Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

Covid Test : ಕೋವಿಡ್ ಪರೀಕ್ಷೆಯಲ್ಲಿ ಕರ್ನಾಟಕಕ್ಕೆ 3ನೇ ಸ್ಥಾನ: ಸಚಿವ ಡಾ.ಕೆ.ಸುಧಾಕರ್

Facebook
Twitter
Telegram
WhatsApp

 

ಬೆಂಗಳೂರು: ಕೋವಿಡ್ ಪರೀಕ್ಷೆ ವ್ಯವಸ್ಥೆಯನ್ನು ಆರಂಭದಿಂದಲೂ ಸಮರ್ಥವಾಗಿ ಅನುಷ್ಠಾನ ಮಾಡಿದ್ದ ಕರ್ನಾಟಕ, ಇಂದಿಗೆ 6 ಕೋಟಿ ಪರೀಕ್ಷೆಯ ಮೈಲುಗಲ್ಲು ತಲುಪಿದೆ. ಕೋವಿಡ್ ನಿಯಂತ್ರಣ ಕಾರ್ಯದಲ್ಲಿ ಇದು ದೊಡ್ಡ ಯಶಸ್ಸು.

ಕೋವಿಡ್ ಆರಂಭವಾದಾಗ ರಾಜ್ಯದಲ್ಲಿ ಎನ್‍ಐವಿ ಘಟಕದಲ್ಲಿ ಪರೀಕ್ಷೆ ನಡೆಸಲಾಗುತ್ತಿತ್ತು. ಆಗ ಖಚಿತತೆಗಾಗಿ ಪುಣೆಯ ಎನ್‍ಐವಿ ಘಟಕಕ್ಕೆ ಮಾದರಿಗಳನ್ನು ಕಳುಹಿಸಲಾಗುತ್ತಿತ್ತು. ನಂತರ ಹಂತಹಂತವಾಗಿ ಹೊಸ ಸರ್ಕಾರಿ ಹಾಗೂ ಖಾಸಗಿ ಪ್ರಯೋಗಾಲಯಗಳನ್ನು ಆರಂಭಿಸಲಾಯಿತು. ಸದ್ಯ ರಾಜ್ಯದಲ್ಲಿ, 99 ಸರ್ಕಾರಿ ಹಾಗೂ 169 ಖಾಸಗಿ ಸೇರಿ ಒಟ್ಟು 268 ಲ್ಯಾಬ್ ಕಾರ್ಯನಿರ್ವಹಿಸುತ್ತಿವೆ. ರಾಜ್ಯದಲ್ಲಿ ಈವರೆಗೆ 1,14,12,162 ರಾಪಿಡ್ ಆಂಟಿಜೆನ್, 4,87,02,653 ಆರ್ ಟಿಪಿಸಿಆರ್ ಹಾಗೂ ಇತರೆ ವಿಧಾನಗಳು ಸೇರಿ ಒಟ್ಟು 6,01,14,815 ಕೋವಿಡ್ ಪರೀಕ್ಷೆಗಳನ್ನು ನಡೆಸಲಾಗಿದೆ. 2020 ರಲ್ಲಿ ಒಟ್ಟು 1,41,96,065, 2021 ರಲ್ಲಿ 4,23,91,357 ಹಾಗೂ 2022 ರಲ್ಲಿ ಈವರೆಗೆ 35,27,393 ಪರೀಕ್ಷೆಗಳನ್ನು ನಡೆಸಲಾಗಿದೆ.

ಈ ಕುರಿತು ಮಾತನಾಡಿದ ಸಚಿವ ಡಾ.ಕೆ.ಸುಧಾಕರ್, “ಕೋವಿಡ್ ಸಾಂಕ್ರಾಮಿಕವನ್ನು ಯಶಸ್ವಿಯಾಗಿ ನಿರ್ವಹಿಸುವಲ್ಲಿ ಉತ್ತಮ ಪರೀಕ್ಷಾ ವ್ಯವಸ್ಥೆ ಕೂಡ ಕಾರಣ. ಆರಂಭದಿಂದಲೂ ಕರ್ನಾಟಕ ಪರೀಕ್ಷಾ ವ್ಯವಸ್ಥೆಯಲ್ಲಿ ಮುಂದಿದ್ದು, ಉತ್ತಮ ಪರೀಕ್ಷೆ ಹಾಗೂ ಟ್ರ್ಯಾಕಿಂಗ್ ವಿಧಾನ ಅಳವಡಿಸಿಕೊಂಡಿದೆ. ಈಗ 6 ಕೋಟಿ ಪರೀಕ್ಷೆಗಳ ಮೂಲಕ ಕೋವಿಡ್ ಹೋರಾಟದಲ್ಲಿ ಮುಂಚೂಣಿಯಲ್ಲಿದೆ ಎಂಬುದನ್ನು ಮತ್ತೆ ಸಾಬೀತುಪಡಿಸಿದೆ ಎಂದಿದ್ದಾರೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಗಳು ಆರಂಭದಿಂದಲೇ 5 ಟಿ ವಿಧಾನ (ಟೆಸ್ಟ್, ಟ್ರ್ಯಾಕ್, ಟ್ರೇಸಿಂಗ್, ಟ್ರಯಾಜಿಂಗ್, ಟೆಕ್ನಾಲಜಿ) ಅನುಸರಿಸಿದ್ದವು. 20,000 ಜನಸಂಖ್ಯೆಗೆ ಅನುಗುಣವಾಗಿ, ಒಟ್ಟು 3,678 (ಸರ್ಕಾರಿ 3,102, ಖಾಸಗಿ 666) ಮಾದರಿ ಸಂಗ್ರಹ ಕೇಂದ್ರಗಳನ್ನು ಆರಂಭಿಸಲಾಯಿತು. ಜೊತೆಗೆ ಸರ್ಕಾರಿ ಆಸ್ಪತ್ರೆ, ಮೆಡಿಕಲ್ ಕಾಲೇಜು, ಖಾಸಗಿ ಆಸ್ಪತ್ರೆ, ಲ್ಯಾಬ್ ಗಳಲ್ಲಿ ಆರ್ ಟಿಪಿಸಿಆರ್ ಪರೀಕ್ಷೆ ಆರಂಭಿಸಲಾಯಿತು. ಒಟ್ಟು 63 ವೈದ್ಯಕೀಯ ಕಾಲೇಜುಗಳಲ್ಲಿ ಆರ್ ಟಿಪಿಸಿಆರ್ ಪರೀಕ್ಷೆ ಆರಂಭವಾದವು. ಆರಂಭದಲ್ಲಿ 10-12 ಸರ್ಕಾರಿ ಸರ್ಕಾರಿ ಪ್ರಯೋಗಾಲಯಗಳಲ್ಲಿ ಮಾತ್ರ ಆರ್ ಟಿಪಿಸಿಆರ್ ಪರೀಕ್ಷಾ ವ್ಯವಸ್ಥೆ ಇದ್ದು, ಈಗ ಆ ಸಂಖ್ಯೆ 57 ಕ್ಕೇರಿದೆ. 108 ಆರ್ ಎನ್‍ಎ ಎಕ್ಸ್ ಟ್ರ್ಯಾಕ್ಟರ್, 139 ಆರ್ ಟಿಪಿಸಿಆರ್ ಯಂತ್ರ ಹಾಗೂ ಒಂದು ಪೂರ್ಣ ಪ್ರಮಾಣದ ಯಂತ್ರದ ಮೂಲಕ ದಿನದ ಪರೀಕ್ಷಾ ಸಾಮರ್ಥ್ಯವನ್ನು 1,20,800 ಕ್ಕೆ ಏರಿಸಲಾಗಿದೆ ಎಂದು ಸಚಿವ ಡಾ.ಕೆ.ಸುಧಾಕರ್ ಮಾಹಿತಿ ನೀಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಅಬ್ಬಬ್ಬಾ.. ಐಫೋನ್ ಜಸ್ಟ್ 35 Thousand.. ಈ ಆಫರ್ ಎಂಡ್ ಆಗೋದು ಯಾವಾಗ..?

ಈಗಂತು ಯಾರ ಕೈನಲ್ಲಿ ನೋಡಿದರು ಐಫೋನ್ ಗಳದ್ದೇ ಹಬ್ಬ. ಹಣ ಜಾಸ್ತಿ ಆದ್ರೂ ಐಫೋನ್ ಇರಲೇಬೇಕು ಅಂತಾರೆ. ಅದರಲ್ಲೂ ಐಫೋನ್ ತರಹೇವಾರಿ ಮಾಡೆಲ್ ಗಳನ್ನ ರಿಲೀಸ್ ಮಾಡ್ತಾ ಇರುತ್ತೆ. ಆದ್ರೆ ಐಫೋನ್ ಪ್ರಿಯರಿಗಾಗಿಯೇ ಬಿಗ್ಗೆಸ್ಟ್

Watermelon vs Muskmelon : ಕಲ್ಲಂಗಡಿ vs ಕರ್ಬೂಜ |  ಬೇಸಿಗೆಯಲ್ಲಿ ಆರೋಗ್ಯಕ್ಕೆ ಯಾವುದು ಉತ್ತಮ ?

  ಸುದ್ದಿಒನ್ : ಕಲ್ಲಂಗಡಿ ಮತ್ತು ಕರ್ಬೂಜ ಎರಡೂ ಬೇಸಿಗೆಯಲ್ಲಿ ಬಹಳ ಜನಪ್ರಿಯವಾದ ಹಣ್ಣುಗಳಾಗಿವೆ.  ಎರಡನ್ನೂ ಇಷ್ಟಪಡುವ ಅನೇಕ ಜನರಿದ್ದಾರೆ. ಆದರೆ ಈಗ ಇವೆರಡರಲ್ಲಿ ಯಾವುದು ಆರೋಗ್ಯಕ್ಕೆ ಒಳ್ಳೆಯದು. ಅದರ ಬಗ್ಗೆ ತಿಳಿದುಕೊಳ್ಳೋಣ. ಕಲ್ಲಂಗಡಿ

ಈ ರಾಶಿಯ ಇಂಟೀರಿಯರ್ ಡಿಸೈನ್ ಮಾಡುವವರಿಗೆ ಧನ ಲಾಭ

ಈ ರಾಶಿಯ ಇಂಟೀರಿಯರ್ ಡಿಸೈನ್ ಮಾಡುವವರಿಗೆ ಧನ ಲಾಭ, ಈ ಪಂಚ ರಾಶಿಗಳಿಗೆ ಆಕಸ್ಮಿಕ ಧನ ಲಾಭ ಪ್ರಾಪ್ತಿ,   ಗುರುವಾರ ರಾಶಿ ಭವಿಷ್ಯ ಏಪ್ರಿಲ್-25,2024 ಸೂರ್ಯೋದಯ: 05:57, ಸೂರ್ಯಾಸ್ತ : 06:30 ಶಾಲಿವಾಹನ

error: Content is protected !!