Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮಕ್ಕಳಿಗೆ ಶೀಘ್ರವೇ ಕೋವಿಡ್ ಲಸಿಕೆ: ಡಾ.ಸುಧಾಕರ್

Facebook
Twitter
Telegram
WhatsApp

ಬೆಂಗಳೂರು: ಅಕ್ಟೋಬರ್ ತಿಂಗಳಲ್ಲೇ ಮಕ್ಕಳಿಗೆ ಕೋವಿಡ್ ಲಸಿಕೆ ಸಿಗಲಿದೆ ಎಂದು ನಿರೀಕ್ಷಿಸಿರುವುದಾಗಿ ರಾಜ್ಯದ ಆರೋಗ್ಯ, ಕುಟುಂಬ ಕಲ್ಯಾಣ ಮತ್ತು ವೈದ್ಯಕೀಯ ಶಿಕ್ಷಣ ಸಚಿವರಾದ ಡಾ. ಕೆ ಸುಧಾಕರ್ ಅವರು ತಿಳಿಸಿದರು. ಈ ವೇಲೆ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಝೈಡಸ್ ಡಿ ಮೂರನೇ ಹಂತದ ಟ್ರಯಲ್ ಈಗಾಗಲೇ ಕೊನೆಯ ಹಂತ ತಲುಪಿದೆ. ಇವತ್ತು ಅಥವಾ ನಾಳೆ ದರ ನಿಗದಿ ಆಗುವ ಸಾಧ್ಯತೆ ಇದೆ. ಅಂತಿಮವಾಗಿ ಕೇಂದ್ರ ಸರಕಾರ ಈ ಕುರಿತು ಪ್ರಕಟಿಸಲಿದೆ ಎಂದರು.

ಮಕ್ಕಳಲ್ಲಿ ಕೋವಿಡ್ ಪ್ರಮಾಣ ಆತಂಕಕಾರಿ ಆಗಿಲ್ಲ. ಶಾಲೆಗಳಲ್ಲಿ ಮಕ್ಕಳ ಚಟುವಟಿಕೆ ಕುರಿತು ಈಗಾಗಲೇ ಮಾರ್ಗಸೂಚಿಗಳನ್ನು ಬಿಡುಗಡೆಗೊಳಿಸಲಾಗಿದೆ. ಚಿತ್ರನಟ ಶಂಕರ್ನಾಮಗ್ ಅವರ ಹೆಸರನ್ನು ಮೆಟ್ರೋ ನಿಲ್ದಾಣಕ್ಕೆ ಇಡಬೇಕೆಂಬ ಕುರಿತ ಪ್ರಶ್ನೆಗೆ ಉತ್ತರ ನೀಡಿದ ಅವರು, ಜನರ ಆಶಯ- ಕೋರಿಕೆಯನ್ನು ಮುಖ್ಯಮಂತ್ರಿಗಳು ಆಲಿಸಿ ಪರಿಶೀಲಿಸಿ ನಿರ್ಧರಿಸಲಿದ್ದಾರೆ. ಈ ಕುರಿತು ಸಿಎಂ ಬಸವರಾಜ ಬೊಮ್ಮಾಯಿ ಅವರ ಜೊತೆ ಮಾತನಾಡುವುದಾಗಿ ಹೇಳಿದರು.

ಎಲ್ಲರಿಗೂ ಕೋವಿಡ್ ಲಸಿಕೆ ನೀಡುವ ಮೊದಲೇ ದೊಡ್ಡ ಪ್ರಮಾಣದ ಸಭೆ, ಸಮಾರಂಭಕ್ಕೆ ಅವಕಾಶ ನೀಡಲು ಸಾಧ್ಯವಿಲ್ಲ ಎಂದ ಅವರು, ಕೇರಳ, ಮಹಾರಾಷ್ಟ್ರ ಮತ್ತಿತರ ಕಡೆ ಕೋವಿಡ್ ಪ್ರಮಾಣ ಕಡಿಮೆ ಆಗಿಲ್ಲ. ಆದ್ದರಿಂದ ಅಲ್ಲಿಂದ ಬಂದವರಿಗೆ ಕೋವಿಡ್ ನೆಗೆಟಿವ್ ಪ್ರಮಾಣಪತ್ರ ಪಡೆಯುವುದು ಅನಿವಾರ್ಯವೆನಿಸಿದೆ. ಮೂರನೇ ಅಲೆ ತಡೆಯುವ ಉದ್ದೇಶ ಇದರ ಹಿಂದಿದೆ ಎಂದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಇಂದು ಸಂವಿಧಾನ ದಿನಾಚರಣೆ | ಕಾರಣ ಮತ್ತು ಮಹತ್ವವೇನು ? ಇಲ್ಲಿದೆ ಸಂಪೂರ್ಣ ಮಾಹಿತಿ…!

ಸುದ್ದಿಒನ್ | ರಾಷ್ಟ್ರೀಯ ಸಂವಿಧಾನ ದಿನ 2024 : ಬ್ರಿಟಿಷರ ಆಳ್ವಿಕೆಯಲ್ಲಿ ಸುಮಾರು 200 ವರ್ಷಗಳ ಕಾಲ ಲೂಟಿ ಮತ್ತು ಅಸ್ತವ್ಯಸ್ತಗೊಂಡಿದ್ದ ಭಾರತವನ್ನು ಸ್ವಾತಂತ್ರ್ಯದ ನಂತರ ಒಂದುಗೂಡಿಸುವಲ್ಲಿ ನಮ್ಮ ಸಂವಿಧಾನವು ಪ್ರಮುಖ ಪಾತ್ರ ವಹಿಸಿದೆ.

ಕಡಿಮೆ ರಕ್ತದ ಒತ್ತಡ ಕಾರಣಗಳೇನು ? ತಡೆಗಟ್ಟುವುದು ಹೇಗೆ ?

ಸುದ್ದಿಒನ್ | ಹೃದಯದಿಂದ ನಿರಂತರವಾಗಿ ರಕ್ತ ದೇಹದ ಎಲ್ಲಾ ಅಂಗಗಳಿಗೆ ಸರಬರಾಜು ಆಗುತ್ತಲೇ ಇರುತ್ತದೆ. ಹೃದಯದಿಂದ ರಕ್ತ ಹೊರಹಾಕಲ್ಪಟ್ಟ ಮೇಲೆ ರಕ್ತದ ಏಕಮುಖ ಹರಿವು ರಕ್ತನಾಳಗಳ ಒಳಪದರಗಳ ಮೇಲೆ ಹೇರುವ ಒತ್ತಡವನ್ನು “ರಕ್ತದ ಒತ್ತಡ”

ಈ ರಾಶಿಯ ಕಾಳುಮೆಣಸು ಮತ್ತು ಏಲಕ್ಕಿ ವ್ಯಾಪಾರ ವಹಿವಾಟಗಾರರಿಗೆ ಭಾರಿ ನಷ್ಟ

ಈ ರಾಶಿಯ ಕಾಳುಮೆಣಸು ಮತ್ತು ಏಲಕ್ಕಿ ವ್ಯಾಪಾರ ವಹಿವಾಟಗಾರರಿಗೆ ಭಾರಿ ನಷ್ಟ, ಈ ರಾಶಿಯವರ ಆದಾಯ ದ್ವಿಗುಣ ನೋ ಡೌಟ್ : ಈ ರಾಶಿಯವರಿಗೆ ಉನ್ನತ ಸ್ಥಾನ ದೊರೆತು, ರಾಜಕೀಯ ಸಂಪೂರ್ಣ ಬೆಂಬಲ ಸಿಗಲಿದೆ,

error: Content is protected !!