Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ನ್ಯಾಯಬೆಲೆ ಅಂಗಡಿಗಳಲ್ಲಿ ಗ್ರಾಹಕರಿಂದ 20 ರೂಪಾಯಿ ಅಕ್ರಮ ವಸೂಲಾತಿಗೆ ಕಡಿವಾಣ ಹಾಕಿ : ಆಫಿಯಾ ಸೋಷಿಯಲ್ ವೆಲ್‍ಫೇರ್ ಟ್ರಸ್ಟ್ ಮನವಿ

---Advertisement---

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಜುಲೈ. 21 : ಉಚಿತವಾಗಿ ಪಡಿತರ ಧಾನ್ಯಗಳನ್ನು ವಿತರಿಸುವಾಗ ಬಹುತೇಕ ನ್ಯಾಯಬೆಲೆ ಅಂಗಡಿಗಳಲ್ಲಿ ಗ್ರಾಹಕರಿಂದ ಇಪ್ಪತ್ತು ರೂ.ಗಳನ್ನು ವಸೂಲಿ ಮಾಡುತ್ತಿರುವುದು ಯಾವ ಕಾರಣಕ್ಕಾಗಿ ಎಂದು ಪ್ರಶ್ನಿಸಿ ಆಫಿಯಾ ಸೋಷಿಯಲ್ ವೆಲ್‍ಫೇರ್ ಟ್ರಸ್ಟ್‍ನಿಂದ ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆ ಉಪ ನಿರ್ದೇಶಕರಿಗೆ ಸೋಮವಾರ ಮನವಿ ಸಲ್ಲಿಸಲಾಯಿತು.

ಪ್ರತಿ ತಿಂಗಳು ಗ್ರಾಹಕರು ನ್ಯಾಯಬೆಲೆ ಅಂಗಡಿಗೆ ಹೋಗಿ ಬಯೋ ಮೆಟ್ರಿಕ್ ನೀಡಿದ ಕೂಡಲೆ ಒಬ್ಬರಿಂದ ಇಪ್ಪತ್ತು ರೂ.ಗಳನ್ನು ಅಕ್ರಮವಾಗಿ ವಸೂಲು ಮಾಡಲಾಗುತ್ತಿದೆ. ಏಕೆ ಎಂದು ಪ್ರಶ್ನಿಸಿದವರಿಗೆ ಪಡಿತರ ಧಾನ್ಯ ಸಿಗುವುದಿಲ್ಲವೆಂಬ ಬೆದರಿಕೆ ಹಾಕಲಾಗುತ್ತಿದೆ. ಇದರಿಂದ ಬಡವರಿಗೆ ಅನ್ಯಾಯವಾಗುತ್ತಿದೆ. ಸರ್ಕಾರವೇ ಉಚಿತವಾಗಿ ಪಡಿತರ ಧಾನ್ಯಗಳನ್ನು ನೀಡಿರುವಾಗಿ 20 ರೂ.ಗಳ ವಸೂಲಿ ಏಕೆ? ಕೂಡಲೆ ಇಂತಹ ಅಕ್ರಮ ವಸೂಲಾತಿಗೆ ಕಡಿವಾಣ ಹಾಕಿ ನ್ಯಾಯಬೆಲೆ ಅಂಗಡಿಗಳ ಮಾಲೀಕರುಗಳ ಮೇಲೆ ಕಾನೂನು ರೀತಿಯ ಕ್ರಮ ಕೈಗೊಳ್ಳುವಂತೆ ಆಫಿಯಾ ಸೋಷಿಯಲ್ ವೆಲ್‍ಫೇರ್ ಟ್ರಸ್ಟ್ ಅಧ್ಯಕ್ಷ ಸೈಯದ್ ಜಿಯಾವುಲ್ಲಾ ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆ ಉಪ ನಿರ್ದೇಶಕರನ್ನು ಒತ್ತಾಯಿಸಿದರು.
ಮಿರ್ಜಾ ಗಾಲಿಬ್‍ಬೇಗ್ ಈ ಸಂದರ್ಭದಲ್ಲಿ ಹಾಜರಿದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment