ಸಿಲಿಂಡರ್ ಬೆಲೆ ಮತ್ತೆ ಏರಿಕೆ; ಹೆಚ್ಡಿಕೆ ಆಕ್ರೋಶ

ಬೆಂಗಳೂರು: ನಿರಂತರವಾಗಿ ಅಡುಗೆ ಅನಿಲ ಬೆಲೆ ಏರಿಕೆ ಮಾಡುವ ಮೂಲಕ ಜನರ ಬದುಕಿಗೆ ಕೊಳ್ಳಿ ಇಡಲಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು, ಕೇಂದ್ರ ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇಂದಿನ ಬೆಳಗಿನ ಶಾಕ್! 14.2 ಕೆಜಿ ತೂಕದ ಅಡುಗೆ ಅನಿಲ ಸಿಲಿಂಡರ್ ಬೆಲೆ 15 ರೂ. ಹೆಚ್ಚಳ. ಈ ಸಿಲಿಂಡರ್ ಬೆಲೆ ಈಗ 900 ರೂ. ಗಡಿಯಲ್ಲಿದೆ. 7 ವರ್ಷಗಳ ಅಚ್ಛೇದಿನದ ಭ್ರಮೆಯಲ್ಲಿ ಜನರ ಬದುಕು ಬೆಂಕಿಯಲ್ಲಿ ಬೇಯುತ್ತಿದೆ.

ಕೋವಿಡ್, ಬೆಲೆ ಏರಿಕೆಯಿಂದ ಜನಜೀವನ ಹಳ್ಳಹಿಡಿದು ಹೋಗಿದೆ. ಬಡ ಭಾರತದ ಜೀವ ಹಿಂಡುತ್ತಿರುವ ಶ್ರೀಮಂತ ಭಾರತದ ಸಾರಥ್ಯ ವಹಿಸಿರುವವರು ಒಂದಿಬ್ಬರು ಉದ್ಯಮಗಳ ಜೋಳಿಗೆ ತುಂಬಿ ಜನರ ಬಾಳಿಗೆ ಕೊಳ್ಳಿ ಇಡುತ್ತಿರುವುದು ಎಲ್ಲರಿಗೂ ಗೊತ್ತಾಗುತ್ತಿದೆ. ಅನಿಯಂತ್ರಿತ ಬೆಲೆ ಏರಿಕೆ ಮಾಪಿಯಾ ಹಿಂದೆ ಇರುವ ಶಕ್ತಿಗಳ ಬಗ್ಗೆ ಬಿಜೆಪಿ ನಾಯಕರು ಮಾತನಾಡಲಿ.ದುಡಿಯುವ ಕೈಗಳಿಗೆ ಕೆಲಸವಿಲ್ಲ. ಅನ್ನಕ್ಕಾಗಿ ಹಾಹಾಕಾರವಿದೆ. ಸೇವೆ ಎಂದು ಸೋಗಲಾಡಿತನ ತೋರಿಸುವ RSS ಬೆಲೆ ಏರಿಕೆ ಬಗ್ಗೆ ಮಾತನಾಡಬೇಕು. ಬಡವರ ಭಾರತ, ಶ್ರೀಮಂತರ ಭಾರತದ ಬಗ್ಗೆ ಹೇಳಬೇಕು. ಅದಕ್ಕೆ ಕಾರಣವಾದ 7 ವರ್ಷಗಳ ಆಡಳಿತದ ಬಗ್ಗೆ ದನಿಯೆತ್ತಬೇಕು. ಇಲ್ಲವಾದರೆ ಬಡವರ ಭಾರತದ ಆಕ್ರೋಶಕ್ಕೆ ನೀವು ತುತ್ತಾಗುವುದು ತಪ್ಪುವುದಿಲ್ಲ.

suddionenews

Recent Posts

ಬಜೆಟ್ ಲೆಕ್ಕಚಾರ ; ಜನರಿಗಿಂತ ಸಚಿವರಿಗೆ ನಿರೀಕ್ಷೆ, ತುಮಕೂರಿಗೆ ಹೆಚ್ಚು ಅನುದಾನ ತರುವ ತವಕ..!!

ಬಜೆಟ್ ಲೆಕ್ಕಚಾರ ; ಜನರಿಗಿಂತ ಸಚಿವರಿಗೆ ನಿರೀಕ್ಷೆ, ತುಮಕೂರಿಗೆ ಹೆಚ್ಚು ಅನುದಾನ ತರುವ ತವಕ..!! ಬೆಂಗಳೂರು; ಮಾರ್ಚ್ 7 ರಾಜ್ಯ…

2 hours ago

ನಿಂಬೆರಸ ಮತ್ತು ಅರಿಶಿನ ಬೆರೆಸಿದ ಪಾನೀಯ ಆರೋಗ್ಯಕ್ಕೆ ಎಷ್ಟೊಂದು ಪ್ರಯೋಜನ ಗೊತ್ತಾ ?

  ಸುದ್ದಿಒನ್ ಪ್ರತಿದಿನ ಬೆಳಿಗ್ಗೆ ನಿಂಬೆರಸ ಮತ್ತು ಅರಿಶಿನ ಬೆರೆಸಿದ ಪಾನೀಯ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ನಿಂಬೆ ಮತ್ತು ಅರಿಶಿನ…

4 hours ago

ಈ ರಾಶಿಯವರು ಎಷ್ಟೇ ದುಡಿದರು ಹಣಕಾಸಿನ ಸಮಸ್ಯೆ ಬಗೆಹರಿಯುತ್ತಿಲ್ಲ

ಈ ರಾಶಿಯ ದಂಪತಿಗಳಿಗೆ ಸಂತಾನ ಭಾಗ್ಯ, ಈ ರಾಶಿಯವರು ಎಷ್ಟೇ ದುಡಿದರು ಹಣಕಾಸಿನ ಸಮಸ್ಯೆ ಬಗೆಹರಿಯುತ್ತಿಲ್ಲ, ಶನಿವಾರದ ರಾಶಿ ಭವಿಷ್ಯ…

7 hours ago

ಇ-ಖಾತಾ ಪಡೆಯಲು ಸಹಾಯವಾಣಿ ಸ್ಥಾಪನೆ : ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಕರೆ

ಚಿತ್ರದುರ್ಗ. ಫೆ.21:  ಜಿಲ್ಲೆಯ ಎಲ್ಲಾ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿರುವ, ಆದರೆ ಇದುವರೆಗೂ ಇ-ಖಾತಾ ಪಡೆಯದೇ ಇರುವ ಕಟ್ಟಡಗಳ…

16 hours ago

ಟೀಂ ಇಂಡಿಯಾ ಆಟಗಾರ ಚಹಲ್ ಹಾಗೂ ಧನುಶ್ರೀ ಡಿವೋರ್ಸ್ ಅಧಿಕೃತ : ಪರಿಹಾರ ಕೊಟ್ಟಿದ್ದು ಎಷ್ಟು ಕೋಟಿ..?

ಕಳೆದ ಕೆಲವು ದಿನಗಳಿಂದ ಟೀಂ ಇಂಡಿಯಾ ಆಟಗಾರ ಯಜುವೇಂದ್ರ ಚಹಾಲ್ ಹಾಗೂ ನಟಿ ಧನುಶ್ರೀ ಅವರ ಡಿವೋರ್ಸ್ ವಿಚಾರ ಸಿಕ್ಕಾಪಟ್ಟೆ…

18 hours ago

ಮೈಸೂರು ಚಾಮುಂಡಿ ಬೆಟ್ಟದಲ್ಲಿ ನಿಯಂತ್ರಣವಾಗ್ತಿಲ್ಲ ಬೆಂಕಿ ..!

ಮೈಸೂರು: ತಾಯಿ ಚಾಮುಂಡಿ ಬೆಟ್ಟದಲ್ಲಿ ಕಿಡಿಗೇಡಿಗಳಿಂದ ಅವಸ್ಥೆಯಾಗಿದೆ. ಮೊದಲೇ ಬಿಸಿಲಿಗೆ ಒಣಗಿದ ಬೆಟ್ಟಕ್ಕೆ ಕಿಡಿತಾಕಿಸಿದ್ದಾರೆ. ಇದೀಗ ಆ ಕಿಡಿ ಜೋರಾಗಿಯೇ…

18 hours ago