ಸುದ್ದಿಒನ್, ಚಿತ್ರದುರ್ಗ, ಮಾರ್ಚ್ . 01 : ಮಳೆಗಾಲ ಬರುವುದರೊಳಗಾಗಿ ಲೋಕೋಪಯೋಗಿ ಇಲಾಖೆ ವ್ಯಾಪ್ತಿಯ ಜಿಲ್ಲೆಯ ಎಲ್ಲ ರಸ್ತೆ ಗುಂಡಿಗಳನ್ನು ಮುಚ್ಚಿಸಲು ಅಗತ್ಯ ಕ್ರಮವಹಿಸಬೇಕು ಎಂದು ಶಾಸಕ ಟಿ.ರಘುಮೂರ್ತಿ ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಶನಿವಾರ ಏರ್ಪಡಿಸಲಾಗಿದ್ದ ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿ ಅವರು ಅಧಿಕಾರಿಗಳಿಗೆ ತಾಕೀತು ಮಾಡಿದರು.

ಒಂದು ತಿಂಗಳೊಳಗೆ ಜಿಲ್ಲೆಯ ಎಲ್ಲ ರಸ್ತೆ ಗುಂಡಿ ಮುಚ್ಚಿಸಲಾಗುವುದು ಎಂದು ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಇಂಜಿನಿಯರ್ ಸಭೆಗೆ ಮಾಹಿತಿ ನೀಡಿದರು.

