ನವದೆಹಲಿ : ಇಷ್ಟು ತಿಂಗಳು ಕೊರೊನಾ ಇಲ್ಲದೆ ಜನ ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದರು. ಯಾಕಂದ್ರೆ ಕೊರೊನಾ ಎಂಬ ಕಾಣದ ವೈರಸ್ ನಿಂದಾಗಿ ಜನರ ಜೀವನ ನೆಲ ಕಚ್ಚಿದೆ. ಈ ವರ್ಷದಿಂದ ಕೊಂಚ ಚೇತರಿಸಿಕೊಳ್ಳುತ್ತಿದ್ದಾರೆ. ಆದರೆ ಇದೀಗ ಮತ್ತೆ ಕೊರೊನಾ ಹೆಚ್ಚಳ ಜನರನ್ನು ಜಿಗುಪ್ಸೆಗೆ ದೂಡಿದೆ.
ಕರ್ನಾಟಕ, ತಮಿಳುನಾಡು, ಮಹಾರಾಷ್ಟ್ರ, ತೆಲಂಗಾಣ ಹಾಗೂ ಕೇರಳ ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚಳವಾಗುತ್ತಿದೆ. ಈ ಹಿನ್ನೆಲೆ ಕೇಂದ್ರ ಸರ್ಕಾರ ಐದು ರಾಜ್ಯಗಳಿಗೆ ಪತ್ರ ಬರೆದಿದೆ. ಕೋವಿಡ್ ಹೆಚ್ಚಾಗುತ್ತಿರುವ ಕಾರಣ ತೀವ್ರ ನಿಗಾವಹಿಸುವಂತೆ ಸೂಚಿಸಿದೆ. ಜಿನೋಮ್ ಸೀಕ್ವೆನ್ಸ್ ಪರೀಕ್ಷೆ. ಕೋವಿಡ್ ಪರೀಕ್ಷೆ ಹೆಚ್ಚಿಸುವಂತೆ ರಾಜ್ಯಗಳಿಗೆ ಸೂಚಿಸಿದೆ. ಇದೇ ಶೀತ, ಕೆಮ್ಮು, ಜ್ವರ ಕಾಣಿಸಿದರೂ ಸೂಕ್ತ ಚಿಕಿತ್ಸೆ ಜೊತೆಗೆ ಕೋವಿಡ್ ಪರೀಕ್ಷೆ ಮಾಡಿಸಲು ಸೂಚಿಸಿದೆ.
ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 3,945 ಕೊರೊನಾ ಪ್ರಕರಣಗಳು ವರದಿಯಾಗಿವೆ. ಕಳೆದ ಎರಡು ದಿನಗಳಿಂದ 4 ಸಾವಿರದ ಸಮೀಪದಲ್ಲಿ ಪ್ರಕರಣಗಳು ಪತ್ತೆಯಾಗುತ್ತಿವೆ. ಇದಕ್ಕೂ ಮುನ್ನ ಗುರುವಾರ 4,041 ಪ್ರಕರಣಗಳು ದಾಖಲಾಗಿದ್ದವು. ಇದು ಕಳೆದ ಮೂರು ತಿಂಗಳಲ್ಲೇ ಗರಿಷ್ಠ ಪ್ರಕರಣಗಳಾಗಿದೆ.
ಶುಕ್ರವಾರ, 2,672 ರೋಗಿಗಳು ಗುಣಮುಖರಾಗಿದ್ದರೆ, 26 ಸೋಂಕಿತರು ಸಾವನ್ನಪ್ಪಿದ್ದಾರೆ. ಈಗ 2,162 ರೋಗಿಗಳು ಚಿಕಿತ್ಸೆ ಪಡೆಯುತ್ತಿದ್ದಾರೆ. ದೇಶದಲ್ಲಿ ಇದುವರೆಗೆ 4.32 ಕೋಟಿ ಕೊರೊನಾ ಪಾಸಿಟಿವ್ ಗೆ ಒಳಗಾಗಿದ್ದಾರೆ. ಈ ಪೈಕಿ 4.26 ಕೋಟಿ ಮಂದಿ ಗುಣಮುಖರಾಗಿದ್ದಾರೆ. 5.24 ಲಕ್ಷ ಮಂದಿ ಪ್ರಾಣ ಕಳೆದುಕೊಂಡಿದ್ದಾರೆ.