ಜಾಮೀನು ನಿರೀಕ್ಷೆಯಲ್ಲಿದ್ದ ಮಲ್ಲಿಕಾರ್ಜುನ ಮುತ್ಯಾಗೆ ಕೋರ್ಟ್ ಶಾಕ್

1 Min Read

ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತ ವರ್ತನೆ ಆರೋಪದಡಿ ಪೋಕ್ಸೋ (POCSO) ಪ್ರಕರಣದ ಪ್ರಮುಖ ಆರೋಪಿ ಮಲ್ಲಿಕಾರ್ಜುನ ಮುತ್ಯಾಗೆ ನ್ಯಾಯಾಲಯದ ತೀರ್ಪು ಭಾರಿ ನಿರಾಶೆ ಉಂಟುಮಾಡಿದೆ. ಕಳೆದ ಕೆಲವು ದಿನಗಳಿಂದ ನ್ಯಾಯಾಂಗ ಬಂಧನದಲ್ಲಿರುವ ಮಲ್ಲಿಕಾರ್ಜುನ ಮುತ್ಯಾ, ತನ್ನ ಬಿಡುಗಡೆಗಾಗಿ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದನು.

ಅರ್ಜಿಯ ಸುದೀರ್ಘ ವಿಚಾರಣೆ ನಡೆಸಿದ ಯಾದಗಿರಿ ಜಿಲ್ಲಾ ಪ್ರಧಾನ ನ್ಯಾಯಾಲಯವು, ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ಜಾಮೀನು ಅರ್ಜಿಯನ್ನು ವಜಾಗೊಳಿಸಿ ಆದೇಶ ಹೊರಡಿಸಿದೆ. ಇದರಿಂದಾಗಿ ಮುತ್ಯಾ ಸದ್ಯಕ್ಕೆ ಜೈಲಿನಲ್ಲೇ ಉಳಿಯುವಂತಾಗಿದೆ.
ಜಾಮೀನು ಸಿಗುವ ಭರವಸೆಯಲ್ಲಿದ್ದ ಮುತ್ಯಾ ಮತ್ತು ಆತನ ಭಕ್ತರಿಗೆ ಯಾದಗಿರಿ ಜಿಲ್ಲಾ ಪ್ರಧಾನ ನ್ಯಾಯಾಲಯವು ಜಾಮೀನು ನಿರಾಕರಿಸುವ ಮೂಲಕ ಶಾಕ್ ನೀಡಿದೆ.

ಅಪ್ರಾಪ್ತ ಬಾಲಕಿಯೊಂದಿಗೆ ನಡೆಸಿರುವ ಅನುಚಿತ ವರ್ತನೆಯು ಸಮಾಜದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ಆರೋಪಿಯು ಪ್ರಭಾವಿಯಾಗಿದ್ದು, ಜಾಮೀನಿನ ಮೇಲೆ ಹೊರಬಂದಲ್ಲಿ ಸಾಕ್ಷ್ಯನಾಶ ಮಾಡುವ ಅಥವಾ ಸಂತ್ರಸ್ತೆಯ ಮೇಲೆ ಒತ್ತಡ ಹೇರುವ ಸಾಧ್ಯತೆಯಿದೆ’ ಎಂದು ಸರ್ಕಾರಿ ಪರ ವಕೀಲರು ನ್ಯಾಯಾಲಯದ ಗಮನಕ್ಕೆ ತಂದರು. ಈ ವಾದವನ್ನು ಪುರಸ್ಕರಿಸಿದ ನ್ಯಾಯಾಧೀಶರು ಜಾಮೀನು ನೀಡಲು ನಿರಾಕರಿಸಿದರು.

Share This Article