Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕೋವಿಡ್ ಸಂಪೂರ್ಣವಾಗಿ ಹೋಗಿಲ್ಲ, ಲಸಿಕಾಕರಣದಿಂದ ನಿಯಂತ್ರಣಕ್ಕೆ ಬಂದಿದೆ: ಸಚಿವ ಡಾ.ಕೆ.ಸುಧಾಕರ್

Facebook
Twitter
Telegram
WhatsApp

ಬೆಂಗಳೂರು: ಕೋವಿಡ್ ಸಂಪೂರ್ಣವಾಗಿ ಹೋಗಿಲ್ಲ. ಆದರೆ ಲಸಿಕಾಕರಣದಿಂದ ನಿಯಂತ್ರಣ ಮಾಡಲಾಗಿದೆ. ಕೊರೊನಾ ನಿಯಂತ್ರಣದಲ್ಲಿ ಸಾಗಬೇಕಾದ ಹಾದಿ ಇನ್ನೂ ದೂರವಿದೆ ಎಂದು ಸಚಿವ ಡಾ.ಕೆ.ಸುಧಾಕರ್ ಹೇಳಿದರು.

ಅಟಲ್ ಬಿಹಾರಿ ವಾಜಪೇಯಿ ವೈದ್ಯಕೀಯ ಸಂಸ್ಥೆಯಲ್ಲಿ, 12 ರಿಂದ 14 ವರ್ಷದೊಳಗಿನ ಅರ್ಹ ಮಕ್ಕಳಿಗೆ ಕೋರ್ಬಿವ್ಯಾಕ್ಸ್ ಲಸಿಕೆ ಹಾಗೂ 60 ವರ್ಷ ಮೇಲ್ಪಟ್ಟವರಿಗೆ ಮುನ್ನೆಚ್ಚರಿಕೆ ಲಸಿಕಾಕರಣ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ಈ ಲಸಿಕೆ ಮೂಲಕ ಪೋಷಕರ ಆತಂಕ ದೂರ ಮಾಡುತ್ತಿದೆ. 12 ರಿಂದ 14 ವರ್ಷ ಮಕ್ಕಳು ಈ ಲಸಿಕೆ ತೆಗೆದುಕೊಂಡರೆ ಕೊರೊನಾ ವಿರುದ್ಧ ಹೋರಾಡಲು ಶಕ್ತಿ ಪಡೆಯಬಹುದು. ರಾಜ್ಯದಲ್ಲಿ 20 ಲಕ್ಷ ಮಕ್ಕಳಿಗೆ ಈ ಲಸಿಕೆ ನೀಡಲಾಗುವುದು. ಸರ್ಕಾರದ ಕ್ರಮಗಳಿಗೆ ಪೋಷಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ ಎಂದು ತಿಳಿಸಿದರು.

ಕೋವಿಡ್ ಲಸಿಕೆ ಪಡೆದವರು ಕೂಡ ಮುಂಜಾಗೃತಾ ಕ್ರಮಗಳನ್ನು ಮರೆಯುವ ಹಾಗಿಲ್ಲ. ಕೋವಿಡ್ ಸಂಪೂರ್ಣವಾಗಿ ಹೋಗಿಲ್ಲ. ಆದರೆ ಲಸಿಕಾಕರಣದಿಂದ ನಿಯಂತ್ರಣಕ್ಕೆ ಬಂದಿದೆ. ಈ ವಿಚಾರದಲ್ಲಿ ಸಾಗಬೇಕಾದ ಹಾದಿ ದೂರವಿದೆ. ಇನ್ನೂ ಹಲವು ಅಲೆಗಳು ಬರಬಹುದು ಎಂಬ ಆತಂಕವಿದೆ. ಲಸಿಕಾಕರಣದಿಂದ ಅದೆಲ್ಲವನ್ನೂ ದೂರ ಮಾಡಬಹುದು. ಮಾಸ್ಕ್, ಭೌತಿಕ ಅಂತರದ ಮೂಲಕ ಮುಂಜಾಗೃತ ಕ್ರಮಗಳನ್ನು ಎಲ್ಲರೂ ಪಾಲಿಸಬೇಕು ಎಂದು ಹೇಳಿದರು.

ರಾಜ್ಯದಲ್ಲಿ 10 ಕೋಟಿಗೂ ಅಧಿಕ ಡೋಸ್ ಲಸಿಕೆ ನೀಡಲಾಗಿದೆ. ಭಾರತದಲ್ಲಿ 180 ಕೋಟಿಗೂ ಹೆಚ್ಚು ಡೋಸ್ ನೀಡಲಾಗಿದೆ. ಈ ಸಾಧನೆ ವಿಶ್ವಮಟ್ಟದಲ್ಲೇ ದೊಡ್ಡದು. ಈ ಹಿಂದೆ ಯಾವುದೇ ಲಸಿಕೆ ಕೊಟ್ಟಿದ್ದರೂ ಅದು ಕೇವಲ 4 ರಿಂದ 5 ಕೋಟಿ ಡೋಸ್ ಅಷ್ಟೇ ಇದೆ. ಆದರೆ ಕೊರೊನಾ ಲಸಿಕೆಯನ್ನು ಕಳೆದ 1 ವರ್ಷದಲ್ಲಿ 180 ಕೋಟಿ ಡೋಸ್ ನೀಡಲಾಗಿದೆ. ಭಾರತ ಕೊರೊನಾ ವಿರುದ್ಧದ ಹೋರಾಟದಲ್ಲಿ ವಿಶ್ವ ನಾಯಕನಾಗಿದೆ ಎಂದು ಹೇಳಿದರು.

0-12 ವರ್ಷದ ಒಳಗಿನ ಮಕ್ಕಳಿಗೂ ಮುಂದಿನ ದಿನಗಳಲ್ಲಿ ಲಸಿಕೆ ದೊರೆಯಲಿದೆ. ಎಲ್ಲವೂ ವೈಜ್ಞಾನಿಕ ನೆಲೆಗಟ್ಟಿನಲ್ಲಿ ಸಂಶೋಧನೆಯಾಗಿ, ಅಧ್ಯಯನವಾಗಿ, ಪರವಾನಗಿ ತೆಗೆದುಕೊಂಡು ಜನರಿಗೆ ನೀಡಲಾಗುತ್ತಿದೆ. ಚೀನಾದ ಕೆಲ ನಗರಗಳಲ್ಲಿ ಮತ್ತು ಕೆಲ ದೇಶಗಳಲ್ಲಿ ಕೋವಿಡ್ ಹೆಚ್ಚಾದ ಬಗ್ಗೆ ಗಮನ ನೀಡಲಾಗಿದೆ. ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರಗಳು ಕೋವಿಡ್ ಹೆಚ್ಚಾಗುತ್ತಿರುವ ದೇಶ, ನಗರಗಳ ಬಗ್ಗೆ ಮಾಹಿತಿ ಪಡೆಯುತ್ತಿವೆ ಎಂದು ತಿಳಿಸಿದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಎನ್‌ಡಿಎ ಮೈತ್ರಿಕೂಟಕ್ಕೆ ಮತ ಹಾಕದಂತೆ ಮನೆಮನೆಗೆ ಕರಪತ್ರ ಹಂಚಿಕೆ : ವೀರಸಂಗಯ್ಯ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 20 : ಕೃಷಿಯನ್ನು ಸಂಪೂರ್ಣವಾಗಿ ನಾಶಪಡಿಸಿರುವ ಪ್ರಧಾನಿ ನರೇಂದ್ರಮೋದಿ ಹಾಗೂ ಮಿತ್ರ ಪಕ್ಷಗಳಿಗೆ ಈ ಬಾರಿಯ

ಈ ಚುನಾವಣೆಯಲ್ಲಿ ಕಾಂಗ್ರೆಸ್‍ಗೆ ಬೆಂಬಲ : ಡಿ.ದೊಡ್ಡಮಲ್ಲಯ್ಯ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 20  : ಕಾಡುಗೊಲ್ಲರನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವುದಾಗಿ ಹಸಿ ಸುಳ್ಳುಗಳನ್ನು ಹೇಳಿಕೊಂಡು ಬರುತ್ತಿರುವ ಬಿಜೆಪಿ. ಪಕ್ಷವನ್ನು

ಕ್ಷೇತ್ರದಲ್ಲಿ ಕಾಂಗ್ರೆಸ್ ಅಲೆ ಇದ್ದು, ಬಿ. ಎನ್‌. ಚಂದ್ರಪ್ಪ ಒಂದು ಲಕ್ಷ ಮತಗಳ ಅಂತರದಿಂದ ಗೆಲ್ಲುತ್ತಾರೆ : ಮಾಜಿ ಸಚಿವ ಹೆಚ್. ಆಂಜನೇಯ

ಸುದ್ದಿಒನ್, ಚಿತ್ರದುರ್ಗ ಏ. 20 : ಕ್ಷೇತ್ರದ ತುಂಬಾ ಕಾಂಗ್ರೆಸ್ ಅಲೆ ಇದ್ದು, ಈ ಬಾರಿ ಕಾಂಗ್ರೆಸ್ ಅಭ್ಯರ್ಥಿ ಬಿ ಎನ್ ಚಂದ್ರಪ್ಪ ಅವರು ಒಂದು ಲಕ್ಷ ಮತಗಳ ಅಂತರದಿಂದ ಗೆಲ್ಲುತ್ತಾರೆ ಎಂದು ಮಾಜಿ

error: Content is protected !!