Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ನವರಾತ್ರಿಗೆ ಕರೆಂಟ್ ಶಾಕ್ : ವಿದ್ಯುತ್ ದರ ಏರಿಕೆ ಬಗ್ಗೆ ಕುಮಾರಸ್ವಾಮಿ ಬೇಸರ

Facebook
Twitter
Telegram
WhatsApp

ಬೆಂಗಳೂರು: ಒಂದರ ಹಿಂದೆ ಒಂದರಂತೆ ಬೆಲೆ ಮತ್ತೆ ಏರಿಕೆಯಾಗುತ್ತಲೆ ಇದೆ. ಜನಸಾಮಾನ್ಯರ ಜೀವನ ಬೆಲೆ ಏರಿಕೆ ಬಿಸಿಯಲ್ಲೆ ಕಳೆಯುತ್ತಿದೆ. ವಿದ್ಯುತ್ ಏರಿಕೆ ಇತ್ತಿಚೆಗಷ್ಟೆ ಆಗಿತ್ತು. ಕಡಿಮೆಯಾಗುತ್ತಾ ಎಂಬ ಯಾವ ಭರವಸೆಯನ್ನು ಜನಸಾಮಾನ್ಯರು ಇಟ್ಟುಕೊಳ್ಳು ಹಂಗಿಲ್ಲ. ಇದೀಗ ಮತ್ತೆ ಬೆಲೆ ಏರಿಕೆಯಾಗಿದೆ. ಇದನ್ನು ಮಾಜಿ ಸಿಎಂ ಕುಮಾರಸ್ವಾಮಿ ಖಂಡಿಸಿದ್ದಾರೆ.

 

ಇಂಧನ ಹೊಂದಾಣಿಕೆ ಶುಲ್ಕದ ನೆಪದಲ್ಲಿ ರಾಜ್ಯ ಬಿಜೆಪಿ ಸರಕಾರ ವಿದ್ಯುತ್‌ ದರ ಏರಿಸಿದೆ. ಕಳೆದ ಜುಲೈನಲ್ಲಿ ಬರೆ ಎಳೆದಿತ್ತು. ಈಗ ಮತ್ತೆ ದರ ಹೆಚ್ಚಿಸಿದೆ. ಕಲ್ಲಿದ್ದಲು ಬೆಲೆ ಹೆಚ್ಚಳದಿಂದ ವಿದ್ಯುತ್‌ ದರವನ್ನೂ ಏರಿಸಲಾಗುತ್ತಿದೆ ಎಂದು ಇಂಧನ ಸಚಿವರು ಹೇಳುವ ಮಾತು ಒಪ್ಪುವ ರೀತಿ ಇಲ್ಲ.

ವಿಧಾನಮಂಡಲ ಅಧಿವೇಶನ ಮುಂದೂಡಿಕೆಯಾದ ಕೂಡಲೇ ವಿದ್ಯುತ್‌ ದರ ಏರಿಕೆ ಆಗಿದೆ! ಏನೀ ಹುನ್ನಾರ?ನವರಾತ್ರಿಗೆ ಹಬ್ಬದ ಶುಭಾಶಯ ಹೇಳಬೇಕಿದ್ದ ಸರಕಾರ, ಕರೆಂಟ್‌ ಶಾಕ್ ಕೊಟ್ಟು ಜನರು ಕಂಗೆಡುವಂತೆ ಮಾಡಿದೆ.‌ ಪ್ರತಿ ಯೂನಿಟ್‌ʼಗೆ 24ರಿಂದ 43 ಪೈಸೆ ಹೆಚ್ಚಿಸಿರುವುದು ಅವೈಜ್ಞಾನಿಕ, ಅನಪೇಕ್ಷಿತ & ಖಂಡನೀಯ.

ರಾಜ್ಯದಲ್ಲಿ ಉತ್ತಮ ಮಳೆಯಾಗಿ ಜಲಾಶಯಗಳು ತುಂಬಿವೆ. ವಿದ್ಯುತ್‌ ಉತ್ಪಾದನೆ ಉತ್ತಮವಾಗಿದೆ. ಆದರೂ ಖರೀದಿ ವೆಚ್ಚದಲ್ಲಿ 1,244 ಕೋಟಿ ರೂ. ಹೆಚ್ಚಳ ಆಗಿದೆ ಎನ್ನುವ ಲೆಕ್ಕವನ್ನು ನಂಬುವ ರೀತಿಯಲ್ಲಿ ಇಲ್ಲ. ಇಂಧನ ವಲಯದ ಕೆಲ ಹಿತಾಸಕ್ತಿಗಳನ್ನು ರಕ್ಷಿಸುವ ಸಲುವಾಗಿ ಎಸ್ಕಾಂಗಳ ಭುಜದ ಮೇಲೆ ಗುಂಡಿಟ್ಟು, ಜನರಿಗೆ ಹೊಡೆಯುವ ಕೆಲಸ ಆಗುತ್ತಿದೆ.

ರಾಜ್ಯ ಬಿಜೆಪಿ ಸರಕಾರ ಜನರ ಪರ ಇಲ್ಲ ಎನ್ನುವುದು ಸತ್ಯ. ಜಾಗತಿಕ ಪೇಟೆಯಲ್ಲಿ ಕಚ್ಛಾತೈಲದ ಬೆಲೆ ನಿರಂತರ ಇಳಿದರೂ ದೇಶದಲ್ಲಿ ತೈಲಬೆಲೆ ಇಳಿಸದ ಕೇಂದ್ರದ ಕೇಂದ್ರ ಬಿಜೆಪಿ ಸರಕಾರದ ಹಾದಿಯಲ್ಲೇ ರಾಜ್ಯ ರಾಜ್ಯ ಬಿಜೆಪಿ ಸರಕಾರವೂ ಸಾಗಿದೆ. ವಿದ್ಯುತ್‌ ದರದ ನಿರಂತರ ಏರಿಕೆ ಬಗ್ಗೆ ಗಂಭೀರ ಅನುಮಾನಗಳಿವೆ ಎಂದು ಟ್ವೀಟ್ ಮಾಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಮೋದಿ ನೀಡಿದ ಭರವಸೆಗಳನ್ನು ಈಡೇರಿಸಿಲ್ಲ : ಮುಖ್ಯಮಂತ್ರಿ ಸಿದ್ದರಾಮಯ್ಯ

  ಬೀದರ್, ಏಪ್ರಿಲ್ 25: ಹುಬ್ಬಳಿಯ ನೇಹಾ ಹೀರೆಮಠ ಕೊಲೆ ಪ್ರಕರಣವನ್ನು ಸರ್ಕಾರ ತೀವ್ರವಾಗಿ ಖಂಡಿಸುತ್ತದೆ ಹಾಗೂ ಆರೋಪಿಗೆ ಘೋರ ಶಿಕ್ಷೆ ವಿಧಿಸಲು ಸಿಐಡಿ ತನಿಖೆ ಚುರುಕುಗೊಳಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು

ಅಬ್ಬಬ್ಬಾ.. ಐಫೋನ್ ಜಸ್ಟ್ 35 Thousand.. ಈ ಆಫರ್ ಎಂಡ್ ಆಗೋದು ಯಾವಾಗ..?

ಈಗಂತು ಯಾರ ಕೈನಲ್ಲಿ ನೋಡಿದರು ಐಫೋನ್ ಗಳದ್ದೇ ಹಬ್ಬ. ಹಣ ಜಾಸ್ತಿ ಆದ್ರೂ ಐಫೋನ್ ಇರಲೇಬೇಕು ಅಂತಾರೆ. ಅದರಲ್ಲೂ ಐಫೋನ್ ತರಹೇವಾರಿ ಮಾಡೆಲ್ ಗಳನ್ನ ರಿಲೀಸ್ ಮಾಡ್ತಾ ಇರುತ್ತೆ. ಆದ್ರೆ ಐಫೋನ್ ಪ್ರಿಯರಿಗಾಗಿಯೇ ಬಿಗ್ಗೆಸ್ಟ್

Watermelon vs Muskmelon : ಕಲ್ಲಂಗಡಿ vs ಕರ್ಬೂಜ |  ಬೇಸಿಗೆಯಲ್ಲಿ ಆರೋಗ್ಯಕ್ಕೆ ಯಾವುದು ಉತ್ತಮ ?

  ಸುದ್ದಿಒನ್ : ಕಲ್ಲಂಗಡಿ ಮತ್ತು ಕರ್ಬೂಜ ಎರಡೂ ಬೇಸಿಗೆಯಲ್ಲಿ ಬಹಳ ಜನಪ್ರಿಯವಾದ ಹಣ್ಣುಗಳಾಗಿವೆ.  ಎರಡನ್ನೂ ಇಷ್ಟಪಡುವ ಅನೇಕ ಜನರಿದ್ದಾರೆ. ಆದರೆ ಈಗ ಇವೆರಡರಲ್ಲಿ ಯಾವುದು ಆರೋಗ್ಯಕ್ಕೆ ಒಳ್ಳೆಯದು. ಅದರ ಬಗ್ಗೆ ತಿಳಿದುಕೊಳ್ಳೋಣ. ಕಲ್ಲಂಗಡಿ

error: Content is protected !!