ನವದೆಹಲಿ : ದೇಶವು ಜಾತ್ಯತೀತವಾಗಿದೆ.ದ್ವೇಷದ ಭಾಷಣಗಳನ್ನು ಬಹಳ ಗಂಭೀರವಾಗಿ ಪರಿಗಣಿಸಿದ ಸುಪ್ರೀಂ ಕೋರ್ಟ್ ಶುಕ್ರವಾರ ದೆಹಲಿ, ಉತ್ತರ ಪ್ರದೇಶ ಮತ್ತು ಉತ್ತರಾಖಂಡ ಸರ್ಕಾರಗಳಿಗೆ ಅಂತವರ ತಪ್ಪಿತಸ್ಥರ ವಿರುದ್ಧ ಕ್ರಿಮಿನಲ್ ಮೊಕದ್ದಮೆಗಳನ್ನು ದಾಖಲಿಸುವಂತೆ ನಿರ್ದೇಶಿಸಿದೆ.
ದ್ವೇಷ ಭಾಷಣದ ಅಪರಾಧಿಗಳ ವಿರುದ್ಧ ತ್ವರಿತವಾಗಿ ಕ್ರಿಮಿನಲ್ ಮೊಕದ್ದಮೆಗಳನ್ನು ದಾಖಲಿಸುವಂತೆ ನ್ಯಾಯಾಲಯವು ಆದೇಶಿಸಿದೆ. ಒಂದು ವೇಳೆ ಈ ಬಗ್ಗೆ ಕ್ರಮ ಕೈಗೊಳ್ಳುವಲ್ಲಿ ಆಡಳಿತವಿರುವ ಸರ್ಕಾರದ ಕಡೆಯಿಂದ ಯಾವುದೇ ವಿಳಂಬವಾದರೆ ಇದು ನ್ಯಾಯಾಲಯದ ನಿಂದನೆ ಎಂದು ಪರಿಗಣಿಸಲಾಗುತ್ತದೆ ಎಂದು ಸುಪ್ರೀಂ ಕೋರ್ಟ್ ಎಚ್ಚರಿಸಿದೆ.
ನ್ಯಾಯಮೂರ್ತಿಗಳಾದ ಕೆಎಂ ಜೋಸೆಫ್ ಮತ್ತು ಹೃಷಿಕೇಶ್ ರಾಯ್ ಅವರ ಪೀಠವು ಶಾಹೀನ್ ಅಬ್ದುಲ್ಲಾ ಎಂಬ ವ್ಯಕ್ತಿ ಸಲ್ಲಿಸಿದ ಅರ್ಜಿಯ ಮೇರೆಗೆ ಸರ್ಕಾರಗಳಿಗೆ ನೋಟಿಸ್ ಜಾರಿ ಮಾಡಿದೆ.
ರಾಷ್ಟ್ರದ ಜಾತ್ಯತೀತ ರಚನೆಯನ್ನು ಕಾಪಾಡಲು ಅವರ ಧರ್ಮವನ್ನು ಲೆಕ್ಕಿಸದೆ ದ್ವೇಷದ ಭಾಷಣಗಳನ್ನು ಮಾಡುವವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು. ಇದು 21 ನೇ ಶತಮಾನ. ಧರ್ಮದ ಹೆಸರಿನಲ್ಲಿ ನಾವು ಎಲ್ಲಿಗೆ ತಲುಪಿದ್ದೇವೆ?” ಎಂದು ಪ್ರಶ್ನಿಸಿದೆ.