ಬೆಂಗಳೂರು: ಕೊರೊನಾ ಮೂರನೇ ಅಲೆ ಎದುರಾಗಲ್ಲ ಅನ್ನೊ ಸಮಾಧಾನದಲ್ಲೇ ಎಲ್ಲರೂ ಜೀವನ ನಡೆಸ್ತಾ ಇದ್ರು. ಆದ್ರೀಗ ಕೊರೊನಾ ಹೆಚ್ಚಳವಾಗುತ್ತಿರುವ ಸೂಚನೆ ಕಂಡು ಬಂದಿದೆ. ಸೆಪ್ಟೆಂಬರ್ ಕೊನೆ ವಾರ ಅಥವಾ ಅಕ್ಟೋಬರ್ ಮೊದಲ ವಾರದಲ್ಲೇ ಕಂಡು ಬರಲಿದೆ ಎನ್ನಲಾಗ್ತಾ ಇತ್ತು. ಆ ಎರಡು ತಿಂಗಳನ್ನು ಕೊರೊನಾ ಹೆಚ್ಚಳವಿಲ್ಲದೆ ದಾಟಿದ್ದು, ನೆಮ್ಮದಿಗೆ ಕಾರಣವಾಗಿತ್ತು. ಆದ್ರೀಗ ಮತ್ತೆ ಏರಿಕೆಯಾಗ್ತಾ ಇರೋದು ಆತಂಕಕ್ಕೆ ಕಾರಣವಾಗಿದೆ.
ಸಿಲಿಕಾನ್ ಸಿಟಿ ಕಾಲೇಜೊಂದರಲ್ಲಿ ವಿದ್ಯಾರ್ಥಿಗಳಲ್ಲಿ ಕೊರೊನಾ ಕಂಡು ಬಂದಿದೆ. ಅದು ಬರೋಬ್ಬರಿ 12 ವಿದ್ಯಾರ್ಥಿಗಳಲ್ಲಿ. ಆನೇಕಲ್ ನಲ್ಲಿರುವ ಮರಸೂರು ಸ್ಪೂರ್ತಿ ಕಾಲೇಜಿನಲ್ಲಿ ಕೊರೊನಾ ಸ್ಪೋಟಗೊಂಡಿದೆ. ಈ ಎಲ್ಲರೂ ಮೊದಲ ವರ್ಷದ ಡಿಗ್ರಿ ಓದುತ್ತಿರುವ ವಿದ್ಯಾರ್ಥಿಗಳಾಗಿದ್ದಾರೆ.
ಆ 12 ಮಂದಿಯಲ್ಲಿ 11 ಮಂದಿ ಈಗಾಗಲೇ ಲಸಿಕೆಯನ್ನು ಪಡೆದುಕೊಂಡಿದ್ದಾರೆ. ಆದ್ರೆ ಕೊರೊನಾ ಕಾಣಿಸಿಕೊಂಡಿದ್ದ ಒಬ್ಬರು ಮಾತ್ರ ಲಸಿಕೆ ಪಡೆದಿರಲಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ. ಕಾಲೇಜಿನಲ್ಲಿ ಸೋಂಕು ಕಾಣಿಸಿಕೊಂಡ ಹಿನ್ನೆಲೆ 134 ವಿದ್ಯಾರ್ಥಿಗಳಿಗೆ ಕೊರೊನಾ ಟೆಸ್ಟ್ ಮಾಡಲಾಗಿದೆ. ಅದರಲ್ಲಿ 12 ವಿದ್ಯಾರ್ಥಿಗಳಲ್ಲಿ ಕೊರೊನಾ ದೃಢಪಟ್ಟಿದೆ.