Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮಾಂಸಾಹಾರಿಗಳ ಜೇಬಿಗೆ ಕತ್ತರಿ: ಚಿಕನ್ ಮೊಟ್ಟೆ ಬೆಲೆ ಏರಿಕೆ

---Advertisement---

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಚಿಕನ್ ಮತ್ತು ಮೊಟ್ಟೆ ಬೆಲೆಗಳು ಭಾರೀ ಏರಿಕೆಯಾಗಿದ್ದು, ಮಾಂಸಾಹಾರ ಪ್ರಿಯರಿಗೆ ದುಬಾರಿ ಬಿಸಿ ತಟ್ಟಿದೆ. ಕಳೆದ ಒಂದು ವಾರದಿಂದ ಸತತವಾಗಿ ಏರಿಕೆಯಾಗುತ್ತಿದ್ದ ಕೋಳಿ ಮಾಂಸ ಹಾಗೂ ಮೊಟ್ಟೆಯ ದರ ಇದೀಗ ದಾಖಲೆಯ ಮಟ್ಟ ತಲುಪಿದ್ದು, ಗ್ರಾಹಕರ ಜೇಬಿಗೆ ಹೆಚ್ಚುವರಿ ಹೊರೆ ತಂದಿದೆ.

ಕೆಲವೇ ದಿನಗಳ ಹಿಂದೆ ಕೆಜಿಗೆ ಸುಮಾರು ₹300 ಇದ್ದ ಬ್ರಾಯ್ಲರ್ ಚಿಕನ್ ಬೆಲೆ ಈಗ ₹350ರಿಂದ ₹360ಕ್ಕೆ ಏರಿಕೆಯಾಗಿದೆ. ಪ್ರಸ್ತುತ ಮಾರುಕಟ್ಟೆಯಲ್ಲಿ ಚರ್ಮ ರಹಿತ (Skinless) ಚಿಕನ್ ಕೆಜಿಗೆ ₹360, ಚರ್ಮ ಸಮೇತ (With Skin) ಚಿಕನ್ ₹340ಕ್ಕೆ ಮಾರಾಟವಾಗುತ್ತಿದೆ.

ಇತ್ತ ಮೊಟ್ಟೆ ಬೆಲೆಯಲ್ಲೂ ಗಮನಾರ್ಹ ಏರಿಕೆ ಕಂಡುಬಂದಿದೆ. ಮೂರು ದಿನಗಳ ಹಿಂದಷ್ಟೇ ₹7ರಿಂದ ₹7.50 ಇದ್ದ ಒಂದು ಮೊಟ್ಟೆಯ ಚಿಲ್ಲರೆ ದರ ಈಗ ₹9ಕ್ಕೆ ತಲುಪಿದೆ. ಸಗಟು ಮಾರುಕಟ್ಟೆಯಲ್ಲಿಯೇ ಒಂದು ಮೊಟ್ಟೆಯ ಬೆಲೆ ₹8 ಆಗಿರುವುದು ಗ್ರಾಹಕರ ಆತಂಕಕ್ಕೆ ಕಾರಣವಾಗಿದೆ.

ದರ ಏರಿಕೆಗೆ ಕಾರಣವೇನು?
ಸ್ಥಳೀಯ ವ್ಯಾಪಾರಿಗಳ ಪ್ರಕಾರ, ಈ ಬಾರಿ ಹವಾಮಾನ ವೈಪರೀತ್ಯದಿಂದ ಕೋಳಿಗಳ ಬೆಳವಣಿಗೆ ನಿರೀಕ್ಷಿತ ಮಟ್ಟದಲ್ಲಿ ಆಗಿಲ್ಲ. ಇದರ ಜೊತೆಗೆ ನೆರೆ ರಾಜ್ಯಗಳಿಂದ ಕರ್ನಾಟಕದ ಕೋಳಿಗಳಿಗೆ ಹೆಚ್ಚಿನ ಬೇಡಿಕೆ ವ್ಯಕ್ತವಾಗಿದ್ದು, ದೊಡ್ಡ ಪ್ರಮಾಣದಲ್ಲಿ ಹೊರರಾಜ್ಯಗಳಿಗೆ ಪೂರೈಕೆ ನಡೆಯುತ್ತಿದೆ. ಇದರಿಂದ ರಾಜ್ಯದ ಸ್ಥಳೀಯ ಮಾರುಕಟ್ಟೆಯಲ್ಲಿ ಕೋಳಿಗಳ ಕೊರತೆ ಉಂಟಾಗಿ, ಚಿಕನ್ ಹಾಗೂ ಮೊಟ್ಟೆ ದರ ಏರಿಕೆಯಾಗಿರುವುದಾಗಿ ತಿಳಿಸಿದ್ದಾರೆ.

ಬೆಲೆ ಏರಿಕೆಯ ಪರಿಣಾಮ ಗ್ರಾಹಕರ ಖರೀದಿ ಪ್ರಮಾಣದಲ್ಲೂ ಇಳಿಕೆ ಕಂಡುಬಂದಿದೆ. ವಾರಾಂತ್ಯದಲ್ಲಿ ಒಂದು ಕೆಜಿ ಚಿಕನ್ ಖರೀದಿಸುತ್ತಿದ್ದ ಅನೇಕರು ಈಗ ಅರ್ಧ ಕೆಜಿ ಅಥವಾ ಅದಕ್ಕಿಂತ ಕಡಿಮೆ ಪ್ರಮಾಣದಲ್ಲಿ ಖರೀದಿ ಮಾಡುತ್ತಿದ್ದಾರೆ.ಇದೇ ವೇಳೆ, ಚಿಕನ್ ಮತ್ತು ಮೊಟ್ಟೆ ದರ ಏರಿಕೆ ಹೋಟೆಲ್ ಹಾಗೂ ರೆಸ್ಟೋರೆಂಟ್‌ಗಳ ಮೇಲೂ ಪರಿಣಾಮ ಬೀರಿದೆ. ಕಚ್ಚಾ ವಸ್ತುಗಳ ಬೆಲೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುಂದಿನ ದಿನಗಳಲ್ಲಿ ಚಿಕನ್ ಬಿರಿಯಾನಿ, ಎಗ್ ಕರಿ ಸೇರಿದಂತೆ ಹಲವು ಮಾಂಸಾಹಾರಿ ಖಾದ್ಯಗಳ ದರವೂ ಏರಿಕೆಯಾಗುವ ಸಾಧ್ಯತೆ ಇದೆ ಎಂದು ಹೋಟೆಲ್ ಮಾಲೀಕರು ಅಭಿಪ್ರಾಯಪಟ್ಟಿದ್ದಾರೆ.ಸತತ ಬೆಲೆ ಏರಿಕೆಯಿಂದ ಗ್ರಾಹಕರು ಆತಂಕ ವ್ಯಕ್ತಪಡಿಸಿದ್ದು, ದರಗಳು ಶೀಘ್ರದಲ್ಲೇ ಇಳಿಕೆಯಾಗುವ ನಿರೀಕ್ಷೆಯಲ್ಲಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

​ಸರ್ಕಾರಿ ಬ್ಯಾಂಕ್ ಖಾತೆಗಳ ಸುರಕ್ಷತೆಗೆ ಕಟ್ಟುನಿಟ್ಟಿನ ಕ್ರಮ: ಬ್ಯಾಂಕ್ ದಾಖಲೆಗಳಲ್ಲಿ ಕಡ್ಡಾಯವಾಗಿ ‘ಸರ್ಕಾರಿ ಇ-ಮೇಲ್ ಐಡಿ’ ಬಳಸಲು ಆದೇಶ

ಡೇಟಾ ಸೆಂಟರ್ ಕ್ರಾಂತಿ: 2030ರ ವೇಳೆಗೆ ಭಾರತದಲ್ಲಿ 1 ಲಕ್ಷ ಉದ್ಯೋಗ ಸೃಷ್ಟಿ ಸಾಧ್ಯತೆ!

ಬೆಂಗಳೂರಿನ ಫುಟ್‌ಬಾಲ್ ಪ್ರಿಯರಿಗೆ ಗುಡ್ ನ್ಯೂಸ್: ಫಿಫಾ ವಿಶ್ವಕಪ್ ಹಿನ್ನೆಲೆ ಮಧ್ಯರಾತ್ರಿ 3.30ರವರೆಗೆ ಹೋಟೆಲ್, ರೆಸ್ಟೋರೆಂಟ್‌ ತೆರೆಯಲು ಅನುಮತಿ!

ಜುಲೈ 16 ರಂದು ರಂಗಕರ್ಮಿ ಕೆ.ವಿ ಸುಬ್ಬಣ್ಣ ಸ್ಮರಣೋತ್ಸವ : ಕನ್ನಡ ಗೀತಗಾಯನ ತರಬೇತಿ ಕಾರ್ಯಾಗಾರ

ಚಿತ್ರದುರ್ಗ ಅಭಿವೃದ್ಧಿಗೆ ವೇಗ ನೀಡಲು ಶಾಸಕ ವೀರೇಂದ್ರ ಪಪ್ಪಿ ಒತ್ತಾಯ; ಈ ನಾಲ್ಕು ಪ್ರಮುಖ ಯೋಜನೆಗಳಿಗೆ ಅನುದಾನ ಬೇಡಿಕೆ

ಆಷಾಢ ಅಮಾವಾಸ್ಯೆ: ಕೋಟೆ ಬನಶಂಕರಿ ದೇವಸ್ಥಾನದಲ್ಲಿ ವಿಶೇಷ ಪೂಜೆ, ಭಕ್ತರ ಸಾಗರ