ಬೀದರ್: ಮುಂದಿನ ಸೂಚನೆ ನೀಡೋವರೆಗೂ ಶಾಲಾ ಕಾಲೇಜಿಗೆ ಯಾವುದೇ ಧಾರ್ಮಿಕ ಬಟ್ಟೆಯನ್ನು ಧರಿಸಿ ಬರಬಾರದೆಂದು ಹೈಕೋರ್ಟ್ ಸೂಚನೆ ನೀಡಿದೆ. ಸೂಚನೆಯಿದ್ದರು, ವಿದ್ಯಾರ್ಥಿಗಳು ಹಿಜಾಬ್ ಧರಿಸಿ ಪರೀಕ್ಷೆಗೆ ಬಂದ ಘಟನೆ ಜಿಲ್ಲೆಯಲ್ಲಿ ನಡೆದಿದೆ.
ಬೀಮ್ಸ್ ಮೆಡಿಕಲ್ ಕಾಲೇಜಿನ ನರ್ಸಿಂಗ್ ವಿದ್ಯಾರ್ಥಿಗಳು ಬುರ್ಖಾ ಧರಿಸಿ ಪರೀಕ್ಷೆ ಬರೆಯಲು ಬಂದಿದ್ದರು. ಆದ್ರೆ ಈ ವೇಳೆ ಬುರ್ಖಾ ಧರಿಸಿ ಬಂದ ವಿದ್ಯಾರ್ಥಿನಿಯರಿಗೆ ಪರೀಕ್ಷೆ ಬರೆಯಲು ನಿರಾಕರಿಸಿದ್ದಾರೆ. ಆದ್ರೆ ಈ ಘಟನೆ ಮೂರು ದಿನಗಳ ಹಿಂದೆ ನಡೆದಿದ್ದು, ಈಗ ಆ ವಿಡಿಯೋ ವೈರಲ್ ಆಗುತ್ತಿದೆ.
ಬೀಮ್ಸ್ ಕಾಲೇಜಿನಲ್ಲಿ ನರ್ಸಿಂಗ್ ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿನಿಯರನ್ನು ಗೇಟ್ ಬಳಿ ನಿಲ್ಲಿಸಿ, ಪ್ರವೇಶ ಪತ್ರ ಹಾಗೂ ವಿದ್ಯಾರ್ಥಿನಿಯನ್ನ ತಪಾಸಣೆ ಮಾಡಿದ್ದಾರೆ. ಈ ವೇಳೆ ಬುರ್ಖಾ ಧರಿಸಿದ್ದ ವಿದ್ಯಾರ್ಥಿನಿಯರು ಬುರ್ಖಾ ತೆಗೆಯಲು ನಿರಾಕರಿಸಿದ್ದಾರೆ. ಹೀಗಾಗಿ ಅವರಿಗೆ ಪರೀಕ್ಷೆ ಬರೆಯಲು ಅವಕಾಶ ನೀಡಿಲ್ಲ ಎನ್ನಲಾಗಿದೆ. ಮೂರು ದಿನಗಳ ಹಿಂದಿನ ಘಟನೆಯೊಂದು ಈಗ ವೈರಲ್ ಆಗುತ್ತಿದೆ.