ಬೀದರ್: ಬಸವಕಲ್ಯಾಣ ಕ್ಷೇತ್ರದ ಬಿಜೆಪಿ ಶಾಸಕ ಶರಣು ಸಲಗರ್ ವಿರುದ್ಧ ನ್ಯಾಯಾಲಯ ಜಾಮೀನು ರಹಿತ ವಾರಂಟ್ (NBW) ಜಾರಿ ಮಾಡಲಾಗಿದೆ. ಪ್ರಕರಣದ ವಿಚಾರಣೆಗೆ ಹಾಜರಾಗದ ಕಾರಣ ಬೆಂಗಳೂರಿನ 42ನೇ ಎಸಿಜೆಎಂ ನ್ಯಾಯಾಲಯ ಈ ಕ್ರಮ ಕೈಗೊಂಡಿದೆ.
2023ರ ಜುಲೈ 1ರಂದು ಬಕ್ರೀದ್ ಹಬ್ಬದ ಸಂದರ್ಭದಲ್ಲಿ ಅಕ್ರಮ ಗೋಹತ್ಯೆ ನಡೆದಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ನಡೆದ ಘಟನೆಗೆ ಸಂಬಂಧಿಸಿದ ಪ್ರಕರಣದಲ್ಲಿ ಪೊಲೀಸರು ತನಿಖೆ ನಡೆಸಿ ಈಗಾಗಲೇ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.ಪ್ರಕರಣದ ಸಾಕ್ಷ್ಯ ವಿಚಾರಣೆಗೆ ಶಾಸಕ ಶರಣು ಸಲಗರ್ ನ್ಯಾಯಾಲಯಕ್ಕೆ ಹಾಜರಾಗಬೇಕಿತ್ತು. ಆದರೆ ಅವರು ಗೈರಾಗಿದ್ದ ಹಿನ್ನೆಲೆಯಲ್ಲಿ ನ್ಯಾಯಾಲಯ ಜಾಮೀನು ರಹಿತ ವಾರಂಟ್ ಹೊರಡಿಸಿದೆ.
ಘಟನೆ ಏನು?
ಬಕ್ರೀದ್ ಸಂದರ್ಭದಲ್ಲಿ ಮುಸ್ಲಿಂ ಸಮುದಾಯದ ಮನೆಯೊಂದರಲ್ಲಿ ಗೋಹತ್ಯೆ ನಡೆಯುತ್ತಿದೆ ಎಂದು ಆರೋಪಿಸಿ ಅದನ್ನು ತಡೆಯಲು ಹೋಗಿದ್ದ ವೇಳೆ ಗಲಾಟೆ ನಡೆದಿತ್ತು ಎನ್ನಲಾಗಿದೆ. ಈ ಘಟನೆ ಬಳಿಕ ಶಾಸಕ ಶರಣು ಸಲಗರ್ ಹಾಗೂ ಅವರ ಬೆಂಬಲಿಗರ ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲಿಸಿ ಪ್ರಕರಣ ದಾಖಲಿಸಿದ್ದರು.ಪ್ರಕರಣದ ವಿಚಾರಣೆ ಮುಂದುವರಿದಿದ್ದು, ನ್ಯಾಯಾಲಯದ ವಾರಂಟ್ ಬಳಿಕ ಶಾಸಕ ಶರಣು ಸಲಗರ್ ಅವರ ಮುಂದಿನ ಕಾನೂನು ಕ್ರಮಗಳತ್ತ ಎಲ್ಲರ ಗಮನ ನೆಟ್ಟಿದೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.


















