ನವದೆಹಲಿ: ಕೊರೊನಾ ತಡೆಗೆ ಎಲ್ಲರು ವ್ಯಾಕ್ಸಿನ್ ಹಾಕಿಸಿಕೊಳ್ಳಿ ಅಂತ ಸರ್ಕಾರ ಮನವಿ ಮಾಡಿದೆ. ಜೊತೆಗೆ ಎಲ್ಲೆ ಹೋದ್ರೂ ಎರಡು ಡೋಸ್ ವ್ಯಾಕ್ಸಿನೇಷನ್ ಸರ್ಟಿಫಿಕೇಟ್ ಕೇಳ್ತಾ ಇದ್ದಾರೆ. ಹೀಗಾಗಿ ವ್ಯಾಕ್ಸಿನ್ ಹಾಕಿಸಿಕೊಂಡು ಸರ್ಟಿಫಿಕೇಟ್ ಪಡೆಯಲೇಬೇಕಾಗಿದೆ. ಆ ಸರ್ಟಿಫಿಕೇಟ್ ನಲ್ಲಿ ಪ್ರಧಾನಿ ಮೋದಿ ಅವರ ಫೋಟೋವಿದೆ.
ಸರ್ಟಿಫಿಕೇಟ್ ನಲ್ಲಿ ಪ್ರಧಾನಿ ಮೋದಿ ಅವರ ಭಾವಚಿತ್ರವೇಕೆ ಅಂತ ಹಾಕಿದ್ದ ಅರ್ಜಿಗೆ ಕೋರ್ಟ್ ತರಾಟೆ ತೆಗೆದುಕೊಂಡಿತ್ತು. ಇದೀಗ ಅದೇ ಪ್ರಶ್ನೆ ಕೇಳಿದ ವ್ಯಕ್ತಿಗೆ ಒಂದು ಲಕ್ಷ ರೂಪಾಯಿ ದಂಡ ಹಾಕಿದೆ ಕೋರ್ಟ್.
ಲಸಿಕಾ ಸರ್ಟಿಫಿಕೇಟ್ ನಲ್ಲಿ ಮೋದಿ ಅವರ ಫೋಟೋ ತೆಗೆಯುವಂತೆ ಸಲ್ಲಿಸಿದ್ದ ಅರ್ಜಿಯನ್ನ ಕೇರಳ ಹೈಕೋರ್ಟ್ ವಿಭಾಗೀಯ ಪೀಠ ವಜಾಗೊಳಿಸಿದೆ. ಅರ್ಜಿ ವಿಚಾರಣೆ ನಡೆಸಿದ ಪೀಠ, ಲಸಿಕೆ ಬಗ್ಗೆ ಜನರಿಗೆ ಜಾಗೃತಿ ಮೂಡಿಸುವ ಹಕ್ಕು ಪ್ರಧಾನಿಗಿದೆ. ಲಸಿಕೆ ಪ್ರಮಾಣ ಪತ್ರದಲ್ಲಿರುವ ಮೋದಿ ಭಾವಚಿತ್ರ ಜಾಹೀರಾತಲ್ಲ ಎಂದು ಅರ್ಜಿ ವಜಾಗೊಳಿಸಿದೆ.
ಜೊತೆಗೆ ಈ ಅರ್ಜಿ ಹಾಕಿದ್ದ ವ್ಯಕ್ತಿಗೆ ಒಂದು ಲಕ್ಷ ರೂಪಾಯಿ ದಂಡ ವಿಧಿಸಿ ಕೇರಳ ಹೈಕೋರ್ಟ್ ಆದೇಶ ಹೊರಡಿಸಿದೆ.