ಬೆಂಗಳೂರು: ಕೇರಳದ ಕೆಲ ಜಿಲ್ಲೆಗಳಲ್ಲಿ ಕಂಡು ಬಂದಿರುವ ಟೊಮ್ಯಾಟೋ ಜ್ವರಕ್ಕೂ ಕೊರೋನಾಕ್ಕೂ ಯಾವುದೇ ಸಂಬಂಧವಿಲ್ಲ. ಇದು ಕೇವಲ ಕೇರಳದ ಕೆಲ ಪ್ರದೇಶಗಳಿಗೆ ಮಾತ್ರ ಸೀಮಿತವಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ಸ್ಪಷ್ಟಪಡಿಸಿದ್ದಾರೆ.
ಟೊಮ್ಯಾಟೋ ಫ್ಲೂ ಹೊಸದಾಗಿ ಬಂದಿರುವ ಜ್ವರ ಅಲ್ಲ. ಇದು ಕೇರಳದಲ್ಲಿ ಕೆಲ ವರ್ಷಗಳಿಂದ ಕಾಣಿಸಿಕೊಳ್ಳುತ್ತಿದೆ. ಇದು ಕೇವಲ ಕೆಲ ಪ್ರದೇಶಗಳಲ್ಲಿ ಮಾತ್ರ ಇದು ಕಾಣಿಸಿಕೊಂಡಿದೆ. 5 ವರ್ಷಕ್ಕಿಂತ ಕೆಳಗಿನ ಮಕ್ಕಳಲ್ಲಿ ಜ್ವರ ಹಾಗೂ ಚರ್ಮದ ಮೇಲೆ ಗುಳ್ಳೆಗಳು ಕಾಣಿಸಿಕೊಳ್ಳುತ್ತಿವೆ. ಕೇರಳದಲ್ಲಿ ಆರೋಗ್ಯ ಇಲಾಖೆ ಇದಕ್ಕೆ ಚಿಕಿತ್ಸೆಗಳನ್ನು ನೀಡುತ್ತಿದೆ. ಕೇರಳ ಆರೋಗ್ಯ ಇಲಾಖೆಯ ಜೊತೆ ಕರ್ನಾಟಕದ ಆರೋಗ್ಯ ಇಲಾಖೆಯೂ ಸಂಪರ್ಕದಲ್ಲಿದೆ ಎಂದು ಹೇಳಿದರು.
ಕೇರಳದಿಂದ ಕರ್ನಾಟಕಕ್ಕೆ ಬರುವ ಪ್ರಯಾಣಿಕರು, ವಿಶೇಷವಾಗಿ ಮಕ್ಕಳ ಬಗ್ಗೆ ನಿಗಾ ಇಡಲು ಈಗಾಗಲೇ ಗಡಿ ಭಾಗದ ಜಿಲ್ಲಾ ವೈದ್ಯಾಧಿಕಾರಿಗಳು ಮತ್ತು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಅಷ್ಟೇ ಅಲ್ಲ ಗಡಿ ಭಾಗದ ಐದಾರು ಜಿಲ್ಲೆಗಳಲ್ಲಿರುವ ಮಕ್ಕಳ ಮೇಲೂ ನಿಗಾ ಇಡಲಾಗಿದೆ. ಮಕ್ಕಳಿಗೆ ಜ್ವರ ಅಥವಾ ಚರ್ಮದ ಮೇಲೆ ಗುಳ್ಳೆಗಳು ಕಂಡು ಬಂದರೆ ಸೂಕ್ತ ತಪಾಸಣೆ ಹಾಗೂ ಚಿಕಿತ್ಸೆ ನೀಡುವಂತೆ ಸೂಚಿಸಲಾಗಿದೆ ಎಂದು ಹೇಳಿದ್ದಾರೆ.
ಟೊಮ್ಯಟೋ ಜ್ವರದ ಬಗ್ಗೆ ಸಾಮಾಜಿಕ ಜಾಲ ತಾಣಗಳಲ್ಲಿ ತಪ್ಪು ಮಾಹಿತಿ ಹರಡುತ್ತಿದೆ. ಸಾರ್ವಜನಿಕರು ಇದನ್ನು ನಂಬಬಾರದು ಎಂದು ಕಿವಿಮಾತು ಹೇಳಿದ್ದಾರೆ. ಇಲ್ಲಿ ತನಕ ಕರ್ನಾಟಕದಲ್ಲಿ ಟೊಮ್ಯಾಟೋ ಫ್ಲೂನ ಯಾವುದೇ ಪ್ರಕರಣಗಳು ದಾಖಲಾಗಿಲ್ಲ. ಆದರೆ ಗಡಿಭಾಗದಲ್ಲಿ, 5 ವರ್ಷಕ್ಕಿಂತ ಕೆಳಗಿನ ಮಕ್ಕಳಿಗೆ ಜ್ವರ ಅಥವಾ ಚರ್ಮದ ಮೇಲೆ ಗುಳ್ಳೆಗಳು ಕಾಣಿಸಿದರೆ ತಪಾಸಣೆ ಮಾಡಲು ಸೂಚಿಸಲಾಗಿದೆ.
ಈ ರಾಶಿಯ ದಂಪತಿಗಳಿಗೆ ಅತಿಯಾದ ಕಿರುಕುಳದಿಂದ ಜಿಗುಪ್ಸೆ, ಶುಕ್ರವಾರದ ರಾಶಿ ಭವಿಷ್ಯ 31 ಜನವರಿ 2025 - ಸೂರ್ಯೋದಯ -…
ದಾವಣಗೆರೆ: ಇತ್ತೀಚೆಗೆ ಮೈಕ್ರೋ ಫೈನಾನ್ಸ್ ಕಾಟಕ್ಕೆ ರಾಜ್ಯದಲ್ಲಿ ಜೀವ ಕಳೆದುಕೊಂಡವರು ಅದೆಷ್ಟೋ. ಇದಕ್ಕೆ ಕಡಿವಾಣ ಹಾಕುವುದಕ್ಕೆ ಸರ್ಕಾರ ಕೂಡ ಸಭೆಗಳನ್ನ…
ಚಿತ್ರದುರ್ಗ. ಜ.30: ಮಹಾತ್ಮಾ ಗಾಂಧೀಜಿಯವರು ಹುತಾತ್ಮರಾದ ದಿನವಾದ ಜ. 30 ರಂದು ಸರ್ವೋದಯ ದಿನವನ್ನಾಗಿ ಆಚರಿಸಲಾಗುತ್ತಿದ್ದು, ಈ ನಿಮಿತ್ತ ಅಪರ…
ಚಿತ್ರದುರ್ಗ. ಜ.30: ಚಿತ್ರದುರ್ಗ ತಾಲ್ಲೂಕಿನ ಕಾಲ್ಗೆರೆ ಹಾಗೂ ಇಸ್ಸಾಮುದ್ರ ಗ್ರಾಮ ಪಂಚಾಯಿತಿಗಳಿಗೆ ಗುರುವಾರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ…
ದಾವಣಗೆರೆ ಜ.30 : ಯಾವುದೇ ವ್ಯಕ್ತಿಯನ್ನು ನಿಂದನೆ ಮಾಡಲು ಅವಕಾಶವಿಲ್ಲ, ಮೈಕ್ರೋ ಫೈನಾನ್ಸ್ ಕಂಪನಿಗಳು ಜನರಿಗೆ ಕಿರುಕುಳ ನೀಡಿದಲ್ಲಿ ಎಫ್ಐಆರ್…
ಸುದ್ದಿಒನ್, ಚಿತ್ರದುರ್ಗ, ಜನವರಿ. 30 : ವಾಹನ ಚಲಾವಣೆ ಮಾಡುವ ಸಂದರ್ಭ ಬಹಳಷ್ಟು ತಾಳ್ಮೆ ಅಗತ್ಯ. ಇಲ್ಲದಿದ್ದರೆ ಅಪಘಾತಗಳು ಹೆಚ್ಚು…