ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಗೃಹ ಕಚೇರಿ ಕೃಷ್ಣಾದಲ್ಲಿ ಸಭೆ ನಡೆದಿದ್ದು, ಕೊಪ್ಪಳ ಜಿಲ್ಲೆಯ ಅಂಜನಾದ್ರಿ ಬೆಟ್ಟದ ಸಮಗ್ರ ಅಭಿವೃದ್ಧಿ ಬಗ್ಗೆ ಸಭೆಯಲ್ಲಿ ಚರ್ಚೆಯಾಗಿದೆ. ಸಭೆಯಲ್ಲಿ ಪ್ರವಾಸೋದ್ಯಮ ಸಚಿವರಾದ ಆನಂದ್ ಸಿಂಗ್, ಸಚಿವರಾದ ಹಾಲಪ್ಪ ಬಸಪ್ಪ ಆಚಾರ್, ಕೊಪ್ಪಳ ಸಂಸದ ಕರಡಿ ಸಂಗಣ್ಣ, ಶಾಸಕರಾದ ಬಸವರಾಜ ದಡೆಸೂಗುರ, ಪರಣ್ಣ ಮುನವಳ್ಳಿ, ಅಮರೇಗೌಡ ಬಯ್ಯಾಪೂರ, ರಾಘವೇಂದ್ರ ಹಿಟ್ನಾಳ, ಸಿಎಂ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ್ ಪ್ರಸಾದ್, ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎಸ್.ಆರ್. ಉಮಾಶಂಕರ, ಆರ್ಥಿಕ ಇಲಾಖೆಯ ಕಾರ್ಯದರ್ಶಿ ಏಕ್‍ರೂಪ್ ಕೌರ್, ಪ್ರವಾಸೋದ್ಯಮ ಇಲಾಖೆ ಕಾರ್ಯದರ್ಶಿ ಪ್ರಸಾದ್ ಸೇರಿ ಹಿರಿಯ ಅಧಿಕಾರಿಗಳು ಭಾಗಿಯಾಗಿದ್ದರು.
ಸಭೆ ಬಳಿಕೆ ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್ ಹೇಳಿಕೆ ನೀಡಿದ್ದು, ಹನುಮನ ಜನ್ಮಸ್ಥಳ ಗೊಂದಲ ವಿಚಾರದ ಬಗ್ಗೆ ಮಾತನಾಡಿದ್ದಾರೆ. ಕೇಂದ್ರ ಪುರಾತತ್ವ ಇಲಾಖೆ, ರಾಜ್ಯ ಪುರಾತತ್ವ ಇಲಾಖೆಗೆ ಸಿಎಂ ಸೂಚನೆ ಕೊಟ್ಟಿದ್ದಾರೆ. ಅಂಜನಾದ್ರಿ ಬೆಟ್ಟದ ದಾಖಲೆಗಳನ್ನ ಪರಿಶೀಲನೆ ಮಾಡಿ ಸಂಶೋಧನೆ ಮಾಡಿ. ಒಂದು ಅಧಿಕೃತವಾಗಿ ಬೋರ್ಡ್ ಹಾಕಲು ಸಿಎಂ ಸೂಚನೆ. ಕಿಷ್ಕಂದದಲ್ಲಿ ಹನುಮನ ಹುಟ್ಟಿದ ಸ್ಥಳ ಹೇಗಾಯ್ತು, ಇತಿಹಾಸ ಪುಟ್ಟದಲ್ಲಿ ಏನಿದೆ..? ಕಿಷ್ಕಿಂದಲ್ಲಿ ಇನ್ಮುಂದೆ ಯಾರು ಚಕಾರ ಎತ್ತಬಾರದು, ಅದನ್ನ ಕೊನೆ ಮಾಡಬೇಕು. ಅದಕ್ಕಾಗಿ ಸಿಎಂ ಸೂಚನೆ ಕೊಟ್ಟಿದ್ದಾರೆ. 15 ದಿನದಲ್ಲಿ ಕೇಂದ್ರ ಪುರಾತತ್ತ್ವ ಇಲಾಖೆ,ರಾಜ್ಯ ಪುರಾತತ್ವ ಇಲಾಖೆ ಸಂಶೋಧನಾ ವರದಿ ಕೊಟ್ಟ ಬಳಿಕ, ರಾಜ್ಯ ಸರ್ಕಾರ ಅಧಿಕೃತವಾಗಿ ಅಂಜನಾದ್ರಿ ಹನುಮನ ಜನ್ಮಸ್ಥಳ ಎಂದು ಘೋಷಣೆ ಮಾಡಲಿದೆ ಎಂದಿದ್ದಾರೆ.
ಅಂಜನಾದ್ರಿ ಬೆಟ್ಟದ ಅಭಿವೃದ್ಧಿ ಕುರಿತು ಸಿಎಂ ಜೊತೆ ಚರ್ಚೆ ನಡೆಸಿದ್ದೇವೆ. ಅಂಜನಾದ್ರಿ ಬೆಟ್ಟದ ಅಭಿವೃದ್ಧಿಗೆ ಈಗಾಗಲೇ 100 ಕೋಟಿ ಅನುದಾನದ ಘೋಷಣೆಯಾಗಿದ್ದು, ಅನುದಾನ ಕೂಡಲೇ ಬಿಡುಗಡೆ ಮಾಡಲು ಸಿಎಂ ಸೂಚನೆ ನೀಡಿದ್ದಾರೆ ಎಂದು ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್ ಹೇಳಿದ್ದಾರೆ.
ಆರ್ಥಿಕ ಇಲಾಖೆಯ ಅಧಿಕಾರಿಗಳಿಗೆ ಸಿಎಂ ಸೂಚನೆ ಕೊಟ್ಟಿದ್ದಾರೆ. ಅಂಜನಾದ್ರಿ ಬೆಟ್ಟದಲ್ಲಿ ಪಾರ್ಕಿಂಗ್, ರೋಪ್ ವೇ, ರಸ್ತೆ ನಿರ್ಮಾಣ, ಪುಟಪಾತ್ ಕಾಮಗಾರಿಗೆ ಹಣ ಬಿಡುಗಡೆ ಮಾಡಲು ಸಿಎಂ ಸೂಚನೆ ಕೊಟ್ಟಿದ್ದಾರೆ. ಎರಡು ತಿಂಗಳೊಳಗೆ ಎಲ್ಲಾ ಕಾಮಗಾರಿಗಳಿಗೂ ಅಡಿಗಲ್ಲು ಹಾಕಲು ಸಿಎಂ ಸೂಚಿಸಿದ್ದಾರೆ. ಜುಲೈ 15 ರೊಳಗೆ ಸಿಎಂ ಬೊಮ್ಮಾಯಿ ಸಹ ಅಂಜನಾದ್ರಿ ಬೆಟ್ಟಕ್ಕೆ ಭೇಟಿ ನೀಡಲಿದ್ದಾರೆ