Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಡಿ. 30 ರಂದು ಕಲ್ಟ್ ಚಿತ್ರ ತಂಡ ಚಿತ್ರದುರ್ಗ ಕ್ಕೆ ಆಗಮನ ; ಬೃಹತ್ ವೇದಿಕೆ ಕಾರ್ಯಕ್ರಮ

---Advertisement---

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ, ಡಿಸೆಂಬರ್. 28 :ಸ್ಟೈಲಿಶ್ ಸ್ಟಾರ್ ಜೈದ್ ಖಾನ್ ನಟಿಸಿರುವ ಬಹು ನಿರೀಕ್ಷಿತ ‘ಕಲ್ಟ್’ ಚಿತ್ರ ಜನವರಿ 23 ರಂದು ಬಿಡುಗಡೆ ಯಾಗುತ್ತಿದೆ.

ಈ ಹಿನ್ನೆಲೆಯಲ್ಲಿ ಚಿತ್ರ ತಂಡ ಡಿಸೆಂಬರ್ 30 ಕ್ಕೆ ಕೋಟೆನಾಡು ಐತಿಹಾಸಿಕ ನಗರಿ ಚಿತ್ರದುರ್ಗಕ್ಕೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಹಳೇ ಮಾಧ್ಯಮಿಕ ಶಾಲೆ ಆವರಣದಲ್ಲಿ ಬೃಹತ್ ವೇದಿಕೆ ನಿರ್ಮಾಣ ಮಾಡಲಾಗಿದೆ.

ಅಂದು ಚಿತ್ರ ನಟ ಜೈದ್ ಖಾನ್, ನಟಿಯರಾದ ರಚಿತಾ ರಾಮ್, ಮಲೈಕಾ ವಸುಪಾಲ್ ಸೇರಿ ಇಡೀ ತಂಡ ಆಗಮಿಸಲಿದೆ ಎಂದು  ಸಮಾಜ ಸೇವಕ ಅನ್ವ ರ್ ಬಾಷಾ ತಿಳಿಸಿದ್ದಾರೆ.

ಸಿಟಿ ಕ್ಲಬ್ ನಲ್ಲಿ ಸುದ್ದಿಗೋಷ್ಠಿ ಯಲ್ಲಿ ಮಾತನಾಡಿದ ಅವರು, 30 ರಂದು ರಾಂಪಾರ್ ಅಲೋಕಿ, ಗಾಯಕ ಚಂದನ್ ಶೆಟ್ಟಿ ಕಾರ್ಯಕ್ರಮ ನೀಡಲಿದ್ದಾರೆ. 30 ರಂದು ಬೆಳಗ್ಗೆ 11 ಕ್ಕೆ ಚಿತ್ರ ತಂಡ ಚಿತ್ರದುರ್ಗ ನಗರ ದ ಕನಕ ವೃತ್ತದ ಪ್ರವೇಶ ಮಾಡಲಿದ್ದು, ಕನಕದಾಸರು,  ಡಾ. ಬಿ. ಆರ್.ಅಂಬೇಡ್ಕರ್, ಮದಕರಿ ನಾಯಕ ರ ಪ್ರತಿಮೆ ಗೆ ಮಾಲಾರ್ಪಣೆ ಮಾಡಿ ನಂತರ ಮೆರವಣಿಗೆ ನಡೆಯಲಿದೆ.

12 ಗಂಟೆಗೆ ದೇವರಾಜು ಶಿಕ್ಷಣ ಸಂಸ್ಥೆಯ ವೆಂಕಟೇಶ್ವರ ಶಾಲೆಯಲ್ಲಿ ಸಾಂಸ್ಕೃತಿಕ ಉತ್ಸವ ನಡೆಯಲಿದ್ದು, ನಟ ಜೈದ್ ಖಾನ್ ಅತಿಥಿ ಯಾಗಿ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.
ಸಂಜೆ ಐದು ಗಂಟೆಗೆ ಮಾಧ್ಯಮಿಕ ಶಾಲೆ ಆವರಣದಲ್ಲಿ ಬೃಹತ್ ಸಭಾ ಕಾರ್ಯಕ್ರಮ ನಡೆಯಲಿದ್ದು, ಎಲ್ಲ ಪಕ್ಷದ ಗಣ್ಯರು, ಸಾಹಿತಿ, ಕಲಾವಿದರು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.

ಚಿತ್ರದುರ್ಗ ಸಾಹಿತಿ ಕಲಾವಿದರ ನಾಡು. ಇಲ್ಲಿ ಪ್ರಮೋಷನ್ ಮಾಡಿದ ಎಲ್ಲ ಚಿತ್ರಗಳು ಯಶಸ್ಸು ಕಂಡಿದೆ. ಹೀಗಾಗಿ ಕಲ್ಟ್ ಚಿತ್ರ ದ ಪ್ರಮೋಷನ್ ಗಾಗಿ ಇಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು  ತಿಳಿಸಿದರು.

ಮುಖಂಡರಾದ ಸಿ. ಟಿ ಕೃಷ್ಣಮೂರ್ತಿ, ಡಾ.ತಿಪ್ಪೇಸ್ವಾಮಿ, ಅನೀಸ್, ಓ. ಶಂಕರ್, ಕಿರಣ್, ಮಹಾಲಿಂಗಪ್ಪ ಕುಂಚಿಗನಾಳ್, ಬಾಳೆಕಾಯಿ ಶ್ರೀನಿವಾಸ್,  , ರಾಜಣ್ಣ, ಉಪಸ್ಥಿತರಿದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now