Connect with us

Hi, what are you looking for?

ಪ್ರಮುಖ ಸುದ್ದಿ

ಕೋವಿಡ್ ಹಿನ್ನಲೆ: ತಾಯಿ ಮತ್ತು ಮಕ್ಕಳ ಆರೈಕೆಗೆ ಪ್ರತ್ಯೇಕ ವಾರ್ಡ್

ಸುದ್ದಿಒನ್,ಚಿತ್ರದುರ್ಗ,( ಮೇ.24) : ಕೋವಿಡ್-19 ಸಾಂಕ್ರಾಮಿಕ ರೋಗ ಎರಡನೇ ಅಲೆಯು ತೀವ್ರತರವಾಗಿ ಹರಡುತ್ತಿದ್ದು, ಗರ್ಭೀಣಿಯರಿಗೆ ಹಾಗೂ ಮಕ್ಕಳಿಗೂ ಸೋಂಕು ತಗಲುತ್ತಿರುವುದರಿಂದ ಸುರಕ್ಷಿತವಾಗಿ ಹೆರಿಗೆ ಮಾಡಿಸಲು ತಾಯಿ ಮತ್ತು ಮಕ್ಕಳ ಆರೈಕೆಗಾಗಿ ಪ್ರತ್ಯೇಕ ವಾರ್ಡ್ ತೆರೆಯಲಾಗುವುದು ಎಂದು ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ತಿಳಿಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ಆರೋಗ್ಯ ಇಲಾಖೆ ಅಧಿಕಾರಿಗಳು ಹಾಗೂ ಖಾಸಗಿ ನಸಿರ್ಂಗ್ ಹೋಂ ಮುಖ್ಯಸ್ಥರೊಂದಿಗೆ ಹಮ್ಮಿಕೊಂಡಿದ್ದ ಸಭೆಯಲ್ಲಿ ಅವರು ಮಾತನಾಡಿದರು.

ಜಿಲ್ಲಾಸ್ಪತ್ರೆಯ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಸೇರಿದಂತೆ ಅಲ್ಲಿನ 300ಕ್ಕೂ ಹೆಚ್ಚು ಹಾಸಿಗೆಗಳನ್ನು ಕೋವಿಡ್ ಚಿಕಿತ್ಸೆಗಾಗಿ ಮೀಸಲಿಡಲಾಗಿದೆ. ಇಲ್ಲಿನ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಪ್ರತಿ ದಿನ 20 ರಿಂದ 30 ಹೆರಿಗೆಗಳಾಗುತ್ತಿವೆ. ತಿಂಗಳಿಗೆ ಸುಮಾರು 700 ರಿಂದ 800 ಹೆರಿಗೆಗಳಾಗುತ್ತಿವೆ. ಹಾಗಾಗಿ ಇಲ್ಲಿನ ಒತ್ತಡ ಕಡಿಮೆ ಮಾಡುವ ಸಲುವಾಗಿ ಎಬಿಆರ್‍ಕೆ ಅಡಿ ಖಾಸಗಿ ಆಸ್ಪತ್ರೆಗಳಲ್ಲಿಯೂ ಉಚಿತ ಚಿಕಿತ್ಸೆ ನೀಡುವ ಅವಕಾಶ ಕಲ್ಪಿಸಲಾಗಿದೆ ಎಂದರು.

ಅಕ್ಷಯ ಗೋಬ್ಲಲ್ ಆಸ್ಪತ್ರೆ, ರವಿ ನಸಿರ್ಂಗ್ ಹೋಂ, ಉದಯ ನಸಿರ್ಂಗ್ ಹೋಂಗಳಲ್ಲಿ ಚಿಕಿತ್ಸೆ ನೀಡಲಾಗುವುದು. ಈ ಖಾಸಗಿ ಆಸ್ಪತ್ರೆಗಳಿಗೆ ನಾನ್ ಕೋವಿಡ್ ಪ್ರಕರಣಗಳನ್ನು ಮಾತ್ರ ಶಿಫಾರಸ್ಸು ಮಾಡಲಾಗುವುದು. ಕೋವಿಡ್‍ಗೆ ಸಂಬಂಧಿಸಿದಂತೆ ಜಿಲ್ಲಾಸ್ಪತ್ರೆಯಲ್ಲಿ ಹಾಗೂ ಹೆಚ್ಚುವರಿಯಾಗಿ ಬಸವೇಶ್ವರ ವೈದ್ಯಕೀಯ ಆಸ್ಪತ್ರೆಯಲ್ಲಿ ಪ್ರತ್ಯೇಕ ಹಾಸಿಗೆ ವ್ಯವಸ್ಥೆ ಕಲ್ಪಿಸಲಾಗುವುದು. ಸುರಕ್ಷಿತಾ ಕ್ರಮಗಳನ್ನು ಅನುಸರಿಸುವುದರ ಮೂಲಕ ತಾಲ್ಲೂಕು ಆಸ್ಪತ್ರೆಗಳಲ್ಲಿಯೂ ಹೆರಿಗೆ ಮಾಡಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು.

ಬ್ಲಾಕ್ ಮತ್ತು ವೈಟ್ ಫಂಗಸ್‍ಗೆ ಪ್ರತ್ಯೇಕ ವಾರ್ಡ್: ಜಿಲ್ಲಾಸ್ಪತ್ರೆಯಲ್ಲಿ ಹಾಸಿಗೆಗಳ ಕೊರತೆ ಇರುವ ಕಾರಣ ನಗರದ ಬಸವೇಶ್ವರ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಬ್ಲಾಕ್ ಮತ್ತು ವೈಟ್ ಫಂಗಸ್‍ಗೆ ಪ್ರತ್ಯೇಕ ವಾರ್ಡ್ ಸ್ಥಾಪಿಸಿ ಚಿಕಿತ್ಸೆ ನೀಡಲು ಕ್ರಮಕೈಗೊಳ್ಳಲಾಗಿದೆ. ಬ್ಲಾಕ್ ಮತ್ತು ವೈಟ್ ಫಂಗಸ್‍ಗೆ ಸರ್ಕಾರದಿಂದಲೇ ಔಷಧಿಗಳು ಸರಬರಾಜು ಆಗಲಿವೆ ಎಂದರು.

ಜಿಲ್ಲೆಯಲ್ಲಿ ಬ್ಲಾಕ್ ಫಂಗಸ್ ಪ್ರಕರಣಗಳು ಇದುವರೆಗೂ 28 ಪ್ರಕರಣಗಳು ವರದಿಯಾಗಿವೆ. ಆಯಾ ಜಿಲ್ಲಾಮಟ್ಟದಲ್ಲಿ ಚಿಕಿತ್ಸೆ ನೀಡಲು ನಿರ್ದೇಶನ ನೀಡಲಾಗಿದೆ. ಹಾಗಾಗಿ ಜಿಲ್ಲೆಯಲ್ಲಿ ವರದಿಯಾದ ಪ್ರಕರಣಗಳಿಗೆ ಜಿಲ್ಲೆಯಲ್ಲಿಯೇ ಚಿಕಿತ್ಸೆ ನೀಡಲಾಗುವುದು ಎಂದರು.

ಬ್ಲಾಕ್ ಫಂಗಸ್‍ಗೆ ಸಂಬಂಧಿಸಿದಂತೆ ಕರ್ನಾಟಕ ಕಿವಿ ಮತ್ತು ಗಂಟಲು ಆಸ್ಪತ್ರೆಯ ವೈದ್ಯ ಡಾ.ಪ್ರಹ್ಲಾದ್ ಅವರನ್ನು ನೋಡಲ್ ಅಧಿಕಾರಿಯನ್ನಾಗಿ ನೇಮಕ ಮಾಡಲಾಗಿದೆ ಎಂದು ತಿಳಿಸಿದರು.

ವೈದ್ಯರ ನಡೆ ಹಳ್ಳಿ ಕಡೆ: ಕೋವಿಡ್ ಸೋಂಕು ಎರಡನೇ ಅಲೆ ಗ್ರಾಮೀಣ ಪ್ರದೇಶದಲ್ಲಿ ಹೆಚ್ಚಾಗಿರುವುದರಿಂದ ವೈದ್ಯರು ಮತ್ತು ಆರೋಗ್ಯ ಸಿಬ್ಬಂದಿಗಳು, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತರು, ಸ್ಥಳೀಯ ಅಧಿಕಾರಿಗಳ ತಂಡ ಪ್ರತಿ ಮನೆ ಮನೆ ಸಮೀಕ್ಷೆ ಮಾಡಿ ರೋಗ ಲಕ್ಷಣಗಳು ಕಂಡು ಬರುವವರಿಗೆ ಸ್ಥಳದಲ್ಲಿಯೇ ಮೆಡಿಕಲ್ ಕಿಟ್ ವಿತರಣೆ ಮಾಡುವ ಕೆಲಸವನ್ನು ಸಂಚಾರಿ ಕ್ಲಿನಿಕ್ ತಂಡದವರು ಕೈಗೊಳ್ಳಲಿದ್ದಾರೆ. ಸಾರ್ವಜನಿಕರು ಅಗತ್ಯ ಸಹಕಾರ ನೀಡಬೇಕು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.

ಮಕ್ಕಳಿಗೆ ಪ್ರತ್ಯೇಕ ವಾರ್ಡ್ ಸ್ಥಾಪಿಸಿ: ಈಗಾಗಲೇ ಮಕ್ಕಳಿಗೂ ಕೋವಿಡ್ ಲಕ್ಷಣಗಳು ಇರುವ ಸಾಮಾನ್ಯ ಪ್ರಕರಣಗಳು ವರದಿಯಾಗುತ್ತಿವೆ. ಹಾಗಾಗಿ ಮಕ್ಕಳಿಗಾಗಿ ಪ್ರತ್ಯೇಕ ವಾರ್ಡ್ ತೆರೆಯಬೇಕು ಎಂದು ಮಕ್ಕಳ ತಜ್ಞ ಡಾ.ದೇವರಾಜ್ ಹೇಳಿದರು. ಆಯಾ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯರು ತಮ್ಮ ಹಂತದಲ್ಲಿಯೇ ಕಂಡು ಬರುವ ಪ್ರಕರಣಗಳನ್ನು ಚಿಕಿತ್ಸೆ ನೀಡುವುದರಿಂದ ಅನಾವಶ್ಯಕವಾಗಿ ಅವರು ಇತರೆ ಕಡೆ ಪ್ರಯಾಣ ಮಾಡುವುದು ಹಾಗೂ ಇದರಿಂದ ಸೋಂಕು ಹರಡುವುದು ತಪ್ಪಲಿದೆ ಎಂದರು.

ಅಪರ ಜಿಲ್ಲಾಧಿಕಾರಿ ಇ.ಬಾಲಕೃಷ್ಣ, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಸಿ.ಎಲ್.ಫಾಲಾಕ್ಷ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಹೆಚ್.ಜೆ. ಬಸವರಾಜ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ರಂಗನಾಥ್, ಬಸವೇಶ್ವರ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಅಧೀಕ್ಷಕ ಡಾ.ಫಾಲಾಕ್ಷಯ್ಯ ಸೇರಿದಂತೆ ಆರೋಗ್ಯ ಇಲಾಖೆ ಹಾಗೂ ಖಾಸಗಿ ನಸಿರ್ಂಗ್ ಹೋಂ ಮುಖ್ಯಸ್ಥರು ಇದ್ದರು.
======

Click to comment

Leave a Reply

Your email address will not be published. Required fields are marked *

Latest

Home

  ಸುದ್ದಿಒನ್, ದಾವಣಗೆರೆ, (ಆ.05): ರೈತರಿಗೆ ಕೃಷಿ ಚಟುವಟಿಕೆ ಅತ್ಯವಶ್ಯಕವಾಗಿ ಬೇಕಾಗಿರುವ ಟ್ರಾಕ್ಟರ್ ಹಾಗೂ ಕೃಷಿ ಯಂತ್ರೋಪಕರಣಗಳಿಗೆ ಎಂಆರ್‌ಪಿ ದರ ನಿಗದಿಪಡಿಸುವಂತೆ ಸಂಸದ ಜಿ.ಎಂ. ಸಿದ್ದೇಶ್ವರ್ ಮನವಿ ಮಾಡಿದ್ದಾರೆ. ದೆಹಲಿಯ ಕೃಷಿ ಭವನದಲ್ಲಿ...

ಚಿತ್ರದುರ್ಗ

ಸುದ್ದಿಒನ್, ಚಿತ್ರದುರ್ಗ, (ಆ.05) : ಜನಸ್ನೇಹಿಯಾಗಿ ಅಧಿಕಾರಿಗಳು ಕರ್ತವ್ಯ ನಿರ್ವಹಿಸಿದರೆ ಅವರ ಹೆಸರು ಶಾಶ್ವತವಾಗಿರುತ್ತದೆ ಎಂಬುದು ಚಿತ್ರದುರ್ಗ ಜಿಲ್ಲಾಧಿಕಾರಿಯೇ ಸಾಕ್ಷಿಯಾಗಿದ್ದಾರೆ. ಜಿಲ್ಲೆಗೆ ಕಾಲಿಟ್ಟ ದಿನದಿಂದಲೂ ಜನರ ನೋವು ನಲಿವಿಗೆ ತಾಯಿಯಂತೆ ಕಿವಿಯಾಗಿದ್ದಾರೆ. ಮೊಳಕಾಲ್ಮೂರು...

ಪ್ರಮುಖ ಸುದ್ದಿ

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಕಾಡಾನೆಗಳ ಹಾವಳಿ ಸಹಜ. ಸಾಕಷ್ಟು ಜನ ರೈತರ ಬೆಳೆ ನಾಶವಾಗಿದೆ. ಇದೀಗ ಮೂಡಿಗೆರೆ ತಾಲೂಕಿನ ಕಾರ್ ಬೈಲ್ ಗ್ರಾಮದಲ್ಲೂ ರೈತ ಬೆಳೆನಾಶವಾಗಿರೋ ಘಟನೆ ನಡೆದಿದೆ. ಕಾರ್ ಬೈಲ್ ಗ್ರಾಮದ ತೋಟವೊಂದಕ್ಕೆ...

ಪ್ರಮುಖ ಸುದ್ದಿ

ಬೆಂಗಳೂರು: ಯಡಿಯೂರಪ್ಪ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ನೆಕ್ಸ್ಟ್ ಸಿಎಂ ಯಾರಾಗ್ತಾರೆ ಅನ್ನೋ ರೇಸ್ ನಲ್ಲಿ ತೀರಾ ಹತ್ತಿರದಲ್ಲಿ ಕಾಂಪೀಟೇಷನ್ ಕೊಟ್ಟವರು ಅರವಿಂದ್ ಬೆಲ್ಲದ್. ಸಾಕಷ್ಟು ಜನರು ಸಾಲಿನಲ್ಲಿದ್ರು ಅರವಿಂದ್ ಬೆಲ್ಲದ್...

ಪ್ರಮುಖ ಸುದ್ದಿ

ಬೆಂಗಳೂರು: ಬಸವರಾಜ್ ಬೊಮ್ಮಾಯಿ ಅವರ ನೇತೃತ್ವದ ಸರ್ಕಾರ 5 ಜನ ಐಎಎಸ್ ಅಧಿಕಾರಿಗಳನ್ನ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಜೊತೆಗೆ ಸಿಎಂ ಪ್ರಧಾನ ಕಾರ್ಯದರ್ಶಿಯಾಗಿ ಮಂಜುನಾಥ್ ಪ್ರಸಾದ್ ರನ್ನ ನೇಮಕ ಮಾಡಲಾಗಿದೆ. ವಾರ್ತಾ...

ಪ್ರಮುಖ ಸುದ್ದಿ

  ಸುದ್ದಿಒನ್, ಚಿತ್ರದುರ್ಗ, (ಆ.05) : ಹಿಂದುಳಿದ ವರ್ಗಗಳ ನಾಯಕಿ, ರಾಜ್ಯದ ಗೊಲ್ಲ ಸಮುದಾಯದ ಏಕೈಕ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್ ಅವರಿಗೆ ಸಚಿವ ಸ್ಥಾನ ಕೈತಪ್ಪಿದಕ್ಕೆ ಬೆಂಬಲಿಗರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಗರದ...

You May Also Like

ಆರೋಗ್ಯ

ಮಾಹಿತಿ: ಮಂಜುನಾಥ ಯಾದವ್ (97417 38979) ಬೇಳೆಕಟ್ಟು ಸಾರು ಅಂದ್ರೆ ಯಾರಿಗಿಷ್ಟ ಇಲ್ಲ ಹೇಳಿ. ಎರಡ್ಮೂರು ದಿನ ಕೂಡ ಈ ಸಾಂಬಾರ್ ತಿನ್ನೋದು ಅಂದ್ರೆ ಟೇಸ್ಟೋ ಟೇಸ್ಟೂ..ಆದ್ರೆ ಕೆಲವೊಬ್ರಿಗೆ ಈ ಸಾಂಬಾರ್ ಮಾಡೋಕೆ...

ಪ್ರಮುಖ ಸುದ್ದಿ

ಮುಂಬೈ : ಮುಂಬೈ ಬೆಡಗಿ ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾ ಪೊಲೀಸರ ವಶದಲ್ಲಿದ್ದಾರೆ. ರಾಜ್ ಕುಂದ್ರಾ ವಿಚಾರಣೆ ನಡೆಯುತ್ತಿದ್ದು, ಒಂದೊಂದೆ ವಿಚಾರಗಳು ಬಯಲಿಗೆ ಬರ್ತಿವೆ. ಇದೀಗ ಅಶ್ಲೀಲ ವಿಡಿಯೋಗೆ ಸಂಬಂಧಿಸಿದಂತೆ ರಾಜ್...

ಆರೋಗ್ಯ

ನಮ್ಮ ಸುತ್ತ ಮುತ್ತ ಸಣ್ಣ ಪುಟ್ಟ ಅಂಗಡಿಗಳಲ್ಲಿ ಸಿಗುವ ವಸ್ತುವನ್ನ ನಾವೂ ನೆಗ್ಲೆಕ್ಟ್ ಮಾಡ್ತೀವಿ. ಚಿಕ್ಕವರಿದ್ದಾಗ ಬಾಯಿ ಚಪ್ಪರಿಸಿಕೊಂಡು ತಿನ್ನುವ ಪದಾರ್ಥಗಳನ್ನ ಬೆಳೀತಾ ಬೆಳೀತಾ ಮರೆತೆ ಹೋಗ್ತೀವಿ. ಆದ್ರೆ ಅಂದು ಖುಷಿಗಾಗಿ ತಿನ್ನುವ...

ಪ್ರಮುಖ ಸುದ್ದಿ

ಕಾಬೂಲ್: ಕಂಧರ್ ಪ್ರಾಂತ್ಯದ ಜೀರೊಯ್ ಜಿಲ್ಲೆಯಲ್ಲಿ ಅಫ್ಘಾನಿಸ್ತಾನದ ಭದ್ರತಾ ಪಡೆಗಳು ನಡೆಸಿದ ವೈಮಾನಿಕ ದಾಳಿಯಲ್ಲಿ ಹೆಚ್ಚಿನ ಸಂಖ್ಯೆಯ ಉಗ್ರರು ಹತರಾಗಿದ್ದಾರೆ. ಮತ್ತೆ ಕೆಲವರು ಗಾಯಗೊಂಡಿದ್ದಾರೆ. ಪ್ರಸ್ತುತ, ಇದಕ್ಕೆ ಸಂಬಂಧಿಸಿದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ...

Copyright © 2021 Suddione. Kannada online news portal

error: Content is protected !!