Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಪ್ರೀತಿ ನಿರಾಕರಿಸಿದ್ದಕ್ಕೆ ಕಾರ್ಪೋರೇಟರ್ ಪುತ್ರಿಯನ್ನೇ ಚಾಕುವಿನಿಂದ ಇರಿದು ಕೊಲೆ : ಬೆಚ್ಚಿ ಬಿದ್ದ ಹುಬ್ಬಳ್ಳಿ-ಧಾರವಾಡ ಮಂದಿ

---Advertisement---

ಹುಬ್ಬಳ್ಳಿ: ಪ್ರೀತಿ ಮಾಡಲು ನಿರಾಕರಿಸಿದ್ದಕ್ಕೆ ಕಾರ್ಪೋರೇಟರ್ ಮಗಳನ್ನೇ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಹುಬ್ಬಳ್ಳಿ ನಗರದಲ್ಲಿ ನಡೆದಿದೆ. ನೇಹಾ ಬರ್ಬರವಾಗಿ ಕೊಲೆಯಾದ ಯುವತಿ. ಫಯಾಜ್ ಕೊಲೆ ಮಾಡಿದಾತ. ನೇಹಾ, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಸದಸ್ಯ ನಿರಂಜನ ಹಿರೇಮಠ ಅವರ ಪುತ್ರಿ. ಕಾಲೇಜು ಓದುತ್ತಿದ್ದಾಕೆ ಇಂದು ಪ್ರಾಣ ಕಳೆದುಕೊಂಡಿದ್ದಾರೆ. ಬಿವಿಬಿ ಕಾಲೇಜಿನಲ್ಲಿ ನಡೆದ ಘಟನೆಗೆ ಹುಬ್ಬಳ್ಳಿ-ಧಾರವಾಡ ಮಂದಿ ಬೆಚ್ಚಿ ಬಿದ್ದಿದ್ದಾರೆ.

 

ನೇಹಾ ಬಿವಿಬಿ ಕಾಲೇಜಿನಲ್ಲಿ ಎಂಎಸ್ಸಿ‌ ಓದುತ್ತಿದ್ದರು. ಅದೇ ಕಾಲೇಜಿನಲ್ಲಿ ಓದುತ್ತಿದ್ದ ಆರೋಪಿ ಫಯಾಜ್ ಪ್ರೀತೊಸುವಂತೆ ಪೀಡಿಸಿದ್ದಾನೆ. ಆದರೆ ನೇಹಾ ಪ್ರೀತಿಯನ್ನು ನಿರಾಕರಣೆ ಮಾಡಿದ್ದಾಳೆ. ಕಳೆದ ಕೆಲವು ದಿನಗಳಿಂದಾನೂ ನೇಹಾ ಹಿಂದೆ ಬಿದ್ದಿದ್ದ ಫಯಾಜ್,‌ ಪ್ರೀತಿ ಮಾಡುವಂತೆ ಕೇಳಿದ್ದಾನೆ. ಆದರೆ ನೇಹಾ ಅದಕ್ಕೆ ಒಪ್ಪಿಲ್ಲ. ಇದರಿಂದ ಕೋಪಗೊಂಡ ಫಯಾಜ್ ಚಾಕು ಇರಿದು ಕೊಲೆ ಮಾಡಿದ್ದಾನೆ. ಗುತ್ತಿಗೆಯ ಭಾಗದಲ್ಲಿ ಎರಡು ಕಡೆ ಚಾಕು ಇರಿದಿದ್ದಾನೆ.

 

ವಿಷಯ ತಿಳಿಯುತ್ತಿದ್ದಂತೆಯೇ ಘಟನಾ ಸ್ಥಳಕ್ಕೆ ಶಾಸಕ ಪ್ರಸಾದ್ ಅಬ್ಬಯ್ಯ ಭೇಟಿ ನೀಡಿ ಪರಿಶೀಲಿಸಿದರು. ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಈಗಾಗಲೇ ಕೊಲೆ ಮಾಡಿರುವ ಆರೋಪಿಯನ್ನ ಬಂಧನ ಮಾಡಲಾಗಿದೆ. ನಿರಂಜನ ಹಿರಮೇಠ ನಮ್ಮ ಪಕ್ಷದ ಪಾಲಿಕೆ ಸದಸ್ಯರು. ಬಹಳ ಒಳ್ಳೆಯ ಹುಡಗಿ,ಯಾವಾಗಲೂ ಅಂಕಲ್ ಎಂದು ಕರೆಯುತ್ತಿದ್ದಳು. ಹುಬ್ಬಳ್ಳಿಯಲ್ಲಿ ಹೀಗಾಗಬಾರದಿತ್ತು ಎಂದರು. ಮಗಳನ್ನು ಕಳೆದುಕೊಂಡ ಪೋಷಕರು ದುಃಖದಲ್ಲಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

Leave a Comment