ಪರಿಷತ್ ಚುನಾವಣೆ ಫಲಿತಾಂಶ: ಕಾಂಗ್ರೆಸ್, ಬಿಜೆಪಿ ನಡುವೆ ಬಿಗ್ ಫೈಟ್.. ಎಲ್ಲೆಲ್ಲಿ ಯಾರ್ಯಾರ ಗೆಲುವು ಇಲ್ಲಿದೆ ಮಾಹಿತಿ..!

suddionenews
1 Min Read

ಬೆಂಗಳೂರು: ಇಂದು 25 ಕ್ಷೇತ್ರಗಳ ಪರಿಷತ್ ಚುನಾವಣಾ ಮತ ಎಣಿಕೆ ನಡೆಯುತ್ತಿದೆ. ಅದರಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ಬಿಗ್ ಫೈಟ್ ಏರ್ಪಟ್ಟಿದೆ. ಒಂದಷ್ಟು ಕ್ಷೇತ್ರಗಳು ಬಿಜೆಪಿ ಪಾಲಾದ್ರೆ ಮತ್ತಷ್ಟು ಕ್ಷೇತ್ರಗಳು ಕಾಂಗ್ರೆಸ್ ಪಾಲಾಗಿವೆ.

*  ಚಿತ್ರದುರ್ಗದಲ್ಲಿ ಈ ಬಾರಿ ತೀವ್ರ ಕುತೂಹಲ ಕೆರಳಿಸಿದ್ದ ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಬಿ.ಸೋಮಶೇಖರ್ ವಿರುದ್ಧ
ಬಿಜೆಪಿ ಅಭ್ಯರ್ಥಿ ನವೀನ್ ಕೆ.ಎಸ್. 2629 ಮೊದಲ ಪ್ರಾಶಸ್ತ್ಯ ಮತವನ್ನು ಪಡೆದು 358 ಮತಗಳ ಅಂತರದಿಂದ ಭರ್ಜರಿ ಗೆಲುವು ಸಾಧಿಸಿದ್ದಾರೆ.

* ತುಮಕೂರಿನಲ್ಲಿ ಕಾಂಗ್ರೆಸ್ ಜಯಗಳಿಸಿದೆ. ಕೆ ಎ‌ನ್ ರಾಜಣ್ಣ ಗೆದ್ದಿದ್ದಾರೆ.

* ಶಿವಮೊಗ್ಗದಲ್ಲಿ ಬಿಜೆಪಿ ಅಭ್ಯರ್ಥಿ ಡಿ.ಎಸ್‌.ಅರುಣ್ ಗೆಲುವು ಸಾಧಿಸಿದ್ದಾರೆ.

* ಕಲಬುರಗಿ ಯಾದಗಿರಿಯಲ್ಲಿ ಬಿಜೆಪಿ ಅಭ್ಯರ್ಥಿ ಬಿ ಜಿ ಪಾಟೀಲ್ ಮುನ್ನಡೆ ಸಾಧಿಸಿದ್ದಾರೆ. ಕಾಂಗ್ರೆಸ್ 2,711 ಮತ್ತು ಬಿಜೆಪಿ 2,856 ಮತಗಳನ್ನ ಪಡೆದುಕೊಂಡಿದೆ.

* ಬಳ್ಳಾರಿ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ವೈ ಎಮ್ ಸತೀಶ್ ಗೆಲುವು ಸಾಧಿಸಿದ್ದಾರೆ. 757 ಮತಗಳ ಅಂತದಿಂದ  ಗೆಲುವು ಸಾಧಿಸಿದ್ದಾರೆ.

* ಧಾರವಾಡದಲ್ಲಿ ಎರಡು ಸ್ಥಾನಗಳ ಪೈಕಿ ಒಂದು ಕಾಂಗ್ರೆಸ್ ಪಾಲು ಮತ್ತೊಂದು ಬಿಜೆಪಿ ಪಾಲಾಗಿದೆ. ಕಾಂಗ್ರೆಸ್ ಅಭ್ಯರ್ಥಿ ಸಲೀಂ ಅಹಮದ್ ಮತ್ತು ಬಿಜೆಪಿ ಅಭ್ಯರ್ಥಿ ಪ್ರದೀಪ್ ಶೆಟ್ಟಿ ಗೆಲು ಸಾಧಿಸಿದ್ದಾರೆ.

* ದ.ಕದಲ್ಲೂ ಕಾಂಗ್ರೆಸ್ ಹಾಗೂ ಬಿಜೆಪಿಗೆ ತಲಾ ಒಂದೊಂದು ಸ್ಥಾನ ಸಿಕ್ಕಿದೆ. ಕಾಂಗ್ರೆಸ್ ಅಭ್ಯರ್ಥಿ ಮಂಜುನಾಥ್ ಬಂಡಾರಿ ಹಾಗೂ ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ್ ಪೂಜಾರಿ ಗೆಲುವು ಸಾಧಿಸಿದ್ದಾರೆ.

* ಚಿಕ್ಕಮಗಳೂರಿನಲ್ಲಿ ಬಿಜೆಪಿಗೆ 6 ವೋಟ್​ಗಳಿಂದ ಗೆಲುವು ಸಿಕ್ಕಿದೆ. ಎಂ.ಕೆ.ಪ್ರಾಣೇಶ್ ಗೆಲುವು ಸಾಧಿಸಿದ್ದಾರೆ.

* ಕೋಲಾರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನಿಲ್ ಕುಮಾರ್ ಜಯ ಗಳಿಸಿದ್ದಾರೆ.

* ವಿಜಯಪುರದ ಎರಡು ಕ್ಷೇತ್ರಗಳ ಪೈಕಿ ಕಾಂಗ್ರೆಸ್ ಅಭ್ಯರ್ಥಿ ಸುನಿಲ್‌ಗೌಡಪಾಟೀಲ್, ಬಿಜೆಪಿ ಅಭ್ಯರ್ಥಿ ಪಿ.ಹೆಚ್‌.ಪೂಜಾರ್ ಜಯ ಸಾಧಿಸಿದ್ದಾರೆ.

* ಬೆಳಗಾವಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಚನ್ನರಾಜ ಹಟ್ಟಿಹೊಳಿಗೆ ಮುನ್ನಡೆ ಇದೆ. ಎರಡನೇ ಸ್ಥಾನದಲ್ಲಿ ಪಕ್ಷೇತರ ಅಭ್ಯರ್ಥಿ ಲಖನ್ ಜಾರಕಿಹೊಳಿ‌ ಇದ್ದಾರೆ.

ಮೈಸೂರಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮುನ್ನಡೆ ಸಾಧಿಸುತ್ತಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *