ಬೆಂಗಳೂರು: ಒಂದರ ಹಿಂದೆ ಒಂದರಂತೆ ಬೆಲೆ ಮತ್ತೆ ಏರಿಕೆಯಾಗುತ್ತಲೆ ಇದೆ. ಜನಸಾಮಾನ್ಯರ ಜೀವನ ಬೆಲೆ ಏರಿಕೆ ಬಿಸಿಯಲ್ಲೆ ಕಳೆಯುತ್ತಿದೆ. ವಿದ್ಯುತ್ ಏರಿಕೆ ಇತ್ತಿಚೆಗಷ್ಟೆ ಆಗಿತ್ತು. ಕಡಿಮೆಯಾಗುತ್ತಾ ಎಂಬ ಯಾವ ಭರವಸೆಯನ್ನು ಜನಸಾಮಾನ್ಯರು ಇಟ್ಟುಕೊಳ್ಳು ಹಂಗಿಲ್ಲ. ಇದೀಗ ಮತ್ತೆ ಬೆಲೆ ಏರಿಕೆಯಾಗಿದೆ. ಇದನ್ನು ಮಾಜಿ ಸಿಎಂ ಕುಮಾರಸ್ವಾಮಿ ಖಂಡಿಸಿದ್ದಾರೆ.
ಇಂಧನ ಹೊಂದಾಣಿಕೆ ಶುಲ್ಕದ ನೆಪದಲ್ಲಿ ರಾಜ್ಯ ಬಿಜೆಪಿ ಸರಕಾರ ವಿದ್ಯುತ್ ದರ ಏರಿಸಿದೆ. ಕಳೆದ ಜುಲೈನಲ್ಲಿ ಬರೆ ಎಳೆದಿತ್ತು. ಈಗ ಮತ್ತೆ ದರ ಹೆಚ್ಚಿಸಿದೆ. ಕಲ್ಲಿದ್ದಲು ಬೆಲೆ ಹೆಚ್ಚಳದಿಂದ ವಿದ್ಯುತ್ ದರವನ್ನೂ ಏರಿಸಲಾಗುತ್ತಿದೆ ಎಂದು ಇಂಧನ ಸಚಿವರು ಹೇಳುವ ಮಾತು ಒಪ್ಪುವ ರೀತಿ ಇಲ್ಲ.
ವಿಧಾನಮಂಡಲ ಅಧಿವೇಶನ ಮುಂದೂಡಿಕೆಯಾದ ಕೂಡಲೇ ವಿದ್ಯುತ್ ದರ ಏರಿಕೆ ಆಗಿದೆ! ಏನೀ ಹುನ್ನಾರ?ನವರಾತ್ರಿಗೆ ಹಬ್ಬದ ಶುಭಾಶಯ ಹೇಳಬೇಕಿದ್ದ ಸರಕಾರ, ಕರೆಂಟ್ ಶಾಕ್ ಕೊಟ್ಟು ಜನರು ಕಂಗೆಡುವಂತೆ ಮಾಡಿದೆ. ಪ್ರತಿ ಯೂನಿಟ್ʼಗೆ 24ರಿಂದ 43 ಪೈಸೆ ಹೆಚ್ಚಿಸಿರುವುದು ಅವೈಜ್ಞಾನಿಕ, ಅನಪೇಕ್ಷಿತ & ಖಂಡನೀಯ.
ರಾಜ್ಯದಲ್ಲಿ ಉತ್ತಮ ಮಳೆಯಾಗಿ ಜಲಾಶಯಗಳು ತುಂಬಿವೆ. ವಿದ್ಯುತ್ ಉತ್ಪಾದನೆ ಉತ್ತಮವಾಗಿದೆ. ಆದರೂ ಖರೀದಿ ವೆಚ್ಚದಲ್ಲಿ 1,244 ಕೋಟಿ ರೂ. ಹೆಚ್ಚಳ ಆಗಿದೆ ಎನ್ನುವ ಲೆಕ್ಕವನ್ನು ನಂಬುವ ರೀತಿಯಲ್ಲಿ ಇಲ್ಲ. ಇಂಧನ ವಲಯದ ಕೆಲ ಹಿತಾಸಕ್ತಿಗಳನ್ನು ರಕ್ಷಿಸುವ ಸಲುವಾಗಿ ಎಸ್ಕಾಂಗಳ ಭುಜದ ಮೇಲೆ ಗುಂಡಿಟ್ಟು, ಜನರಿಗೆ ಹೊಡೆಯುವ ಕೆಲಸ ಆಗುತ್ತಿದೆ.
ರಾಜ್ಯ ಬಿಜೆಪಿ ಸರಕಾರ ಜನರ ಪರ ಇಲ್ಲ ಎನ್ನುವುದು ಸತ್ಯ. ಜಾಗತಿಕ ಪೇಟೆಯಲ್ಲಿ ಕಚ್ಛಾತೈಲದ ಬೆಲೆ ನಿರಂತರ ಇಳಿದರೂ ದೇಶದಲ್ಲಿ ತೈಲಬೆಲೆ ಇಳಿಸದ ಕೇಂದ್ರದ ಕೇಂದ್ರ ಬಿಜೆಪಿ ಸರಕಾರದ ಹಾದಿಯಲ್ಲೇ ರಾಜ್ಯ ರಾಜ್ಯ ಬಿಜೆಪಿ ಸರಕಾರವೂ ಸಾಗಿದೆ. ವಿದ್ಯುತ್ ದರದ ನಿರಂತರ ಏರಿಕೆ ಬಗ್ಗೆ ಗಂಭೀರ ಅನುಮಾನಗಳಿವೆ ಎಂದು ಟ್ವೀಟ್ ಮಾಡಿದ್ದಾರೆ.
ಸುದ್ದಿಒನ್, ಚಿತ್ರದುರ್ಗ, ಜನವರಿ. 31 : ಬೆಳ್ಳಂಬೆಳಗ್ಗೆಯೇ ಲೋಕಾಯುಕ್ತ ಅಧಿಕಾರಿಗಳು ಭ್ರಷ್ಟ ಅಧಿಕಾರಿಗಳಿಗೆ ಚಳಿಯಲ್ಲೂ ಬೆವರುವಂತೆ ಮಾಡಿದ್ದಾರೆ. ಬೆಂಗಳೂರು, ರಾಯಚೂರು,…
ಇಂದಿನಿಂದ ಬಜೆಟ್ ಅಧಿವೇಶನ ಆರಂಭವಾಗಲಿದೆ. ಬೆಳಗ್ಗೆ 11 ಗಂಟೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮಾ ಅವರು ಜಂಟಿ ಅಧಿವೇಶನ ಉದ್ದೇಶಿಸಿ…
ಸುದ್ದಿಒನ್ :ಮಕ್ಕಳಿಗೆ ಟೀ ಮತ್ತು ಕಾಫಿ ಕೊಡುವ ಮೊದಲು ತಿಳಿದುಕೊಳ್ಳಬೇಕಾದ ಕೆಲವು ವಿಷಯಗಳಿವೆ. ಚಿಕ್ಕ ವಯಸ್ಸಿನಲ್ಲಿ ಚಹಾ ಅಥವಾ ಕಾಫಿ…
ಈ ರಾಶಿಯ ದಂಪತಿಗಳಿಗೆ ಅತಿಯಾದ ಕಿರುಕುಳದಿಂದ ಜಿಗುಪ್ಸೆ, ಶುಕ್ರವಾರದ ರಾಶಿ ಭವಿಷ್ಯ 31 ಜನವರಿ 2025 - ಸೂರ್ಯೋದಯ -…
ದಾವಣಗೆರೆ: ಇತ್ತೀಚೆಗೆ ಮೈಕ್ರೋ ಫೈನಾನ್ಸ್ ಕಾಟಕ್ಕೆ ರಾಜ್ಯದಲ್ಲಿ ಜೀವ ಕಳೆದುಕೊಂಡವರು ಅದೆಷ್ಟೋ. ಇದಕ್ಕೆ ಕಡಿವಾಣ ಹಾಕುವುದಕ್ಕೆ ಸರ್ಕಾರ ಕೂಡ ಸಭೆಗಳನ್ನ…
ಚಿತ್ರದುರ್ಗ. ಜ.30: ಮಹಾತ್ಮಾ ಗಾಂಧೀಜಿಯವರು ಹುತಾತ್ಮರಾದ ದಿನವಾದ ಜ. 30 ರಂದು ಸರ್ವೋದಯ ದಿನವನ್ನಾಗಿ ಆಚರಿಸಲಾಗುತ್ತಿದ್ದು, ಈ ನಿಮಿತ್ತ ಅಪರ…