Connect with us

Hi, what are you looking for?

ಪ್ರಮುಖ ಸುದ್ದಿ

ಚಿತ್ರದುರ್ಗ ಜಿಲ್ಲೆಯಲ್ಲಿ ಕೋವಿಡ್ ಕಫ್ರ್ರ್ಯೂ ; ಯಾವುದಕ್ಕೂ ಅನುಮತಿ, ನಿರ್ಬಂಧ, ಇಲ್ಲಿದೆ ಸಂಪೂರ್ಣ ಮಾಹಿತಿ

ಸುದ್ದಿಒನ್, ಚಿತ್ರದುರ್ಗ : ಕೋವಿಡ್-19 ಸೋಂಕಿನ ಎರಡನೇ ಅಲೆ ತಡೆಗಟ್ಟುವ ನಿಟ್ಟಿನಲ್ಲಿ ರಾತ್ರಿ ಮತ್ತು ವಾರಾಂತ್ಯ ಕಫ್ರ್ರ್ಯೂ ಜಾರಿಗೊಳಿಸಿದ್ದು, ಕೆಲ ಸೇವೆಗಳ ಮೇಲೆ ನಿರ್ಬಂಧ ಹಾಗೂ ಕೆಲವುಗಳಿಗೆ ಅನುಮತಿ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ತಿಳಿಸಿದ್ದಾರೆ.

ಎಲ್ಲ ಬಗೆಯ ಧಾರ್ಮಿಕ ಸ್ಥಳಗಳಿಗೆ ಸಾರ್ವಜನಿಕರ ಪ್ರವೇಶ ನಿಷೇಧ ಮಾಡಲಾಗಿದೆ. ಆದರೆ ದೈನಂದಿನ ಪೂಜಾ ಕೈಂಕರ್ಯಕ್ಕೆ ತಡೆ ಇಲ್ಲ. ಶಾಲಾ-ಕಾಲೇಜು, ಕೋಚಿಂಗ್ ಸೆಂಟರ್, ತರಬೇತಿ ಕೇಂದ್ರ, ಚಿತ್ರಮಂದಿರ, ಶಾಪಿಂಗ್ ಮಾಲ್, ಜಿಮ್, ಸ್ಪಾ, ಯೋಗಾ ಕೇಂದ್ರ, ಕ್ರೀಡಾ ಸಂಕೀರ್ಣ, ಈಜುಕೋಳ, ಮನೋರಂಜನಾ ಪಾರ್ಕ್, ರಂಗಮಂದಿರ, ಸಭಾಂಗಣ, ಬಾರ್, ಆಡಿಟೋರಿಯಂನಂತಹ ಸ್ಥಳಗಳನ್ನು ತೆರೆಯುವುದನ್ನು ನಿಷೇಧಿಸಲಾಗಿದೆ. ಎಲ್ಲ ರೀತಿಯ ಸಾಮಾಜಿಕ, ರಾಜಕೀಯ, ಕ್ರೀಡೆ, ಮನೋರಂಜನೆ, ಶೈಕ್ಷಣಿಕ, ಸಾಂಸ್ಕøತಿಕ, ಧಾರ್ಮಿಕ ಹಾಗೂ ಇತರೆ ಕಾರ್ಯಕ್ರಮಗಳನ್ನು ನಿಷೇಧಿಸಲಾಗಿದೆ.

ಕೋವಿಡ್ ಸುರಕ್ಷಾ ನಿಯಮಗಳೊಂದಿಗೆ ಎಲ್ಲ ಬಗೆಯ ನಿರ್ಮಾಣ, ದುರಸ್ತಿ ಚಟುವಟಿಕೆಗಳಿಗೆ ಅನುಮತಿ ನೀಡಲಾಗಿದೆ. ಮುಂಗಾರು ಪೂರ್ವ ಕೃಷಿ ಚಟುವಟಿಕೆಗಳಿಗೆ ಯಾವುದೇ ನಿಬರ್ಂಧವಿಲ್ಲ. ಎಲ್ಲ ಬಗೆಯ ಕೈಗಾರಿಕೆಗಳು, ಸಂಸ್ಥೆಗಳು, ಉತ್ಪಾದನಾ ಘಟಕಗಳು ಕಾರ್ಯನಿರ್ವಹಿಸಬಹುದು. ಸಿಬ್ಬಂದಿ ಓಡಾಟಕ್ಕೆ ಸಂಸ್ಥೆಗಳಿಂದ ಪಡೆದುಕೊಂಡ ಐಡಿ ಕಾರ್ಡ್ ತೋರಿಸುವುದು ಕಡ್ಡಾಯವಾಗಿದೆ. ಪಡಿತರ ಅಂಗಡಿ ಹಾಗೂ ದಿನಸಿ, ಹಣ್ಣು, ತರಕಾರಿ, ಹಾಲಿನ ಬೂತ್, ಮೀನು, ಮಾಂಸ, ಪಶು ಆಹಾರ ಅಂಗಡಿಗಳ ಸೇವೆ ಅಭಾದಿತ. ಮೈದಾನ ಇಲ್ಲವೆ ತೆರೆದ ಪ್ರದೇಶದಲ್ಲಿ ಮಾತ್ರ ಸಗಟು ತರಕಾರಿ, ಹಣ್ಣು, ಹೂವಿನ ವ್ಯಾಪಾರ ನಡೆಸಲು ಅನುಮತಿ ಕಟ್ಟಡದಲ್ಲಿ ನಡೆಸುವಂತಿಲ್ಲ. ಬ್ಯಾಂಕ್, ವಿಮಾ ಕಚೇರಿ, ಎಟಿಎಂ, ಮುದ್ರಣ ಮತ್ತು ಎಲೆಕ್ಟ್ರಾನಿಕ್ ಮಾಧ್ಯಮ, ಷೇರು ವಿನಿಮಯ ಸೇವಾ ಕೇಂದ್ರಗಳಿಗೆ ಅವಕಾಶ ಕಲ್ಪಿಸಲಾಗಿದೆ. ರಾಜ್ಯದೊಳಗೆ ವ್ಯಕ್ತಿಗಳ ಸಂಚಾರ ಹಾಗೂ ಸರಕು ಸಾಗಾಣಿಕೆಗೆ ಮುಕ್ತ ಅವಕಾಶ. ಯಾವುದೇ ಪೂರ್ವನುಮತಿ ಬೇಕಿಲ್ಲ. ಮೆಟ್ರೋ, ಬಸ್, ಕ್ಯಾಬ್, ಆಟೋ ಸಂಚಾರಕ್ಕೆ ಅವಕಾಶ. ಒಟ್ಟು ಆಸನ ಸಾಮಾಥ್ರ್ಯ ಶೇ.50 ಮಾತ್ರ. ಶನಿವಾರ ಮತ್ತು ಭಾನುವಾರ ದಿನಸಿ, ತರಕಾರಿ, ಹಾಲು ಅಂಗಡಿಗಳು ಬೆಳಿಗ್ಗೆ 6 ರಿಂದ 10ರವರೆಗೆ ಮಾತ್ರ ತೆರೆದಿರುತ್ತವೆ.

ಮದುವೆಗೆ 50 ಜನ: ಸರ್ಕಾರದ ಹೊಸ ಮಾರ್ಗಸೂಚಿಯನ್ವಯ ಮದುವೆ ಸಮಾರಂಭಗಳಿಗೆ ಜಿಲ್ಲಾಡಳಿತದ ಅನುಮತಿ ಕಡ್ಡಾಯವಾಗಿದೆ. ಮದುವೆಗೆ 50 ಜನರಿಗೆ ಮಾತ್ರ ಅವಕಾಶ ಕಲ್ಪಿಸಿದ್ದು, ಮದುವೆ ಸಮಾರಂಭಗಳಿಗೆ ಪಾಸ್ ಪಡೆಯುವುದು ಕಡ್ಡಾಯವಾಗಿದೆ. ಅಂತ್ಯಕ್ರಿಯೆಗೆ 20 ಜನರು ಮಾತ್ರ ಪಾಲ್ಗೊಳ್ಳಬಹುದಾಗಿದೆ.

ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದು, ವ್ಯಕ್ತಿಗತ ಅಂತರ ಕಾಪಾಡಿಕೊಳ್ಳುವುದು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಸ್ವಚ್ಛತೆ, ಸ್ಯಾನಿಟೈಜೇಷನ್, ಥರ್ಮಲ್ ಸ್ಕ್ರಿನಿಂಗ್ ಬಳಕೆ ಕುರಿತು ಅಧಿಕಾರಿಗಳಿಂದ ಸಾರ್ವಜನಿಕರಿಗೆ ಅರಿವು ಮೂಡಿಸುವ ಕಾರ್ಯವೂ ನಡೆಯುತ್ತಿದೆ. ಕೊರೊನಾ ನಿಯಂತ್ರಣಕ್ಕೆ ಸರ್ಕಾರ ವಿಧಿಸಿದ ಹೊಸ ಮಾರ್ಗಸೂಚಿಗಳ ಯಥಾವತ್ ಅನುಷ್ಠಾನಗೊಳಿಸಲು ಜಿಲ್ಲಾಡಳಿತ ನಿರ್ಧರಿಸಿದೆ.

Click to comment

Leave a Reply

Your email address will not be published. Required fields are marked *

You May Also Like

ಪ್ರಮುಖ ಸುದ್ದಿ

ಕೊಡಗು: ಸದ್ಯ ಲಾಕ್ಡೌನ್ ನಿಂದಾಗಿ ಅದೆಷ್ಟೋ ಜನ ತುತ್ತು ಅನ್ನಕ್ಕೂ ಪರದಾಡುವಂತ ಪರಿಸ್ಥಿತಿ ನಿರ್ಮಾಣವಾಗಿದೆ. ಇಂಥವರ ಸಹಾಯಕ್ಕಾಗಿ ಅದೆಷ್ಟೋ ಜನ ತಮ್ಮ ಕೈಲಾದ ಸಹಾಯ ಮಾಡುತ್ತಿದ್ದಾರೆ. ಈ ಮಧ್ಯೆ ಅಲ್ಲೊಬ್ಬ ಯುವಕ ತನ್ನ...

ಪ್ರಮುಖ ಸುದ್ದಿ

ಸುದ್ದಿಒನ್, ದಾವಣಗೆರೆ,(ಜೂನ್.15): ಜಿಲ್ಲೆಯಲ್ಲಿ ಕೋವಿಡ್-19 ವೈರಸ್‍ಗೆ ಸಂಬಂಧಿಸಿದಂತೆ ಮಂಗಳವಾರ ವರದಿಯಲ್ಲಿ 183 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 47668 ಕ್ಕೆ ಏರಿಕೆಯಾಗಿದೆ. ಇಂದು ಹೊಸದಾಗಿ ದಾವಣಗೆರೆ 69...

ಪ್ರಮುಖ ಸುದ್ದಿ

ಸುದ್ದಿಒನ್, ಚಿತ್ರದುರ್ಗ, (ಜೂ.15) : ನಗರದ ವಿ .ಪಿ. ಬಡಾವಣೆಯಲ್ಲಿ ಕನ್ಸರ್‍ವೆನ್ಸಿಗಳನ್ನು ಒತ್ತುವರಿ ಮಾಡಲಾಗಿದೆ ಇವುಗಳನ್ನು ತೆರವು ಮಾಡಿ ಎಂದು ಶಾಸಕ ಜಿ.ಎಚ್.ತಿಪ್ಪಾರೆಡ್ಡಿ ಪೌರಾಯುಕ್ತರಿಗೆ ದೂರವಾಣಿ ಮೂಲಕ ಸೂಚನೆ ನೀಡಿದರು. ನಗರದ ವಿ.ಪಿ.ಬಡಾವಣೆಯ...

ಪ್ರಮುಖ ಸುದ್ದಿ

ಆರೋಗ್ಯ ಇಲಾಖೆ ಹೆಲ್ತ್ ಬುಲೆಟಿನ್ ರಿಲೀಸ್ ಮಾಡಿದ್ದು, ಕಳೆದ 24 ಗಂಟರಯಲ್ಲಿ ರಾಜ್ಯದಲ್ಲಿ 5041ಹೊಸ ಪ್ರಕರಣ ಪತ್ತೆಯಾಗಿದ್ದಾರೆ. ಕೊರೊನಾ ಕಂಟ್ರೊಲ್ ಗೆ ಮಾಡಿದ್ದ ಲಾಕ್ಡೌನ್ ವರ್ಕ್ಔಟ್ ಆಗಿದೆ. 48428 ರ್ಯಾಪಿಡ್ ಆ್ಯಂಟಿಜೆನ್ ಟೆಸ್ಟ್,...

ಪ್ರಮುಖ ಸುದ್ದಿ

ಸುದ್ದಿಒನ್,ಬಳ್ಳಾರಿ, (ಜೂ.15) : ಬಳ್ಳಾರಿ-ವಿಜಯನಗರ ಜಿಲ್ಲೆಯಲ್ಲಿ ಇತ್ತೀಚಿನ ದಿನಗಳಲ್ಲಿ ಕೋವಿಡ್‍ ಸೋಂಕಿತರ ಸಂಖ್ಯೆ ಕಡಿಮೆಯಾಗುತ್ತಿದೆ. ಜಿಲ್ಲೆಯಲ್ಲಿ ಕೋವಿಡ್‍ನಿಂದ 339 ಜನ ಗುಣಮುಖರಾಗಿದ್ದು ದಿನದಿಂದ ದಿನಕ್ಕೆ ವಿವಿಧ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ....

ಪ್ರಮುಖ ಸುದ್ದಿ

ಚಿತ್ರದುರ್ಗ,(ಜೂನ್15): ಜಿಲ್ಲೆಯಲ್ಲಿ ಕೋವಿಡ್-19 ವೈರಸ್‍ಗೆ ಸಂಬಂಧಿಸಿದಂತೆ ಮಂಗಳವಾರದ ವರದಿಯಲ್ಲಿ 95 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 33,997ಕ್ಕೆ ಏರಿಕೆಯಾಗಿದೆ. ಚಿತ್ರದುರ್ಗ ತಾಲ್ಲೂಕಿನಲ್ಲಿ 16, ಚಳ್ಳಕೆರೆ 18, ಹಿರಿಯೂರು...

ಕ್ರೀಡೆ

ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ನಲ್ಲಿ ಗೆದ್ದವರಿಗೆ ಎಷ್ಟು ಮೊತ್ತ ಸಿಗಬಹುದು ಎಂಬ ಪ್ರಶ್ನೆ ಕ್ರಿಕೆಟ್ ಅಭಿಮಾನಿಗಳಿಗೆ ಯಾವಾಗಲೂ ಕಾಡುವಂತ ಪ್ರಶ್ನೆ. ಆ ಪ್ರಶ್ನೆಗೆ ಇಂದು ಐಸಿಸಿ ಉತ್ತರಿಸಿದೆ. ಟೆಸ್ಟ್ ಚಾಂಪಿಯನ್ ಶಿಪ್...

ಪ್ರಮುಖ ಸುದ್ದಿ

ಚಿತ್ರದುರ್ಗ, (ಜೂನ್.15) : ನಗರದ ಅಲೆಮಾರಿ, ಕೂಲಿ ಕಾರ್ಮಿಕರು, ಬಡವರು ಹಾಗೂ ನಿರ್ಗತಿಕರಿಗೆ ಭಾರತೀಯ ರೆಡ್ ಕ್ರಾಸ್ ಚಿತ್ರದುರ್ಗ ಜಿಲ್ಲಾ ಶಾಖೆ ವತಿಯಿಂದ ಅಗತ್ಯ ದಿನಸಿ ವಸ್ತುಗಳನ್ನು ವಿತರಿಸಲಾಯಿತು. ನಗರದ ಪತ್ರಿಕಾ ಭವನದ...

ಪ್ರಮುಖ ಸುದ್ದಿ

ನವದೆಹಲಿ : ಕೋವಿಡ್ ಸೋಂಕು ಇಳಿಮುಖವಾಗುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅಮೆರಿಕ ಭೇಟಿಗೆ ಸಿದ್ಧತೆಗಳು ನಡೆದಿವೆ. ವರ್ಷದ ಅಂತ್ಯದಲ್ಲಿ ಅಮೆರಿಕ ಪ್ರವಾಸ ಕೈಗೊಳ್ಳಬಹುದು ಎಂದು ಮೂಲಗಳು ತಿಳಿಸಿವೆ. ಆದರೆ ಪ್ರವಾಸದ ಸಮಯ...

error: Content is protected !!