Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ತಪ್ಪುಗಳನ್ನು ಸರಿಪಡಿಸಿ ಜಾತಿಗಣತಿ ಮಾಡಲಿ, ಇಲ್ಲವಾದರೆ ನ್ಯಾಯಾಲಯದ ಮೊರೆ : ಸಿದ್ದರಾಮೇಶ್ವರ ಸ್ವಾಮೀಜಿ ಎಚ್ಚರಿಕೆ

---Advertisement---

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ. ಮೇ. 01 : ರಾಜ್ಯ ಸರ್ಕಾರ ಒಳ ಮೀಸಲಾತಿಯನ್ನು ಜಾರಿ ಮಾಡುವ ನಿಟ್ಟಿನಲ್ಲಿ ದತ್ತಾಂಶ ಸರಿಯಿಲ್ಲ ಹಿನ್ನಲೆಯಲ್ಲಿ ಈಗ ಜಾತಿ ಗಣತಿಯನ್ನು ನಡೆಸಲು ಮುಂದಾಗಿದೆ. ಆದರೆ ಇದರಲ್ಲಿ ಭೋವಿ ಸಮುದಾಯಕ್ಕೆ ಸಂಬಂಧಪಟ್ಟಂತೆ ಕುಲ ಕಸುಬುಗಳನ್ನು ಸರಿಯಾದ ರೀತಿಯಲ್ಲಿ ನಮೂದು ಮಾಡಿಲ್ಲ. ಇದನ್ನು ಸರಿಪಡಿಸಿ ಜಾತಿಗಣತಿಗೆ ಸರ್ಕಾರ ಮುಂದಾಗಬೇಕು. ಇಲ್ಲವಾದರೆ ನ್ಯಾಯಾಲಯದ ಮೊರೆ ಹೋಗುವುದಾಗಿ ಭೋವಿ ಗುರುಪೀಠದ ಇಮ್ಮಡಿ ಸಿದ್ದರಾಮೇಶ್ವರ ಶ್ರೀಗಳು ಸರ್ಕಾರಕ್ಕೆ ಎಚ್ಚರಿಕೆಯನ್ನು ನೀಡಿದ್ದಾರೆ.

ನಗರದ ಭೋವಿ ಗುರುಪೀಠದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಶ್ರೀಗಳು, ಉಚ್ಚ ನ್ಯಾಯಾಲಯ ಒಳ ಮೀಸಲಾತಿಯನ್ನು ಜಾರಿ ಮಾಡಲು ಆಯಾ ರಾಜ್ಯ ಸರ್ಕಾರಗಳಿಗೆ ಅಧಿಕಾರವನ್ನು ನೀಡಿದೆ. ಆದರೆ ಇದನ್ನು ಜಾರಿ ಮಾಡಲು ಸರಿಯಾದ ದತ್ತಾಂಶವನ್ನು ಹೊಂದಿರಬೇಕು ಎಂದು ಸೂಚನೆಯನ್ನು ನೀಡಿದೆ. ಇದರ ಆನ್ವಯ ಸರ್ಕಾರ ಈಗ ಜಾತಿ ಗಣತಿಯನ್ನು ಮಾಡಲು ಮುಂದಾಗಿದೆ. ಆದರೆ ನಮ್ಮ ಭೋವಿ ಸಮುದಾಯಕ್ಕೆ ಸಂಬಂಧಪಟ್ಟಂತೆ ಕೇವಲ ಮೂರು ಕುಲ ಕಸಬುಗಳನ್ನು ಮಾತ್ರವೇ ನಮೂದು ಮಾಡಲಾಗಿದೆ. ಆದರೆ ನಮ್ಮಲ್ಲಿ ಕಲ್ಲು ಒಡೆಯುವವರು, ಕೆರೆಗಳನ್ನು ಕಟ್ಟುವವರು, ಕಟ್ಟಡವನ್ನು ನಿರ್ಮಾಣ ಮಾಡುವವರು, ಭಾವಿಗಳನ್ನು ನಿರ್ಮಾಣ ಮಾಡುವವರು ಈ ರೀತಿಯಾಗಿ ವಿವಿಧ ಕಸಬುಗಳನ್ನು ಮಾಡುವವರು ಇದ್ದಾರೆ. ಆದರೆ ಜಾತಿಗಣತಿಯಲ್ಲಿ ಇದಾವುದನ್ನು ನಮೂದು ಮಾಡಿಲ್ಲ ಎಂದು ಆರೋಪಿಸಿದರು.

ಸರ್ಕಾರ ಜಾತಿಗಣತಿಯನ್ನು ಕೇವಲ ಒಂದು ಜಾತಿಗೆ ಮಾತ್ರ ಮಾಡುವುದಾದರೇ ಇದನ್ನು ಮುಂದುವರೆಸಬಹುದು. ಆದರೆ ಪರಿಶಿಷ್ಟ ಜಾತಿಯಲ್ಲಿನ 101 ಜಾತಿಗಳ ಸಮೀಕ್ಷೆಯನ್ನು ಮಾಡುವುದಾದರೆ ನಮ್ಮ ಭೋವಿ ಸಮುದಾಯಕ್ಕೆ ಸಂಬಂಧಪಟ್ಟಂತೆ ಸರ್ಕಾರದಲ್ಲಿ ಆಗಿರುವ ತಪ್ಪನ್ನು ಸರಿಪಡಿಸಿ ಜಾತಿ ಗಣತಿಯನ್ನು ನಡೆಸಬೇಕಿದೆ. ಇಲ್ಲವಾದಲ್ಲಿ ಭೋವಿ ಸಮಾಜಕ್ಕೆ ಅನ್ಯಾಯವಾಗುತ್ತದೆ, ಮುಂದಿನ ದಿನದಲ್ಲಿ ಸರ್ಕಾರ ಯಾವುದಾದರೂ ಯೋಜನೆಗಳನ್ನು ರೂಪಿಸಬೇಕಾದರೆ ಈ ದತ್ತಾಂಶ ಅಗತ್ಯವಾಗಿದೆ. ಈ ಹಿನ್ನಲೆಯಲ್ಲಿ ಸರಿಯಾದ ರೀತಿಯಲ್ಲಿ ಜಾತಿಗಣತಿಯನ್ನು ಮಾಡಬೇಕಿದೆ ಎಂದು ಸರ್ಕಾರವನ್ನು ಆಗ್ರಹಿಸಿದ ಶ್ರೀಗಳು, ಸರ್ಕಾರ ನಮ್ಮ ಮನವಿಯನ್ನು ಪರಿಗಣಿಸದೇ ಜಾತಿಗಣತಿಯನ್ನು ಪ್ರಾರಂಭ ಮಾಡಿದರೆ ಇದರ ವಿರುದ್ದ ನಾವುಗಳು ನ್ಯಾಯಕ್ಕಾಗಿ ನ್ಯಾಯಾಲಯದ ಮೊರೆ ಹೋಗಬೇಕಾಗುತ್ತದೆ. ಇದಕ್ಕೆ ಸರ್ಕಾರ ಅವಕಾಶವನ್ನು ನೀಡದೆ ಅಗಿರುವ ತಪ್ಪನ್ನು ಸರಿಪಡಿಸಿ ಇದರ ಬಗ್ಗೆ ಜಾತಿಗಣತಿದಾರರಿಗೆ ಸರಿಯಾದ ಮಾಹಿತಿಯನ್ನು ಸೂಕ್ತವಾದ ರೀತಿಯಲ್ಲಿ ಜಾತಿಗಣತಿಯನ್ನು ಮಾಡಿಸುವಂತೆ ಸರ್ಕಾರವನ್ನು ಭೋವಿ ಗುರುಪೀಠದ ಇಮ್ಮಡಿ ಸಿದ್ದರಾಮೇಶ್ವರ ಶ್ರೀಗಳು ಒತ್ತಾಯಿಸಿದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...