ಕೊರೊನಾ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚಳವಾಗ್ತಾನೆ ಇದೆ. ಜನ ಆತಂಕದಲ್ಲೇ ಬದುಕುತ್ತಿದ್ದಾರೆ. ಇದೀಗ ಕೇರಳದಲ್ಲಿ ಕೊರೊನಾ ಹೊಡೆತಕ್ಕೆ ಸಿಲುಕಿ ಶಾಲೆಗಳನ್ನ ಕ್ಲೋಸ್ ಮಾಡಲಾಗಿದೆ.
ಕೇರಳ ಜನ ಕಳೆದ ಮೊದಲ ಮತ್ತು ಎರಡನೇ ಅಲೆಯಲ್ಲಿ ಸಾಕಷ್ಟು ಸಂಕಷ್ಟ ಅನುಭವಿಸಿದೆ. ಇದೀಗ ಮೂರನೇ ಅಲೆಯ ಬಗ್ಗೆ ಅಲರ್ಟ್ ಆಗಿದ್ದು, ಮುಂಜಾಗ್ರತ ಕ್ರಮ ಕೈಗೊಂಡಿದೆ. ಮುಂದಿನ 2-3 ವಾರಗಳಲ್ಲಿ ವೈರಸ್ ಹೆಚ್ಚಾಗುವ ಸಾಧ್ಯತೆ ಇದೆ. ಹೀಗಾಗಿ ಕೇರಳದಲ್ಲಿ ಮುಂದಿನ 2 ವಾರಗಳ ಕಾಲ 1. ರಿಂದ 9ನೇ ತರಗತಿಯವರೆಗೆ ಶಾಲೆಗಳನ್ನ ಬಂದ್ ಮಾಡಲಾಗಿದೆ ಎಂದು ಆರೋಗ್ಯ ಸಚಿವೆ ವೀಣಾ ಜಾರ್ಜ್ ತಿಳಿಸಿದ್ದಾರೆ.