Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಬಜೆಟ್ ಮಂಡನೆಗೆ ದಿನಗಣನೆ : ಕಾಂಗ್ರೆಸ್ ಸರ್ಕಾರ ಕಟ್ಟಿ ಹಾಕಲು ವಿಪಕ್ಷಗಳ ಪ್ಲ್ಯಾನ್ ಏನು..?

---Advertisement---

 

ಬೆಂಗಳೂರು; ರಾಜ್ಯ ಕಾಂಗ್ರೆಸ್ ಸರ್ಕಾರ ಬಜೆಟ್ ಮಂಡನೆಗೆ ಎಲ್ಲಾ ರೀತಿಯ ಸಿದ್ಧತೆಯನ್ನು ಮಾಡಿಕೊಂಡಿದ್ದಾರೆ. ಗ್ಯಾರಂಟಿಗಳ ನಡುವೆ ಜನರಿಗೆ ಇನ್ನಷ್ಟು ಯೋಜನೆಗಳನ್ನ ನೀಡಬೇಕಿದೆ. ಹೀಗಾಗಿ ಎಲ್ಲಾ ಇಲಾಖೆಯ ಅಧಿಕಾರಿಗಳೊಟ್ಟಿಗೆ ಸಭೆ ನಡೆಸಿ ಬಜೆಟ್ ಸಿದ್ಧತೆಯನ್ನು ಮಾಡಿಕೊಂಡಿದ್ದಾರೆ. ಇದರ ನಡುವೆ ವಿಪಕ್ಷಗಳು ಕೂಡ ಕಾಂಗ್ರೆಸ್ ಸರ್ಕಾರವನ್ನು ಮಣಿಸಲು ಸಿದ್ಧತೆ ನಡೆಸಿವೆ. ಕಲಾಪದಲ್ಲಿ ಸಿಎಂ ಸಿದ್ದರಾಮಯ್ಯ ಸರ್ಕಾರವನ್ನು ಕಟ್ಟಿ ಹಾಕಲು ಯೋಜನೆ ರೂಪಿಸಿವೆ.

ಈಗಾಗಲೇ ವಿಪಕ್ಷ ನಾಯಕರು ಸಭೆ ನಡೆಸಿ, ಕಾಂಗ್ರೆಸ್ ಸರ್ಕಾರ ಮಣಿಸಲು ಏನೆಲ್ಲಾ ಸವಾಲು ಹಾಕಬೇಕು ಎಂಬುದರ ಬಗ್ಗೆಯೂ ಯೋಜನೆ ಹಾಕಿಕೊಂಡಿದ್ದಾರೆ. ಮಾರ್ಚ್ 7ಕ್ಕೆ ರಾಜ್ಯ ಬಜೆಟ್ ಮಂಡನೆಯಾಗಲಿದೆ.‌ ಅದಕ್ಕೂ ಮುನ್ನ ಅಂದ್ರೆ ಮಾರ್ಚ್ 3 ಬಜೆಟ್ ಅಧಿವೇಶನ ಆರಂಭವಾಗಲಿದೆ. ಈ ಬಜೆಟ್ ಅಧಿವೇಶನದಲ್ಲಿ ಸರ್ಕಾರವನ್ನ ಇಕ್ಕಟ್ಟಿಗೆ ಸಿಲುಕಿಸಲು ಏನೆಲ್ಲಾ ಬೇಕೋ ಅದೆಲ್ಲಾ ಪ್ಲ್ಯಾನ್ ಮಾಡಿಕೊಳ್ಳಲಾಗುತ್ತಿದೆ. ಈ ಹಿನ್ನೆಲೆ ಬೆಂಗಳೂರಿನ ಖಾಸಗಿ ಹೊಟೇಲ್ ನಲ್ಲಿ ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಮಹತ್ವದ ಸಭೆ ನಡೆಸಿದ್ದಾರೆ. ಕೇಂದ್ರ ಸಚುವ ಕುಮಾರಸ್ವಾಮಿ, ಆರ್.ಅಶೋಕ್ ಹಾಗೂ ವಿಜಯೇಂದ್ರ ಅವರ ನೇತೃತ್ವದಲ್ಲಿ ಸಭೆ ನಡೆದಿದೆ.

ಸರ್ಕಾರವನ್ನು ಮಣಿಸಲು ಬಿಜೆಪಿ – ಜೆಡಿಎಸ್ ಮಾಡಿರುವ ಪ್ಲ್ಯಾನ್ ಅಂದ್ರೆ, ಈಚೆಗೆ ಸರ್ಕಾರಕ್ಕಾದ ಮುಜುಗರಗಳನ್ನೇ ಟಾರ್ಗೆಟ್ ಮಾಡುವುದು, ಮೈಕ್ರೋ ಫೈನಾನ್ಸ್ ಕಿರುಕುಳ ಮತ್ತು ಸಾವು, ನೋವುಗಳು, ಬಾಣಂತಿಯರ ಸಾವು, ರೈತರಿಗೆ ಪರಿಹಾರ ನೀಡದೆ ಇರುವುದು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗಿರುವ ವಿಚಾರಗಳು, ಮೆಟ್ರೋ ಟಿಕೆಟ್ ದರ ಏರಿಕೆ ವಿರುದ್ಧ ಹೋರಾಟದ ನಿರ್ಧಾರ ಗ್ರೇಟರ್ ಬೆಂಗಲಕೂರು ಬಿಲ್ ಮಂಡಿಸಲು ಮುಂದಾಗಿರುವ ಸರ್ಕಾರದ ನಡೆಯನ್ನು ಮತ್ತೊಮ್ಮೆ ಪ್ರಶ್ನೆ ಮಾಡುವಂತೆ ವಿಪಕ್ಷಗಳು ಬಾರೀ ಚರ್ಚೆ ಮಾಡಿವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...