ಬೆಂಗಳೂರು: ವಿಧಾನಪರಿಷತ್ ನಲ್ಲೂ ಪೇ ಸಿಎಂ ಪೋಸ್ಟರ್ ಗದ್ದಲ ಮುಂದುವರಿದಿದೆ. ಪೇ ಸಿಎಂ ಪೋಸ್ಟರ್ ಹಿಡಿದು ಕಾಂಗ್ರೆಸ್ ನಾಯಕರು ಗದ್ದಲ ಎಬ್ಬಿಸಿದ್ದಾರೆ. ಕಾಂಗ್ರೆಸ್ ನವರು ಧರಣಿ ಕೂತ ಪರಿಣಾಮ ಅದಕ್ಕೆ ಪ್ರತಿಯಾಗಿ ಕಾಂಗ್ರೆಸ್ ನಾಯಕರು ಧರಣಿ ಕೂತಿದ್ದಾರೆ.
ಸದನದಲ್ಲಿ ಕಾಂಗ್ರೆಸ್ ಕುರಿತ ಪೋಸ್ಟರ್ ಗಳನ್ನು ಪ್ರದರ್ಶಿಸಿ ಧರಣಿ ಕೂತಿದ್ದಾರೆ. ಪರಿಷತ್ ನಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಸದಸ್ಯರ ನಡುವೆ ವಾಕ್ಸಮರ ಆರಂಭವಾಗಿದೆ. ಗದ್ದಲದ ನಡುವೆ ಉಭಯ ಪಕ್ಷಗಳಿಂದ ಪೋಸ್ಟರ್ ಪ್ರದರ್ಶನವಾಗಿದೆ. ಸಿದ್ದರಾಮಯ್ಯ ಅವಧಿಯಲ್ಲಿ ನಡೆದ ಭ್ರಷ್ಟಾಚಾರದ ಪೋಸ್ಟರ್ ಗಳನ್ನು ಬಿಜೆಪಿ ಪ್ರದರ್ಶಿಸಿದೆ. ಭ್ರಷ್ಟ ಕಾಂಗ್ರೆಸ್ ಗೆ ಧಿಕ್ಕಾರ ಎಂಬ ಘೋಷಣೆಯನ್ನು ಕೂಗಿದ್ದಾರೆ. ಎರಡು ಪಕ್ಷಗಳ ಗದ್ದಲದಿಂದ ಕಲಾಪ ಮಧ್ಯಾಹ್ನಕ್ಕೆ ಮುಂದೂಡಿಕೆಯಾಗಿದೆ.