ರಿಷಬ್ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ ಸಿನಿಮಾ ಬಾಕ್ಸ್ ಆಫೀಸ್ ನಲ್ಲಿ ಈಗಾಗಲೇ ಧೂಳೆಬ್ಬಿಸಿದೆ. ಎಲ್ಲಾ ಭಾಷೆಯಲ್ಲೂ ಸಕ್ಸಸ್ ಫುಲಿ ಪ್ರದರ್ಶನ ಕಂಡಿದೆ. ಆದರೆ ಈ ಸಿನಿಮಾದಲ್ಲಿ ಬರುವ ಹಾಡಿಗೆ ಈಗ ಕೋರ್ಟ್ ತಡೆಯಾಜ್ಞೆ ನೀಡಿದೆ.
ಕಾಂತಾರ ಸಿನಿಮಾದಲ್ಲಿ ಸುಮಾರು ಜನ ಇಷ್ಟಪಟ್ಟಿದ್ದು ಕ್ಲೈಮ್ಯಾಕ್ಸ್ ಆ 20 ನಿಮಿಷ. ದೈವದ ರೂಪದಲ್ಲಿ ಅಬ್ಬರಿಸಿದ ಬಳಿಕ ಕೊನೆಯಲ್ಲಿ ಶಾಂತವಾಗಿ ಹಾಡೊಂದು ಮೂಡಿ ಬರುತ್ತೆ ಅದುವೇ ವರಾಹ ರೂಪಂ. ಆದ್ರೆ ಈ ಹಾಡಿನ ಮೇಲೆ ಕೇರಳದ ತೈಕುಡಂ ಬ್ರಿಡ್ಜ್ ಬ್ಯಾಂಡ್ ಸಂಸ್ಥೆ ಕೋರ್ಟ್ ಮೆಟ್ಟಿಲೇರಿತ್ತು. ಮಲಯಾಳಂ ಆಲ್ಬಮ್ ನಿಂದ ಈ ಹಾಡನ್ನು ಕಾಪಿ ಮಡಲಾಗಿದೆ ಎನ್ನಲಾಗಿತ್ತು. ಇದೀಗ ಕೇರಳದ ಕೋಯಿಕ್ಕೊಡು ಕೋರ್ಟ್ ಈ ಹಾಡಿನ ಬಳಕೆಗೆ ನಿಷೇಧ ಹೇರಿದೆ.
ಈ ಸಂಬಂಧ ವಿಚಾರಣೆ ನಡೆಸಿದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೈಕುಡಂ ಬ್ರಿಡ್ಜ್ ಅನುಮತಿ ಇಲ್ಲದೆ ಈ ಹಾಡನ್ನು ಬಳಸುವಂತಿಲ್ಲ ಎಂದು ಆದೇಶ ನೀಡಿದೆ. ನಮ್ಮ ನವರಸಂ ಮತ್ತು ವರಾಹ ರೂಪಂ ಹಾಡು ಅದೊಂದು ಹೋಲಿಕೆಯಲ್ಲಿ ನಮ್ಮ ಸಂಗೀತವನ್ನು ಕದಿಯಲಾಗಿದೆ ಎಂದು ತೈಕುಡಂ ಸಂಸ್ಥೆ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿತ್ತು.
ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ…
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಕಡಲೆ, ಮೆಕ್ಕೆಜೋಳ ಸೇರಿದಂತೆ ಇತರೆ…
ಬೆಂಗಳೂರು: ನಟ ಡಾಲಿ ಧನಂಜಯ್ ಮದುವೆ ಸಂಭ್ರಮದಲ್ಲಿದ್ದಾರೆ. ಚಿತ್ರದುರ್ಗದ ಅಳಿಯ ಬೇರೆ ಆಗ್ತಾ ಇದ್ದಾರೆ. ಧನ್ಯತಾ ಮೂಲತಃ ಚಿತ್ರದುರ್ಗದವರು. ಆದರೆ…
ಬೆಂಗಳೂರು: ಇಂದು ಹೈಕೋರ್ಟ್ ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ನೀಡಿದೆ. ಈ…
ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ, ಈ ರಾಶಿಯವರಿಗೆ ಉತ್ತಮ ಸಂಗಾತಿ ಸಿಗುವರು, ಶುಕ್ರವಾರದ ರಾಶಿ ಭವಿಷ್ಯ…
144 ವರ್ಷಗಳಿಗೊಮ್ಮೆ ಬರುವ ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದರೆ ಕರ್ಮ ಕಳೆಯುತ್ತದೆ ಎಂದು ನಂಬಲಾಗಿದೆ. ಹೀಗಾಗಿ ಕೋಟ್ಯಾಂತರ ಮಂದಿ…