ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
ಸುದ್ದಿಒನ್, ಹಿರಿಯೂರು, ಅಕ್ಟೋಬರ್. 11 : ಜಿಲ್ಲೆಯಲ್ಲಿ ಕಳೆದ ಎರಡ್ಮೂರು ದಿನಗಳಿಂದ ಮಳೆಯಾಗುತ್ತಿದ್ದು ಜೊತೆಗೆ ವಾಣಿವಿಲಾಸ ಜಲಾಶಯ ಮೇಲ್ಭಾಗದಲ್ಲಿ ಕೂಡ ಮಳೆ ಪ್ರಮಾಣ ಹೆಚ್ಚಿದ್ದು, ವಾಣಿ ವಿಲಾಸ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗಿದೆ.
ಅಕ್ಟೋಬರ್ 10ರಂದು ಜಲಾಶಯಕ್ಕೆ 1250 ಕ್ಯೂಸೆಕ್ ಒಳಹರಿವು ನೀರು ಹರಿದು ಬಂದಿದ್ದು, ಮರುದಿನ ಶನಿವಾರ ಬೆಳಗ್ಗೆ ಒಳಹರಿನ ಪ್ರಮಾಣದಲ್ಲಿ ಏಕಾಏಕಿ 2917 ಕ್ಯೂಸೆಕ್ ಒಳಹರಿವು ನೀರು ಹೆಚ್ಚಿದೆ. ಇದರಿಂದ ಶನಿವಾರಕ್ಕೆ ಪ್ರಸ್ತುತ ಜಲಾಶಯದಿಂದ ನೀರಿನ ಮಟ್ಟ 129.40 ಅಡಿ ತಲುಪಿದೆ. ಇದೇ ಪ್ರಮಾಣದಲ್ಲಿ ಒಳರಿವು ಮುಂದುವರೆದರೆ ಜಲಾಶಯ ಯಾವ ಕ್ಷಣದಲ್ಲಾದರೂ ಭರ್ತಿಯಾಗಿ ಕೊಡಿಬಿಳಬಹುದು. ವೇದಾವತಿ ನದಿ ಪಾತ್ರದ ಗ್ರಾಮಸ್ಥರು ಎಚ್ಚರಿಕೆಯಿಂದ ಹಾಗೂ ಸುರಕ್ಷಿತ ಜಾಗಗಳಲ್ಲಿ ಇರುವಂತೆ ವಿಶ್ವೇಶ್ವರಯ್ಯ ಜಲ ನಿಗಮದ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆಂದು ತಹಶೀಲ್ದಾರ್ ಎಂ. ಸಿದ್ದೇಶ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್