ಬೆಂಗಳೂರು: ಮಳೆ ನಿಂತಿದೆ, ಬೆಳೆ ಕೊಯ್ಲು ಮಾಡೋಣಾ ಅಂತ ರೈತರು ಯೋಜನೆ ಹಾಕಿಕೊಂಡರೆ ಬೆಳ್ ಬೆಳಗ್ಗೆನೆ ಸೋನೆ ಮಳೆ ರೈತರು ಚಿಂತೆ ಮಾಡುವಂತೆ ಮಾಡಿಟ್ಟಿದೆ. ನೈರುತ್ಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಮ್ಯಾಂಡೌಸ್ ಚಂಡಮಾರುತ ಆರಂಭವಾಗಿದೆ. ಇದರಿಂದಾಗಿ ರಾಜ್ಯದಲ್ಲಿಯೂ ಮಳೆ ಆರಂಭವಾಗಿದೆ. ಮುಂದಿನ ಐದು ದಿನಗಳ ಕಾಲ ಮಳೆ ಇರಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.
ತಮಿಳುನಾಡು, ಪುಚೆರಿ, ಆಂಧ್ರಪ್ರದೇಶದಲ್ಲಿ ಚಂಡಮಾರುತದ ಅಬ್ಬರ ಉಂಟಾಗಿದೆ. ಇದರ ಎಫೆಕ್ಟ್ ಕರ್ನಾಟಕದ ಮೇಲೂ ಬೀರಲಿದೆ. ಕರ್ನಾಟಕದ ದಕ್ಷಿಣ ಒಳನಾಡಿಗೆ ನಾಳೆಯಿಂದ ಮಳೆಯಾಗಲಿದೆ. ಒಂದೆರಡು ಕಡೆ ಹಗುರವಾಗಿ ಮಳೆಯಾಗಲಿದೆ. ದಕ್ಷಿಣ ಒಳನಾಡಿನಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ ಜಿಲ್ಕೆ ಸೇರಿದಂತೆ ಹಲವೆಡೆ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಇಂದು ಬೆಳಗ್ಗೆಯಿಂದ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಯಲ್ಲಿ ತುಂತುರು ಮಳೆಯಾಗುತ್ತಿದೆ. ಚಳಿಯ ವಾತಾವರಣ ಜೋರಾಗಿದೆ. ಮುಂದಿನ ನಾಲ್ಕು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಸೂಚನೆ ನೀಡಿದೆ.