Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಡಿಜಟಲೀಕರಣದಿಂದ ಭ್ರಷ್ಟಾಚಾರ ಮುಕ್ತ ಆಡಳಿತ : ಕೇಂದ್ರ ಸಚಿವ ಎ.ನಾರಾಯಣಸ್ವಾಮಿ

Facebook
Twitter
Telegram
WhatsApp

ಚಿತ್ರದುರ್ಗ,(ಏ.18): ಡಿಜಟಲೀಕರಣದಿಂದ ಭ್ರಷ್ಟಾಚಾರ ಮುಕ್ತ ಆಡಳಿತ ನೀಡಲು ಸಾಧ್ಯವಿದೆ ಎಂದು ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವ ಎ.ನಾರಾಯಣ ಸ್ವಾಮಿ ಹೇಳಿದರು.

ನಗರದ ಮುರುಘಾ ರಾಜೇಂದ್ರ ಮಠದ ಅನುಭವ ಮಂಟಪದಲ್ಲಿ ಸೋಮವಾರ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಹಿಂದುಳಿದ  ವರ್ಗಗಳ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಪಂಚಾಯತ್ ರಾಜ್ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳಿಗೆ ಅಂತ್ಯೋದಯ-ವಿವಿಧ ಯೋಜನೆಗಳ ರಾಜ್ಯ  ಮಟ್ಟದ ಮಾಹಿತಿ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.

ಭ್ರಷ್ಟಾಚಾರ ನಿರ್ಮೂಲನೆ ಮಾಡಲು ಹಾಗೂ ಸಾರ್ವಜನಿಕರು ಸರ್ಕಾರಿ ಕಚೇರಿಗೆ ಅಲೆದಾಡುವುದನ್ನು ತಪ್ಪಿಸಲು 100ಕ್ಕೂ ಹೆಚ್ಚು ಯೋಜನೆಗಳನ್ನು ಡಿಜಟಲೀಕರಣ ಮಾಡಲಾಗಿದೆ. ಈ ದೇಶದಲ್ಲಿ ಭ್ರಷ್ಟಾಚಾರ ಮುಕ್ತ ಆಡಳಿತ ಮಾಡಲು ಡಿಜಿಟಲೈಜ್ ಆಡಳಿತವನ್ನು ಜಾರಿಗೊಳಿಸಲಾಗಿದೆ ಎಂದರು.

ಜನನ ಪ್ರಮಾಣ ಪತ್ರ, ಜಾತಿ ಪ್ರಮಾಣ ಪತ್ರ, ಮರಣ ಪ್ರಮಾಣ ಪತ್ರ, ಕಂದಾಯ ಇಲಾಖೆಗೆ ಸಂಬಂಧಪಟ್ಟಂತಹ ಪಹಣಿ, ಭೂ ದಾಖಲೆಗಳನ್ನು ಜನಸಾಮಾನ್ಯರ ಮನೆ ಬಾಗಿಲಿಗೆ ಕಲ್ಪಿಸುವಂತಹ ವ್ಯವಸ್ಥೆ ಮಾಡಲಾಗಿದೆ. ಇಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರ ಮೂಲಕ ನಮ್ಮ- ನಿಮ್ಮ ಕರ್ತವ್ಯಗಳೇನು ಎಂಬುದನ್ನು ತಿಳಿದುಕೊಳ್ಳಲು ಸಹಕಾರಿಯಾಗಿದೆ ಎಂದರು.

ದೇಶದ ಪ್ರಧಾನಿಗಳ ಆಪೇಕ್ಷೆಯಂತೆ, ದೇಶದ ಮುನ್ನಡೆಗಾಗಿ ಆತ್ಮನಿರ್ಭರ, ಸ್ವಾಭಿಮಾನಿ ಭಾರತ ನಿರ್ಮಾಣ ಮಾಡಬೇಕು. ಸರ್ವರ ಏಳಿಗೆ, ಅಭ್ಯುದಯ, ಎಲ್ಲರ ವಿಶ್ವಾಸದೊಂದಿಗೆ ಎಲ್ಲ ಧರ್ಮದ, ವರ್ಗದ, ಎಲ್ಲ ಜಾತಿಯ ಜನಾಂಗದವರಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳು ಯಾವುದೇ ಸಮಸ್ಯೆಗಳಿಲ್ಲದೇ ಜನಸಾಮಾನ್ಯರ ಮನೆಬಾಗಿಲಿಗೆ ಸೌಲಭ್ಯ ತಲುಪುವಂತಾಗಬೇಕು ಎಂಬ ಉದ್ದೇಶದಿಂದ ಅಂತ್ಯೋದಯ ಕಾರ್ಯಕ್ರಮ ಆಯೋಜಿಸಿ ಪಂಚಾಯತ್ ರಾಜ್ ಜನಪ್ರತಿನಿಧಿಗಳಿಗೆ ಸರ್ಕಾರದ ಯೋಜನೆಗಳ ಕುರಿತು ಮಾಹಿತಿ ನೀಡುತ್ತಿರುವುದು ಶ್ಲಾಘನೀಯ ಸಂಗತಿ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಕೇಂದ್ರ ಮತ್ತು ರಾಜ್ಯದ ಸರ್ಕಾರದ ಎಸ್.ಸಿ.ಪಿ ಮತ್ತು ಟಿಎಸ್‍ಪಿ ಅನುದಾನ ಸಾವಿರ ಕೋಟಿ ಹಣ ರಾಜ್ಯದ ಎಲ್ಲ ಇಲಾಖೆಗಳಿಗೂ ಹಂಚಿಕೆಯಾಗಿರುತ್ತದೆ. ಪರಿಶಿಷ್ಟ ಕಲ್ಯಾಣಕ್ಕಾಗಿ ರೂಪಿಸಿರುವ ಇಂತಹ ಯೋಜನೆಗಳ ಪರಿಚಯ, ಪರಿಣಾಮ, ಅನುಷ್ಠಾನದ ಕುರಿತು ಈ ಕಾರ್ಯಾಗಾರದಲ್ಲಿ ಮುಕ್ತವಾಗಿ ಚರ್ಚೆಯಾಗಬೇಕಿದೆ. ಈ ಯೋಜನೆಗಳ ಪರಿಣಾಮಕಾರಿ ಅನುಷ್ಠಾನದಲ್ಲಿ ಅಧಿಕಾರಿಗಳ ಪಾತ್ರ ಬಹಳ ಮುಖ್ಯವಾಗಿದೆ ಎಂದರು.

ವಿದ್ಯಾರ್ಥಿಗಳು ಈ ದೇಶದಿಂದ ಬೇರೆ ದೇಶಕ್ಕೆ ಹೋಗಿ ಶಿಕ್ಷಣ ಪಡೆಯಲು ರೂ. 2 ಕೋಟಿ ರೂಪಾಯಿಗಳನ್ನು ನೀಡಲಾಗುತ್ತದೆ. ಆದರೆ ಇದರ ಬಗ್ಗೆ ಯಾರಿಗೂ ಮಾಹಿತಿ ಇಲ್ಲ.  ಉತ್ತಮ ನಾಗರಿಕ ಸಮಾಜ ಹಾಗೂ ದೇಶ ಕಟ್ಟಬೇಕಾದರೆ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಬೆಳವಣಿಗೆ ಆದಾಗ ಮಾತ್ರ ಅದು ಸಾಧ್ಯ ಎಂದರು.ಇಂತಹ ಕಾರ್ಯಕ್ರಮಗಳನ್ನು ಪ್ರತಿಯೊಂದು ಜಿಲ್ಲೆಯಲ್ಲೂ ಸಹ ಮಾಡಬೇಕು. ಪ್ರತಿಯೊಬ್ಬ ಬಡವ, ದಲಿತ, ಹಿಂದುಳಿದ, ಅಲ್ಪಸಂಖ್ಯಾತರ ಮನೆ ಬಾಗಿಲಿಗೆ ತಲುಪಿದಾಗ ಮಾತ್ರ ಜನ ಮೆಚ್ಚುವ ಕಾರ್ಯಕ್ರಮವಾಗುತ್ತವೆ. ಪ್ರತಿಯೊಬ್ಬ ಗ್ರಾಮ ಪಂಚಾಯಿತಿ ಸದಸ್ಯನಿಗೂ ತನ್ನ ಗ್ರಾಮಗಳ ಸಮಸ್ಯೆಗಳ ಬಗ್ಗೆ ಕೇಂದ್ರ ಮತ್ತು ರಾಜ್ಯ ನಾಯಕರ ಗಮನ ಸೆಳೆಯುವಂತಹ ಅಧಿಕಾರ ಇದೆ ಎಂದು ತಿಳಿಸಿದರು.

ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖಾ ಸಚಿವ ಕೋಟ ಶ್ರೀನಿವಾಸ  ಪೂಜಾರಿ ಮಾತನಾಡಿ, ಸಮಾಜದ ಅಂತ್ಯದಲ್ಲಿರುವ ಬಡವರ ಬದುಕಿಗೆ ಉದಯ ಮಾಡಬೇಕು ಎಂಬುದು ಅಂತ್ಯೋದಯದ ಉದ್ದೇಶವಾಗಿದೆ. ಸಮಾಜ ಕಟ್ಟಕಡೆಯ ಕಡುಬಡವರಿಗೆ ಬದುಕು ಕಟ್ಟಿಕೊಳ್ಳುವ ಭಾಗವಾಗಿ ಅಂತ್ಯೋದಯ ಕಾರ್ಯಕ್ರಮ ಇರಬೇಕಿದೆ. ಸರ್ಕಾರದ ಸೌಲಭ್ಯಗಳು ಜನಸಾಮಾನ್ಯರಿಗೆ, ಬಡವರಿಗೆ ಮೊದಲು ತಲುಪಬೇಕು ಎಂದರು.

ಸರ್ಕಾರದ ಯೋಜನೆಗಳ ಬಗ್ಗೆ ಬಡವರಿಗೆ ಜನಪ್ರತಿನಿಧಿಗಳು ಮಾಹಿತಿ ನೀಡಿ, ಸೌಲಭ್ಯ ತಲುಪಿಸಲು ಜನಸಾಮಾನ್ಯರಿಗೆ ನೆರವಾಗುವ ಉದ್ದೇಶದಿಂದ ಜನಪ್ರತಿನಿಧಿಗಳಿಗೆ ಅಂತ್ಯೋದಯ ಕಾರ್ಯಗಾರವನ್ನು ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಆಯೋಜಿಸಲಾಗುತ್ತಿದೆ ಎಂದರು.

ಗ್ರಾಮ ಪಂಚಾಯಿತಿ ಸದಸ್ಯರಿಗೆ ಗ್ರಾಮಸ್ಥರ ಸಂಪೂರ್ಣ ವಿವರ, ಅವರ ಸಮಸ್ಯೆಗಳ ಅರಿವು ಇರುತ್ತದೆ.  ಈ ಹಿನ್ನಲೆಯಲ್ಲಿ ಪಂಚಾಯಿತಿ ಸದಸ್ಯರಿಗೆ ಸರ್ಕಾರದ ಯೋಜನೆಗಳ ಮಾಹಿತಿ ಒದಗಿಸುವುದರಿಂದ ಸರ್ಕಾರದ ಯೋಜನೆಗಳನ್ನು ಬಡವರಿಗೆ ತಲುಪಿಸಲು ಸಾಧ್ಯವಾಗಲಿದೆ ಎಂದು ಅಭಿಪ್ರಾಯವ್ಯಕ್ತಪಡಿಸಿದರು.

ಅಂತ್ಯೋದಯ ಕಾರ್ಯಾಗಾರದ ಮೂಲಕ ಹೊಸ ಚಿಂತನೆಗಳು ನಿಮ್ಮಲ್ಲಿ ಮೂಡಬೇಕು.  ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಸೇರಿದಂತೆ ಕಡುಬಡವರಿಗೆ ಸರ್ಕಾರದ ಯೋಜನೆಗಳ ತಲುಪಿಸಿ, ಯೋಜನೆಗಳ ಅನುಷ್ಠಾನದಲ್ಲಿ ಜನಪ್ರತಿನಿಧಿಗಳು ಭಾಗಿಯಾದರೆ ಇಲಾಖೆ ಶ್ರಮ ಸಾರ್ಥಕವಾಗಲಿದೆ ಎಂದು ಹೇಳಿದರು.

ಅಸ್ಪೃಶ್ಯತೆ ಹೋಗಲಾಡಿಸಲು ಕೈಜೋಡಿಸಿ: “ವಿನಯ ಸಾಮರಸ್ಯ” ಎಂಬ ಯೋಜನೆ ಮೂಲಕ  ಸಮಾಜದಲ್ಲಿನ ಅಸ್ಪøಶ್ಯತೆಯನ್ನು ಹೋಗಲಾಡಿಸಲು ಪ್ರಯತ್ನಿಸಲಾಗುತ್ತಿದೆ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ಈ ಯೋಜನೆಯ ಮೂಲಕ ಸಮಾಜದ ಕಟ್ಟಕಡೆಯ ಮನುಷ್ಯನ ಮಧ್ಯೆ ಸಾಮಾಜಿಕ ಕ್ರಾಂತಿ ಮತ್ತು ಜನಜಾಗೃತಿ ಉಂಟು ಮಾಡುವ ಉದ್ದೇಶ ಹೊಂದಲಾಗಿದೆ. ಸಾಧು ಸಂತರು, ರಾಜ್ಯದ ಎಲ್ಲ ಜನಪ್ರತಿನಿಧಿಗಳು ಕೂಡ ಅಸ್ಪøಶ್ಯತೆ ನಿವಾರಣೆಗೆ ಕೈಜೋಡಿಸಬೇಕು ಎಂದರು.

ಕೃಷಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ.ಪಾಟೀಲ್ ಮಾತನಾಡಿ, ಗ್ರಾಮ ಪಂಚಾಯಿತಿ, ಪುರಸಭೆ, ಪಟ್ಟಣ ಪಂಚಾಯಿತಿಗಳಲ್ಲಿ ತಮ್ಮದೇ ಆದಂತಹ ಸರ್ಕಾರವನ್ನು ರಚಿಸಿಕೊಂಡು ನಿಮ್ಮ ಮಟ್ಟದಲ್ಲಿ ನಿಮ್ಮ ಕಾರ್ಯಕ್ರಮಗಳನ್ನು ಮಾಡುವ ಅಧಿಕಾರವನ್ನು ಸರ್ಕಾರ ನೀಡಿದೆ. ಈ ಕಾರ್ಯಗಾರದಲ್ಲಿ ಸರ್ಕಾರದ ಯೋಜನೆಗಳನ್ನು ತಿಳಿದುಕೊಳ್ಳಬೇಕು. ಪಂಚಾಯತ್ ರಾಜ್ ಕಾಯ್ದೆ ಕುರಿತು ಜನಪ್ರತಿನಿಧಿಗಳು ತಿಳಿದುಕೊಳ್ಳಬೇಕು ಎಂದು ಹೇಳಿದರು. ಕೃಷಿ ಇಲಾಖೆಯ ಎಲ್ಲ ಯೋಜನೆಗಳ ಕುರಿತು ಸಂಪೂರ್ಣವಾಗಿ ಸಚಿವರು ವಿವರಿಸಿದರು.

ವಿಧಾನಪರಿಷತ್ ಸದಸ್ಯ ರವಿಕುಮಾರ್ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಮೂಲಭೂತ ಸೌಲಭ್ಯಗಳು ಬಡವರಿಗೆ, ಹಿಂದುಳಿದ ವರ್ಗದವರಿಗೆ, ಪರಿಶಿಷ್ಟ ವರ್ಗ, ಪರಿಶಿಷ್ಟ ಜಾತಿಯವರಿಗೆ ಸೌಲಭ್ಯಗಳು ದೊರೆಯುತ್ತಿವೆ. ಗ್ರಾಮಗಳ ಉದ್ದಾರದಿಂದ ಮಾತ್ರ ದೇಶ ಅಭಿವೃದ್ಧಿಯಾಗಲು ಸಾಧ್ಯವಿದೆ ಎಂದರು.

ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ, ಗೂಳಿಹಟ್ಟಿ ಡಿ.ಶೇಖರ್, ವಿಧಾನ ಪರಿಷತ್ ಸದಸ್ಯ ಕೆ.ಎಸ್.ನವೀನ್ ಮಾತನಾಡಿದರು.

ಈ ಸಂದರ್ಭದಲ್ಲಿ ಅಂಬೇಡ್ಕರ್, ವಾಲ್ಮೀಕಿ ಮತ್ತು ಡಿ.ದೇವರಾಜ ಅರಸು ಅವರ ಭಾವಚಿತ್ರಕ್ಕೆ ಗಣ್ಯರು ಪುಷ್ಪ ನಮನ ಸಲ್ಲಿಸಿದರು. ವಿವಿಧ ಅಭಿವೃದ್ಧಿ ನಿಗಮಗಳ ಫಲಾನುಭವಿಗಳಿಗೆ ಸಾಲಸೌಲಭ್ಯದ ಚೆಕ್ ವಿತರಿಸಲಾಯಿತು.

ಅಂತ್ಯೋದಯ ಕಾರ್ಯಾಗಾರದ ಅಂಗವಾಗಿ ಅಂಬೇಡ್ಕರ್ ಅಭಿವೃದ್ಧಿ ನಿಗಮ, ಮಹರ್ಷಿ ವಾಲ್ಮಿಕಿಅಭಿವೃದ್ಧಿ ನಿಗಮ, ಡಿ.ದೇವರಾಜು ಅಭಿವೃದ್ಧಿ ನಿಗಮ, ಸಮಾಜ ಕಲ್ಯಾಣ ಇಲಾಖೆ, ಡಾ.ಬಾಬು ಜಗಜೀವನರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಜಿಲ್ಲಾ ಪಂಚಾಯತ್, ಅರಣ್ಯ ಇಲಾಖೆ, ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆ, ಮೀನುಗಾರಿಕೆ ಇಲಾಖೆ ಸೇರಿದಂತೆ ವಿವಿಧ ಇಲಾಖೆಯ ಸರ್ಕಾರದ ಯೋಜನೆಗಳ ಕುರಿತು 40ಕ್ಕೂ ಹೆಚ್ಚು ಮಳಿಗೆಗಳನ್ನು ತೆರೆದು ಸರ್ಕಾರ ಯೋಜನೆಗಳ ಕುರಿತು ಮಾಹಿತಿ ನೀಡಲಾಯಿತು.

ಕಾರ್ಯಕ್ರಮದಲ್ಲಿ ಲಿಡ್ಕರ್ ಅಧ್ಯಕ್ಷ ಪ್ರೊ.ಲಿಂಗಣ್ಣ, ಶಾಸಕರಾದ ಟಿ.ರಘುಮೂರ್ತಿ, ವಿಧಾನ ಪರಿಷತ್ ಸದಸ್ಯ ಚಿದಾನಂದ ಎಂ.ಗೌಡ, ಉಪ್ಪಾರ ಅಭಿವೃದ್ಧಿ ನಿಗಮದ ಅಧ್ಯಕ್ಷ ಗಿರೀಶ್ ಉಪ್ಪಾರ್, ವಿಶ್ವ ಕರ್ಮ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಾಬು ಪತ್ತಾರ, ಅಲೆಮಾರಿ, ಅರೆಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷ ರವೀಂದ್ರಶೆಟ್ಟಿ, ನಗರಸಭೆ ಅಧ್ಯಕ್ಷೆ ತಿಪ್ಪಮ್ಮ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸುರೇಶ್, ಸಮಾಜ ಕಲ್ಯಾಣ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಇಲಾಖೆ ಆಯುಕ್ತ ಕೆ.ಎ.ದಯಾನಂದ ಪರಿಶಿಷ್ಠ ವರ್ಗಗಳ ಕಲ್ಯಾಣ ಇಲಾಖೆ ನಿರ್ದೇಶಕ ಪಿ.ಎಸ್. ಕಾಂತರಾಜು, ಕರ್ನಾಟಕ ಶಿಕ್ಷಣ ವಸತಿ ಸಂಸ್ಥೆಗಳ ಕಾರ್ಯನಿರ್ವಾಹಕ ನಿರ್ದೇಶಕ ರಮೇಶ್ ದೇಸಾಯಿ, ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಕೆ.ನಂದಿನಿದೇವಿ ಸೇರಿದಂತೆ ಜಿಲ್ಲೆಯ ಗ್ರಾಮ ಪಂಚಾಯಿತಿ, ಪಟ್ಟಣಪಂಚಾಯಿತಿ, ನಗರಸಭೆ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಬುಕ್ ಮೈ ಶೋ ನಲ್ಲಿ 24ಘಂಟೆಗಳಲ್ಲಿ ಅತಿ ಹೆಚ್ಚು ಟಿಕೇಟ್ ಬುಕ್ ಆದ ಮೊದಲ ಸಿನಿಮಾ ARM’

  ಬೆಂಗಳೂರು: ಮ್ಯಾಜಿಕ್ ಫ್ರೇಮ್ಸ್, ಲಿಸ್ಟಿನ್ ಸ್ಟೀಫನ್ ಮತ್ತು ಯುಜಿಎಮ್‌ ಮೂವೀಸ್ ಬ್ಯಾನರ್‌ನಲ್ಲಿ ಡಾ. ಜಕರಿಯಾ ಥಾಮಸ್ ಎಆರ್‌ಎಂ ಸಿನಿಮಾವನ್ನು ನಿರ್ಮಿಸಿದ ARM ಸಿನಿಮಾ ಪ್ರಪಂಚದಾದ್ಯಂತ ಬಿಡುಗಡೆಯಾಗಿ ಪ್ರೇಕ್ಷಕರಿಂದ ಮೆಚ್ಚುಗೆ ವ್ಯಕ್ತಪಡಿದೆ. ಬಿಡುಗಡೆಯಾದ 4

ಕರ್ನಾಟಕ ಪಂಚಾಯತ್ ರಾಜ್ ಇಲಾಖೆಯಲ್ಲಿ ನೇರ ನೇಮಕಾತಿ ಆರಂಭ..!

  ಕರ್ನಾಟಕ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ಖಾಲಿ ಇರುವ 47 ಹುದ್ದೆಗಳ ಭರ್ತಿಗೆ ನೇರ ನೇಮಕಾತಿ ಮಾಡಿಕೊಳ್ಳಲು ನಿರ್ಧರಿಸಿದೆ. ಸಂಗ್ರಹಣೆ ಸಲಹೆಗಾರ, ಪರಿಸರ ಸಲಹೆಗಾರ, ಸಾಮಾಜಿಕ ಅಭಿವೃದ್ಧಿ ಸಲಹೆಗಾರ, ಕಾನೂನು

ಬಿಜೆಪಿಯ ಭ್ರಷ್ಟ ಎಂಬ ಲೇಬಲ್ ವಿಜಯೇಂದ್ರ ಮೇಲಿದೆ : ರಾಜ್ಯಾಧ್ಯಕ್ಷರ ಮೇಲೆ ಕಿಡಿಕಾರಿದ ರಮೇಶ್ ಜಾರಕಿಹೊಳಿ

  ಬೆಳಗಾವಿ: ಯಡಿಯೂರಪ್ಪ ಅವರಿಗೆ ನಾನು ವಿರೋಧಿಯಲ್ಲ. ಯಡಿಯೂರಪ್ಪ ಅವರು ನಮ್ಮ ಪಕ್ಷಕ್ಕೆ ಪ್ರಶ್ನಾತೀತ ನಾಯಕ. ಯಡಿಯೂರಪ್ಪ ಅವರ ಬಗ್ಗೆ ನಮಗೆ ತುಂಬಾ ಗೌರವವಿದೆ. ಆದರೆ ವಿಜಯೇಂದ್ರ ನಮ್ಮ‌ ಪಕ್ಷದ ನಾಯಕನಲ್ಲ. ಬಿಜೆಪಿಯಲ್ಲಿಯೇ ಭ್ರಷ್ಟ

error: Content is protected !!