Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮಧ್ಯಪ್ರಾಚ್ಯ ದೇಶಗಳಲ್ಲಿನ ಬಿಕ್ಕಟ್ಟು – ಚಿತ್ರದುರ್ಗ ಜಿಲ್ಲೆಯ ಪ್ರಯಾಣಿಕರ ನೆರವಿಗಾಗಿ ಸಹಾಯವಾಣಿ

---Advertisement---

ಚಿತ್ರದುರ್ಗ, ಮಾರ್ಚ್. 01 : ಮಧ್ಯಪ್ರಾಚ್ಯದ ಕೆಲವು ದೇಶಗಳಲ್ಲಿ ಪ್ರಚಲಿತದಲ್ಲಿರುವ ಅಸ್ಥಿರ ಪರಿಸ್ಥಿತಿಯಿಂದಾಗಿ ಅಂತರಾಷ್ಟ್ರೀಯ ವಿಮಾನಯಾನ ಸೇವೆಗಳಲ್ಲಿ ವ್ಯತ್ಯಯ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಚಿತ್ರದುರ್ಗ ಜಿಲ್ಲೆಯ ಸಾರ್ವಜನಿಕರ ಹಿತದೃಷ್ಟಿಯಿಂದ ಜಿಲ್ಲಾಡಳಿತವು ಈ ಕೆಳಗಿನ ಮಾಹಿತಿಯನ್ನು ಹಂಚಿಕೊಂಡಿದೆ.

​ವೈಮಾನಿಕ ನಿರ್ಬಂಧ ಮತ್ತು ಪ್ರಚಲಿತ ಸ್ಥಿತಿ
​ಇರಾನ್, ಇಸ್ರೇಲ್, ಲೆಬನಾನ್, ಸೌದಿ ಅರೇಬಿಯಾ ಸೇರಿದಂತೆ ಒಟ್ಟು 11 ದೇಶಗಳ ವೈಮಾನಿಕ ಮಾರ್ಗಗಳನ್ನು (Airspace) ಮಾರ್ಚ್ 2ರವರೆಗೆ ಮುಚ್ಚಲಾಗಿದೆ.

​ಈ ಅನಿರೀಕ್ಷಿತ ಅಡಚಣೆಯಿಂದಾಗಿ ಹಾಗೂ ಕರ್ನಾಟಕದ ಅನೇಕ ಪ್ರಯಾಣಿಕರು ಯುಎಇ (ದುಬೈ) ಸೇರಿದಂತೆ ವಿವಿಧ ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ಸಿಲುಕಿಕೊಂಡಿದ್ದಾರೆ.

​ಜಿಲ್ಲಾಡಳಿತದ ಕ್ರಮಗಳು :
​ಮಾನ್ಯ ಮುಖ್ಯಮಂತ್ರಿಗಳು ಹಾಗೂ ಕಂದಾಯ ಸಚಿವರ ನಿರ್ದೇಶನದಂತೆ, ರಾಜ್ಯ ಮತ್ತು ಜಿಲ್ಲಾ ತುರ್ತು ಕಾರ್ಯಾಚರಣೆ ಕೇಂದ್ರ 24×7 ಕಾರ್ಯನಿರ್ವಹಿಸುತ್ತಿವೆ.
​ವಿದೇಶಾಂಗ ವ್ಯವಹಾರಗಳ ಸಚಿವಾಲಯ ಮತ್ತು ಭಾರತೀಯ ರಾಯಭಾರಿ ಕಚೇರಿಗಳು ನೀಡುವ ಸೂಚನೆಗಳನ್ನು ಜಿಲ್ಲಾಡಳಿತವು ನಿರಂತರವಾಗಿ ಗಮನಿಸುತ್ತಿದೆ.

​ಸಹಾಯವಾಣಿ ಸಂಖ್ಯೆಗಳಿಗೆ
​ಚಿತ್ರದುರ್ಗ ಜಿಲ್ಲೆಯ ನಿವಾಸಿಗಳು ಅಥವಾ ಅವರ ಸಂಬಂಧಿಕರು ಹೆಚ್ಚಿನ ಮಾಹಿತಿಗಾಗಿ ಮತ್ತು ಸಹಾಯಕ್ಕಾಗಿ ಸಂಪರ್ಕಿಸಬಹುದು:
​ಚಿತ್ರದುರ್ಗ ಜಿಲ್ಲಾ ತುರ್ತು ಕಾರ್ಯಾಚರಣೆ ಕೇಂದ್ರ 08194-222538, 08194-222811 ಅಥವಾ
​ರಾಜ್ಯ ತುರ್ತು ಕಾರ್ಯಾಚರಣೆ ಕೇಂದ್ರ 080-22340676, 080-22253707 , ಟೋಲ್ ಫ್ರೀ ಸಂಖ್ಯೆ: 1070 ಗೆ ಕರೆ ಮಾಡಿ ಮಾಹಿತಿ ಹಾಗೂ ಸಹಾಯ ಪಡೆಯಬಹುದು.

​ಸಾರ್ವಜನಿಕರಿಗೆ ಪ್ರಮುಖ ಸೂಚನೆಗಳು:
​ಮಧ್ಯಪ್ರಾಚ್ಯ ದೇಶಗಳಲ್ಲಿರುವ ಕರ್ನಾಟಕದ ನಿವಾಸಿಗಳು ಹಾಗೂ ಜಿಲ್ಲೆಯವರಿದ್ದಲ್ಲಿ ಅಲ್ಲಿನ ಸ್ಥಳೀಯ ಸರ್ಕಾರಗಳು ನೀಡುವ ಸುರಕ್ಷತಾ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು.

​ಸಂಕಷ್ಟದಲ್ಲಿರುವವರು ಆಯಾ ದೇಶದ ಭಾರತೀಯ ರಾಯಭಾರಿ ಕಚೇರಿಯ ಸಹಾಯವಾಣಿಗೆ ಕರೆ ಮಾಡಬೇಕು ಅಥವಾ ‘ಸಾರಥಿ ಸಹಾಯತಾ’ (Sarthi Sahayata) ಪೋರ್ಟಲ್‌ನಲ್ಲಿ ನೋಂದಾಯಿಸಿಕೊಳ್ಳಬೇಕು.
​ವೀಸಾ ಸಂಬಂಧಿತ ಸಮಸ್ಯೆಗಳಿದ್ದಲ್ಲಿ ಹತ್ತಿರದ ಎಫ್.ಆರ್.ಆರ್.ಒ (FRRO) ಕಚೇರಿಯನ್ನು ಸಂಪರ್ಕಿಸಬೇಕೆಂದು ಜಿಲ್ಲಾಧಿಕಾರಿ ಟಿ. ವೆಂಕಟೇಶ್ ಅವರು ತಿಳಿಸಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now