಗರದ ವಿ .ಪಿ. ಬಡಾವಣೆಯಲ್ಲಿ ಕನ್ಸರ್‍ವೆನ್ಸಿಗಳನ್ನು ಒತ್ತುವರಿ ಮಾಡಲಾಗಿದೆ ಇವುಗಳನ್ನು ತೆರವು ಮಾಡಿ ಎಂದು ಶಾಸಕ ಜಿ.ಎಚ್.ತಿಪ್ಪಾರೆಡ್ಡಿ ಪೌರಾಯುಕ್ತರಿಗೆ ದೂರವಾಣಿ ಮೂಲಕ ಸೂಚನೆ ನೀಡಿದರು. ನಗರದ ವಿ.ಪಿ.ಬಡಾವಣೆಯ...

ಪ್ರಮುಖ ಸುದ್ದಿ

ಆರೋಗ್ಯ ಇಲಾಖೆ ಹೆಲ್ತ್ ಬುಲೆಟಿನ್ ರಿಲೀಸ್ ಮಾಡಿದ್ದು, ಕಳೆದ 24 ಗಂಟರಯಲ್ಲಿ ರಾಜ್ಯದಲ್ಲಿ 5041ಹೊಸ ಪ್ರಕರಣ ಪತ್ತೆಯಾಗಿದ್ದಾರೆ. ಕೊರೊನಾ ಕಂಟ್ರೊಲ್ ಗೆ ಮಾಡಿದ್ದ ಲಾಕ್ಡೌನ್ ವರ್ಕ್ಔಟ್ ಆಗಿದೆ. 48428 ರ್ಯಾಪಿಡ್ ಆ್ಯಂಟಿಜೆನ್ ಟೆಸ್ಟ್,...

ಪ್ರಮುಖ ಸುದ್ದಿ

ಸುದ್ದಿಒನ್,ಬಳ್ಳಾರಿ, (ಜೂ.15) : ಬಳ್ಳಾರಿ-ವಿಜಯನಗರ ಜಿಲ್ಲೆಯಲ್ಲಿ ಇತ್ತೀಚಿನ ದಿನಗಳಲ್ಲಿ ಕೋವಿಡ್‍ ಸೋಂಕಿತರ ಸಂಖ್ಯೆ ಕಡಿಮೆಯಾಗುತ್ತಿದೆ. ಜಿಲ್ಲೆಯಲ್ಲಿ ಕೋವಿಡ್‍ನಿಂದ 339 ಜನ ಗುಣಮುಖರಾಗಿದ್ದು ದಿನದಿಂದ ದಿನಕ್ಕೆ ವಿವಿಧ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ....

ಪ್ರಮುಖ ಸುದ್ದಿ

ಚಿತ್ರದುರ್ಗ,(ಜೂನ್15): ಜಿಲ್ಲೆಯಲ್ಲಿ ಕೋವಿಡ್-19 ವೈರಸ್‍ಗೆ ಸಂಬಂಧಿಸಿದಂತೆ ಮಂಗಳವಾರದ ವರದಿಯಲ್ಲಿ 95 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 33,997ಕ್ಕೆ ಏರಿಕೆಯಾಗಿದೆ. ಚಿತ್ರದುರ್ಗ ತಾಲ್ಲೂಕಿನಲ್ಲಿ 16, ಚಳ್ಳಕೆರೆ 18, ಹಿರಿಯೂರು...

ಕ್ರೀಡೆ

ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ನಲ್ಲಿ ಗೆದ್ದವರಿಗೆ ಎಷ್ಟು ಮೊತ್ತ ಸಿಗಬಹುದು ಎಂಬ ಪ್ರಶ್ನೆ ಕ್ರಿಕೆಟ್ ಅಭಿಮಾನಿಗಳಿಗೆ ಯಾವಾಗಲೂ ಕಾಡುವಂತ ಪ್ರಶ್ನೆ. ಆ ಪ್ರಶ್ನೆಗೆ ಇಂದು ಐಸಿಸಿ ಉತ್ತರಿಸಿದೆ. ಟೆಸ್ಟ್ ಚಾಂಪಿಯನ್ ಶಿಪ್...

ಪ್ರಮುಖ ಸುದ್ದಿ

ಚಿತ್ರದುರ್ಗ, (ಜೂನ್.15) : ನಗರದ ಅಲೆಮಾರಿ, ಕೂಲಿ ಕಾರ್ಮಿಕರು, ಬಡವರು ಹಾಗೂ ನಿರ್ಗತಿಕರಿಗೆ ಭಾರತೀಯ ರೆಡ್ ಕ್ರಾಸ್ ಚಿತ್ರದುರ್ಗ ಜಿಲ್ಲಾ ಶಾಖೆ ವತಿಯಿಂದ ಅಗತ್ಯ ದಿನಸಿ ವಸ್ತುಗಳನ್ನು ವಿತರಿಸಲಾಯಿತು. ನಗರದ ಪತ್ರಿಕಾ ಭವನದ...

ಪ್ರಮುಖ ಸುದ್ದಿ

ನವದೆಹಲಿ : ಕೋವಿಡ್ ಸೋಂಕು ಇಳಿಮುಖವಾಗುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅಮೆರಿಕ ಭೇಟಿಗೆ ಸಿದ್ಧತೆಗಳು ನಡೆದಿವೆ. ವರ್ಷದ ಅಂತ್ಯದಲ್ಲಿ ಅಮೆರಿಕ ಪ್ರವಾಸ ಕೈಗೊಳ್ಳಬಹುದು ಎಂದು ಮೂಲಗಳು ತಿಳಿಸಿವೆ. ಆದರೆ ಪ್ರವಾಸದ ಸಮಯ...

error: Content is protected !!