ರಾಮನಗರ: ರಾಜ್ಯ ರಾಜಕೀಯದಲ್ಲಿ ದಿನ ಬೆಳಗ್ಗೆ ಹೊಸ ಹೊಸ ವಿಚಾರಗಳು ಸದ್ದು ಮಾಡುತ್ತಿರುತ್ತವೆ. ಇತ್ತಿಚೆಗಷ್ಟೇ ಡಿಸಿಎಂ ಶಿವಕುಮಾರ್, ಕುಮಾರಸ್ವಾಮಿ ಮೇಲೆ ಆರೋಪವೊಂದನ್ನು ಮಾಡಿದ್ದರು. ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸಲು ಕುಮಾರಸ್ವಾಮಿ ಸಿಂಗಾಪುರಕ್ಕೆ ತೆರಳಿದ್ದಾರೆ ಎಂದು ಹೇಳಿದ್ದರು. ಇದರ ಬೆನ್ನಲ್ಲೇ ರಾಜ್ಯದಲ್ಲಿ ಹೊಸದೊಂದು ಬೆಳವಣಿಗೆ ನಡೆದಿದೆ.
ಇಂದು ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ಮಾಜಿ ಸಚಿವ, ಬಿಜೆಪಿ ನಾಯಕ ಸಿಪಿ ಯೋಗೀಶ್ವರ್ ಪುತ್ರಿ ಭೇಟಿಯಾಗಿದ್ದಾರೆ. ಡಿಕೆ ಶಿವಕುಮಾರ್ ಅವರ ನಿವಾಸದಲ್ಲಿ ಭೇಟಿಯಾಗಿ, ಒಂದಷ್ಟು ಮಾತುಕತೆ ನಡೆಸಿದ್ದಾರೆ. ಸಿಪಿ ಯೋಗೀಶ್ವರ್ ಅವರು ಕಾಂಗ್ರೆಸ್ ಸೇರಲಿದ್ದಾರೆ ಎನ್ನಲಾಗುತ್ತಿತ್ತು. ಈ ಬೆನ್ನಲ್ಲೇ ಅವರ ಪುತ್ರಿ ನಿಶಾ, ಡಿಕೆ ಶಿವಕುಮಾರ್ ಭೇಟಿ ಮಾಡಿ, ಮಾತುಕತೆ ನಡೆಸಿದ್ದಾರೆ.
ಸಿಪಿ ಯೋಗೀಶ್ವರ್ ಸದ್ಯ ಹೆಚ್ ಡಿ ಕುಮಾರಸ್ವಾಮಿ ಅವರ ಬದ್ಧ ವೈರಿಯೆಂದೇ ಖ್ಯಾತಿ ಪಡೆದಿದ್ದಾರೆ. ಈ ಬಾರಿಯ ವಿಧಾನಸಭೆಯ ಈ ಬಾರಿಯ ಚುನಾವಣೆಯಲ್ಲಿ ಕುಮಾರಸ್ವಾಮಿ ಮುಂದೆ ಸೋಲು ಕಂಡಿದ್ದರು. ಕಳೆದ ಭಾರಿ ಕಾಂಗ್ರೆಸ್ ಹಾಗೂ ಜೆಡಿಎಸ್ ಸಮ್ಮಿಶ್ರ ಸರ್ಕಾರವನ್ನು ಕೆಡವಿ ಬಿಜೆಪಿಯನ್ನು ಅಧಿಕಾರಕ್ಕೆ ತರುವಲ್ಲಿ ಸಿಪಿ ಯೋಗೇಶ್ವರ್ ಪಾತ್ರ ಮಹತ್ವದ್ದಾಗಿತ್ತು. ಈ ಹಿನ್ನೆಲೆಯಲ್ಲಿ ಯೋಗೇಶ್ವರ್ ಅವರನ್ನು ಕಾಂಗ್ರೆಸ್‌ಗೆ ಕರೆದುಕೊಂಡು ಬರುವ ನಿಟ್ಟಿನಲ್ಲಿ ಡಿಕೆ ಸಹೋದರರು ಪ್ಲ್ಯಾನ್ ಮಾಡಿದ್ದಾರೆ ಎಂಬ ಮಾತುಗಳು ಹರಿದಾಡುತ್ತಿವೆ.