ನವದೆಹಲಿ : ಕೇಂದ್ರ ಕುಟುಂಬ ಕಲ್ಯಾಣ ಮತ್ತು ಆರೋಗ್ಯ ಸಚಿವಾಲಯ ಕೊರೋನಾ ಕುರಿತ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು ಕಳೆದ 24 ಗಂಟೆಗಳಲ್ಲಿ 41,810 ಜನರಿಗೆ ಕೊರೋನಾ ಪಾಸಿಟಿವ್ ಬಂದಿದ್ದು ದೇಶದಲ್ಲಿನ ಸಕ್ರಿಯ ಪ್ರಕರಣಗಳ ಸಂಖ್ಯೆ 4,53,956ಕ್ಕೆ ಏರಿಕೆಯಾಗಿದೆ ಎಂದು ತಿಳಿಸಿದೆ.ಇನ್ನು ಇದುವರೆಗೂ ಕೋವಿಡ್ 19 ಮಹಾಮಾರಿಯಿಂದ 1,36,696 ಜನರು ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಇಲಾಖೆ ತನ್ನ ಹೆಲ್ತ್ ಬುಲೆಟಿನ್ ನಲ್ಲಿ ತಿಳಿಸಿದೆ.
ದೇಶದಾದ್ಯಂತ ಕಳೆದ 24 ಗಂಟೆಗಳಲ್ಲಿ 41,810 ಹೊಸ ಕೊರೋನಾ ಪ್ರಕರಣಗಳು ದಾಖಲಾಗಿದ್ದು 496 ಮಂದಿ ಮೃತಪಟ್ಟಿರುವುದಾಗಿ ವರದಿಯಾಗಿದೆ. ಇದರೊಂದಿಗೆ ದೇಶದಲ್ಲಿ ಒಟ್ಟಾರೆ ಕೋವಿಡ್ 19 ಪ್ರಕರಣಗಳ ಸಂಖ್ಯೆ 93,92,920ಕ್ಕೆ ಏರಿಕೆಯಾಗಿದೆ.
ಭಾರತದಲ್ಲಿ ಇದುವರೆಗೆ 13,95,03,803 ಸ್ಯಾಂಪಲ್ ಗಳ ಕೋವಿಡ್ ಪರೀಕ್ಷೆಗಳನ್ನು ನಡೆಸಲಾಗಿದೆ. ಶನಿವಾರ 12,83,449 ಮಾದರಿಗಳ ಪರೀಕ್ಷೆ ನಡೆಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.
ಕಳೆದ 24 ಗಂಟೆಯಲ್ಲಿ 42,298 ಜನರು ಡಿಸ್ಚಾರ್ಜ್ ಆಗಿದ್ದು ಇಲ್ಲಿಯ ತನಕ ಡಿಸ್ಚಾರ್ಜ್ ಆದವರ ಸಂಖ್ಯೆ 88,02,267.ಕರ್ನಾಟಕ ರಾಜ್ಯ ಒಟ್ಟು ಸೋಂಕಿತರ ಸಂಖ್ಯೆಯಲ್ಲಿ 2ನೇ ಸ್ಥಾನದಲ್ಲಿದೆ. ರಾಜ್ಯದಲ್ಲಿ ಶನಿವಾರ 1522 ಹೊಸ ಪ್ರಕರಣಗಳು ದಾಖಲಾಗಿವೆ. ಒಟ್ಟು ಸೋಂಕಿತರ ಸಂಖ್ಯೆ 8,82,608ಕ್ಕೆ ಏರಿಕೆಯಾಗಿದೆ.
