ದಾವಣಗೆರೆ: ಇಷ್ಟು ದಿನ ಮಳೆ ಆಗ್ಲಪ್ಪ ನೆಲ ಕಚ್ಚಿರೋ ಬೆಳೆ ಸರಿಯಾಗ್ಲಿ ಅನ್ನೋ ಬೇಡಿಕೆ ಇತ್ತು. ಆದ್ರೆ ವರುಣ ಅದಕ್ಕೆ ಉಲ್ಟಾ ಹೊಡೆದಿದ್ದಾನೆ. ಬಿದ್ದ ಬಾರಿ ಮಳೆಯಿಂದಾಗಿ ರೈತನ ಮೊಗದಲ್ಲಿ ಖುಷಿ ಮಾಯವಾಗಿ ನೋವು ಆವರಿಸಿಕೊಂಡಿದೆ.
ಜಿಲ್ಲೆಯಲ್ಲಿ ಕಳೆದ ಎರಡು ದಿನದಿಂದ ಬಾರಿ ಮಳೆ ಸುರಿಯುತ್ತಿದೆ. ಇದರ ಪರಿಣಾಮ ಹೊನ್ನೂರಿನ ಕೆರೆ ಕೋಡಿ ಬಿದ್ದಿದೆ. ಮಲ್ಲಶೆಟ್ಟಿಹಳ್ಳಿ, ಕೊಗ್ಗುನೂರು ಸೇರಿದಂತೆ ಹಲವು ಗ್ರಾಮಗಳಿಗೆ ನೀರು ನುಗ್ಗಿದೆ. ಗ್ರಾಮಕ್ಕೆ ಸಂಪರ್ಕ ಕಲ್ಪಿಸಿಕೊಡುವ ರಸ್ತೆಗಳು ನೀರಿನಲ್ಲಿ ಮುಚ್ಚಿ ಹೋಗಿವೆ. ರಸ್ತೆಗಳು ಕೆರೆಯಂತೆ ಕಾಣುತ್ತಿವೆ. ಇದರಿಂದ ಜನಜೀವನವೂ ಅಸ್ತವ್ಯಸ್ತವಾಗಿದೆ. ರೈತನ ಬದುಕು ಮೂರಾಬಟ್ಟೆಯಾಗಿದೆ.
ಅಡಿಕೆ, ಮೆಕ್ಕೆಜೋಳ, ತೆಂಗು ಬೆಳೆದ ಸುಮಾರು 500ಕ್ಕೂ ಹೆಚ್ಚು ಎಕರೆಗೆ ನೀರು ನುಗ್ಗಿದೆ. 300ಕ್ಕೂ ಅಧಿಕ ಬೋರ್ ವೆಲ್ ಗಳು ಮುಚ್ಚಿ ಹೋಗಿವೆ. ಮಳೆಯಿಂದ ಸಾಕಷ್ಟು ನಷ್ಟ ಉಂಟಾಗಿದ್ದು, ಪರಿಹಾರ ನೀಡಿ ಎಂದು ಗ್ರಾಮಸ್ಥರು ಅಧಿಕಾರಿಗಳ ಬಳಿ ಕೇಳುತ್ತಿದ್ದಾರೆ.
ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ…
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಕಡಲೆ, ಮೆಕ್ಕೆಜೋಳ ಸೇರಿದಂತೆ ಇತರೆ…
ಬೆಂಗಳೂರು: ನಟ ಡಾಲಿ ಧನಂಜಯ್ ಮದುವೆ ಸಂಭ್ರಮದಲ್ಲಿದ್ದಾರೆ. ಚಿತ್ರದುರ್ಗದ ಅಳಿಯ ಬೇರೆ ಆಗ್ತಾ ಇದ್ದಾರೆ. ಧನ್ಯತಾ ಮೂಲತಃ ಚಿತ್ರದುರ್ಗದವರು. ಆದರೆ…
ಬೆಂಗಳೂರು: ಇಂದು ಹೈಕೋರ್ಟ್ ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ನೀಡಿದೆ. ಈ…
ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ, ಈ ರಾಶಿಯವರಿಗೆ ಉತ್ತಮ ಸಂಗಾತಿ ಸಿಗುವರು, ಶುಕ್ರವಾರದ ರಾಶಿ ಭವಿಷ್ಯ…
144 ವರ್ಷಗಳಿಗೊಮ್ಮೆ ಬರುವ ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದರೆ ಕರ್ಮ ಕಳೆಯುತ್ತದೆ ಎಂದು ನಂಬಲಾಗಿದೆ. ಹೀಗಾಗಿ ಕೋಟ್ಯಾಂತರ ಮಂದಿ…