ಚನ್ನಪಟ್ಟಣ: ರಾಜ್ಯದಲ್ಲಿ ಇಂದು ಮೂರು ಕ್ಷೇತ್ರಗಳ ಉಪಚುನಾವಣೆಯ ಮತ ಎಣಿಕೆ ಕಾರ್ಯ ಬೆಳಗ್ಗೆಯಿಂದಾನೇ ನಡೆಯುತ್ತಿದೆ. ಚನ್ನಪಟ್ಟಣ ಕ್ಷೇತ್ರ ಹೈವೋಲ್ಟೇಜ್ ಕ್ಷೇತ್ರವಾಗಿತ್ತು. ಎಲ್ಲರ ಚಿತ್ತ ಇಂದು ಅತ್ತ ಕಡೆಯೇ ನೆಟ್ಟಿದೆ. ಮತ ಎಣಿಕೆ ನಡೆಯುತ್ತಿದ್ದು, ಸದ್ಯದ ಸ್ಥಿತಿಯಲ್ಲಿ ಚನ್ನಪಟ್ಟಣದಲ್ಲಿ ಸಿಪಿ ಯೋಗೀಶ್ವರ್ ಮುನ್ನಡೆ ಸಾಧಿಸಿದ್ದಾರೆ.
ಎಂಟನೇ ಸುತ್ತಿನ ಮತ ಎಣಿಕೆಯಲ್ಲೂ ಸಿಪಿ ಯೋಗೀಶ್ವರ್ ಮುನ್ನಡೆ ಸಾಧಿಸಿದ್ದಾರೆ. 11,178 ಮತಗಳ ಅಂತರದಿಂದ ಮುನ್ನಡೆ ಸಾಧಿಸಿದ್ದಾರೆ. ನಿಖಿಲ್ ಕುಮಾರಸ್ವಾಮಿ ಅವರು ಹಿನ್ನಡೆ ಸಾಧಿಸಿದ್ದಾರೆ.
ಉಳಿದಂತೆ ಇನ್ನು ಎರಡು ಕ್ಷೇತ್ರಗಳ ಮತ ಎಣಿಕೆ ಕಾರ್ಯವೂ ನಡೆಯುತ್ತಿದೆ. ಹಾವೇರಿಯ ಶಿಗ್ಗಾಂವಿಯಲ್ಲಿ ಕಾಂಗ್ರೆಸ್ ಅಭ್ಯರದಥಿ ಯಾಸೀರ್ ಮುನ್ನಡೆ ಸಾಧಿಸಿದ್ದಾರೆ. ಆರಂಭದ ಮತ ಎಣಿಕೆಯಲ್ಲಿ ಭರತ್ ಬೊಮ್ಮಾಯಿ ಮುನ್ನಡೆ ಸಾಧಿಸಿದ್ದರು. ಇದೀಗ ಯಾಸೀರ್ ಮುನ್ನಡೆ ಸಾಧಿಸಿದ್ದಾರೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!
ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.












