ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 12 : ನಗರದ ಎಸ್.ಆರ್.ಬಿ.ಎಂ.ಎಸ್. ರೋಟರಿ ಬಾಲ ಭವನದಲ್ಲಿ ಮಾರ್ಚ್ 14 ರಂದು ವೇಷ ಭೂಷಣ ಸ್ಪರ್ಧೆ ಆಯೋಜಿಸಲಾಗಿದೆ.
ರೋಟರಿ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆ ರೋಟರಿ ಕ್ಲಬ್, ಚಿತ್ರದುರ್ಗ ಇವರ ಸಂಯುಕ್ತ ಆಶ್ರಯದಲ್ಲಿ
4 ರಿಂದ 6 ವರ್ಷದೊಳಗಿನ ಮಕ್ಕಳ ಕಲೆ ಮತ್ತು ಪ್ರತಿಭೆಯನ್ನು ಗುರುತಿಸಿ ಅವರಿಗೆ ಸೂಕ್ತ ಅವಕಾಶ ನೀಡುವ ಸಲುವಾಗಿ ಈ ವೇಷ ಭೂಷಣ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿದೆ. ಈ ಸ್ಪರ್ಧೆಯಲ್ಲಿ ಭಾಗವಹಿಸಲು ಇಚ್ಚಿಸುವ ಮಕ್ಕಳು ಮಗುವಿನ ಆಧಾರ್ ಕಾರ್ಡ್ ಪ್ರತಿಯನ್ನು ತಂದು ನೊಂದಾಯಿಸಬೇಕೆಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ಸ್ಪರ್ಧೆಯಲ್ಲಿ ವಿಜೇತರಿಗೆ ಬಹುಮಾನಗಳನ್ನು ವಿತರಿಸಲಾಗುತ್ತದೆ. ಮೊದಲನೇ ಬಹುಮಾನ ಆಕರ್ಷಕ ಸೈಕಲ್ ನೀಡಲಾಗುತ್ತದೆ.

ಹೆಚ್ಚಿನ ಮಾಹಿತಿಗಾಗಿ ಎ.ಎಂ. ಭಾಗ್ಯಲಕ್ಷ್ಮೀ ಅಧ್ಯಕ್ಷರು, ರೋಟರಿ ಕ್ಲಬ್, ಚಿತ್ರದುರ್ಗ ಮತ್ತು ಜಿ.ವಿ. ಅನುರಾಧ
ಕಾರ್ಯದರ್ಶಿ, ರೋಟರಿ ಕ್ಲಬ್, ಚಿತ್ರದುರ್ಗ
(ಮೊಬೈಲ್ ಸಂಖ್ಯೆ : 8561146249 ಮತ್ತು 8747909812)
ಇವರನ್ನು ಸಂಪರ್ಕಿಸಲು ತಿಳಿಸಿದ್ದಾರೆ.






