Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಗೃಹ ಸಚಿವ ಪರಮೇಶ್ವರ ವಿರುದ್ಧ ಎಫ್‌ಐಆರ್‌ಗೆ ನ್ಯಾಯಾಲಯ ಆದೇಶ: ಬೆಟ್ಟಿಂಗ್ ಹೇಳಿಕೆ ಸುತ್ತ ಹೊಸ ವಿವಾದ

ಸಚಿವ ಪರಮೇಶ್ವರ್
---Advertisement---

ಗೃಹ ಸಚಿವ ಡಾ. ಜಿ. ಪರಮೇಶ್ವರ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಜನಪ್ರತಿನಿಧಿಗಳ ನ್ಯಾಯಾಲಯ ಮಂಗಳವಾರ ಮಹತ್ವದ ಆದೇಶ ನೀಡಿದೆ. ತುಮಕೂರಿನಲ್ಲಿ ನಡೆದ ರಾಜ್ಯಮಟ್ಟದ ಪಿಯು ಕಾಲೇಜು ವಿದ್ಯಾರ್ಥಿಗಳ ಕಬಡ್ಡಿ ಫೈನಲ್ ಪಂದ್ಯದಲ್ಲಿ ಜಿಲ್ಲಾಧಿಕಾರಿ ಶುಭಕಲ್ಯಾಣ್ ಜೊತೆ ₹500 ಬೆಟ್ಟಿಂಗ್ ಆಡಿದ್ದಾಗಿ ಪರಮೇಶ್ವರ ನೀಡಿದ್ದ ಹೇಳಿಕೆಯನ್ನು ಆಧರಿಸಿ ಈ ಕ್ರಮ ಕೈಗೊಳ್ಳಲಾಗಿದೆ.

ಕಳೆದ ವರ್ಷದ ಅಕ್ಟೋಬರ್‌ನಲ್ಲಿ ನಡೆದ ಈ ಪಂದ್ಯಾವಳಿಯ ವೇಳೆ “ವಿಜಯಪುರ ತಂಡ ಗೆಲ್ಲುತ್ತದೆ ಎಂದು ಬೆಟ್ಟಿಂಗ್ ಮಾಡಿಕೊಂಡು ₹500 ಕಳೆದುಕೊಂಡೆ” ಎಂದು ಪರಮೇಶ್ವರ ಬಹಿರಂಗವಾಗಿ ಹೇಳಿದ್ದರು. ಈ ಹೇಳಿಕೆಯನ್ನು ಆಧರಿಸಿ ಸಾಮಾಜಿಕ ಹೋರಾಟಗಾರ ಹಂದ್ರಾಳ್ ನಾಗಭೂಷಣ ಕೊಡಿಗೇನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದರೂ, ಪೊಲೀಸರು ಎಫ್‌ಐಆರ್ ದಾಖಲಿಸದ ಹಿನ್ನೆಲೆಯಲ್ಲಿ ಅವರು ನ್ಯಾಯಾಲಯದ ಮೊರೆ ಹೋಗಿದ್ದರು.
ಈ ಪ್ರಕರಣವನ್ನು ವಿಚಾರಣೆ ನಡೆಸಿದ ಬೆಂಗಳೂರಿನ 42ನೇ ಎಸಿಜೆಎಂ ನ್ಯಾಯಾಲಯ, ದೂರು ದಾಖಲಿಸಿ ತನಿಖೆ ನಡೆಸುವಂತೆ ಸೂಚಿಸಿದೆ. ಈ ಆದೇಶದಿಂದ ಗೃಹ ಸಚಿವರಿಗೆ ಸಾರ್ವಜನಿಕವಾಗಿ ಮುಜುಗರ ಉಂಟಾಗಿದೆ.

ಇದೇ ಪ್ರಕರಣದಲ್ಲಿ ದೂರು ಸ್ವೀಕರಿಸಿ ಎಫ್‌ಐಆರ್ ದಾಖಲಿಸದ ಕೊಡಿಗೇನಹಳ್ಳಿ ಠಾಣೆಯ ಪಿಎಸ್‌ಐ ಹಾಗೂ ಜಿಲ್ಲಾ ಪೊಲೀಸ್ ಅಧೀಕ್ಷಕ ಕೆ.ವಿ. ಅಶೋಕ್ ವಿರುದ್ಧವೂ ಮಧುಗಿರಿ ನ್ಯಾಯಾಲಯದಲ್ಲಿ ಮತ್ತೊಂದು ಪ್ರಕರಣ ವಿಚಾರಣೆಯಲ್ಲಿದೆ.ಬೆಟ್ಟಿಂಗ್ ಆರೋಪದ ಬಗ್ಗೆ ಟೀಕೆಗಳು ಹೆಚ್ಚಾಗುತ್ತಿದ್ದಂತೆ ಪರಮೇಶ್ವರ ಸ್ಪಷ್ಟನೆ ನೀಡಿ, “ನಾನು ಗೃಹ ಸಚಿವನಾಗಿ ಬೆಟ್ಟಿಂಗ್ ಮಾಡುತ್ತೇನೆನಾ? ತಮಾಷೆಗಾಗಿ ಹೇಳಿದ ಮಾತನ್ನು ತಪ್ಪಾಗಿ ಅರ್ಥೈಸಲಾಗಿದೆ” ಎಂದು ಪ್ರತಿಕ್ರಿಯಿಸಿದ್ದರು.
ಇದೇ ವಿಷಯವನ್ನು ಕೆಆರ್‌ಎಸ್ ಪಕ್ಷದ ನಾಯಕ ಭಟ್ಟರಹಳ್ಳಿ ಮಲ್ಲಿಕಾರ್ಜುನ ಕೂಡ ಪ್ರಸ್ತಾಪಿಸಿ, ಸಚಿವರು ಹಾಗೂ ಜಿಲ್ಲಾಡಳಿತದ ಕಾರ್ಯವೈಖರಿಯನ್ನು ಟೀಕಿಸಿದ್ದರು.

2025ರ ಅಕ್ಟೋಬರ್ 19ರಂದು ತುಮಕೂರಿನ ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ದಕ್ಷಿಣ ಕನ್ನಡ ತಂಡ 36-26 ಅಂಕಗಳಿಂದ ವಿಜಯಪುರ ತಂಡವನ್ನು ಸೋಲಿಸಿತ್ತು. ಪಂದ್ಯಾವಳಿಯ ಸಮಾರೋಪದಲ್ಲಿ ಬಹುಮಾನ ವಿತರಿಸುವ ವೇಳೆ ಈ ಹೇಳಿಕೆ ನೀಡಲಾಗಿತ್ತು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...