Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ನಂಜಪ್ಪ ಆಸ್ಪತ್ರೆಯ ಆಂಕಾಲಜಿ ವಿಭಾಗದಿಂದ ಸೈಟೋರೆಡಕ್ಟಿವ್ ಶಸ್ತ್ರಚಿಕಿತ್ಸೆ ಯಶಸ್ವಿ : ಡಾ.ಎನ್.ನಿಶ್ಚಲ್

Facebook
Twitter
Telegram
WhatsApp

 

ವರದಿ ಮತ್ತು ಫೋಟೋ ಕೃಪೆ :
                      ಸುರೇಶ್ ಪಟ್ಟಣ್,                         
ಮೊ : 98862 95817

 

ನಂಜಪ್ಪ ಆಸ್ಪತ್ರೆಯ ಆಂಕಾಲಜಿ ವಿಭಾಗದಿಂದ ಸೈಟೋರೆಡಕ್ಟಿವ್ ಶಸ್ತ್ರಚಿಕಿತ್ಸೆ ಯಶಸ್ವಿ : ಡಾ.ಎನ್.ನಿಶ್ಚಲ್

Cytoreductive surgery by Oncology Department of Nanjappa Hospital successful : Dr. N. Nischal

ಸುದ್ದಿಒನ್, ಚಿತ್ರದುರ್ಗ ಫೆಬ್ರವರಿ. 15 :  ದಾವಣಗೆರೆಯ ನಂಜಪ್ಪ ಆಸ್ಪತ್ರೆಯ ಕ್ಯಾನ್ಸರ್ ಚಿಕಿತ್ಸಾ (ಆಂಕಾಲಜಿ) ವಿಭಾಗವು ಅಂಡಾಶಯದ ಕ್ಯಾನ್ಸರ್ ಮತ್ತು ಸ್ತನದ ಕ್ಯಾನ್ಸರ್ ಎರಡರಿಂದಲೂ ಬಳಲುತ್ತಿದ್ದ 51 ವರ್ಷದ ಮಹಿಳೆಗೆ ಸ್ತನದ ಕ್ಯಾನ್ಸರ್ ಶಸ್ತ್ರಚಿಕಿತ್ಸೆಯ ಜೊತೆಗೆ, ಸಿಆರ್‍ಎಸ್ (‘ಸೈಟೋರೆಡಕ್ಟಿವ್ ‘ಶಸ್ತ್ರಚಿಕಿತ್ಸೆಯ) ಮತ್ತು ಹೈಪೆಕ್ ಎಂಬ ಸಂಕೀರ್ಣ ಶಸ್ತ್ರಚಿಕಿತ್ಸೆಯ ಮೂಲಕ ಯಶಸ್ವಿಯಾಗಿ ಚಿಕಿತ್ಸೆ ನೀಡಲಾಗಿದೆ ಎಂದು ಮುಂಬೈನ ಟಾಟಾ ಮೆಮೋರಿಯಲ್ ಆಸ್ಪತ್ರೆಯ ಕ್ಯಾನ್ಸರ್ ಶಸ್ತ್ರಚಿಕಿತ್ಸಾ ತಜ್ಞ ಡಾ.ಎನ್.ನಿಶ್ಚಲ್ ತಿಳಿಸಿದರು.

ನಗರದ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಒಂದು ತಿಂಗಳ ಹಿಂದೆ ಮಹಿಳೆಗೆ ಶಸ್ತ್ರಚಿಕಿತ್ಸೆ ನಡೆಸಲಾಗಿದೆ, ಈ ಸಂಕೀರ್ಣ ಆಪರೇಷನ್ ಸುಮಾರು 10 ಗಂಟೆಗಳ ಕಾಲ ನಡೆಸಲಾಗಿದೆ. ಪ್ರಸ್ತುತ ರೋಗಿಯ ಆರೋಗ್ಯ ಸ್ಥಿರವಾಗಿದ್ದು, ಆಸ್ಪತ್ರೆಯಿಂದ ಮನೆಗೆ ತೆರಳಿದ್ದಾರೆ ಎಂದರು.

ಹೈಪರ್ಥೆಮಿಕ್ಮಿರಕ್ ಇಂಟ್ರಾಪೆರಿಟೋನಿಯಲ್ ಕೆಮೋಥೆರಪಿಯು ಅನೇಕ ಆಕ್ರಮಣಕಾರಿ ಕಿಬ್ಬೊಟ್ಟೆಯ ಕ್ಯಾನ್ಸರ್‍ಗಳಿಗೆ, ಅಪೆಂಡಿಕ್ಯುಲರ್ ಕ್ಯಾನ್ಸರ್ ನಂತಹ ಗೆಡ್ಡೆಗಳಿಗೆ ತುಲನಾತ್ಮಕವಾಗಿ ಹೊಸ ಚಿಕಿತ್ಸೆಯ ಆಯ್ಕೆಯಾಗಿದೆ. ಕಿಬ್ಬೊಟ್ಟೆಯ ಕುಳಿಯೊಳಗೆ ಹರಡಿರುವ ಕೊಲೊರೆಕ್ಟಲ್ ಕ್ಯಾನ್ಸರ್  ಅಂಡಾಶಯದ ಕ್ಯಾನ್ಸರ್, ಹೊಟ್ಟೆಯ ಕ್ಯಾನ್ಸರ್ ಮತ್ತು ಮಸೊಥೆಲಿಯೋಮಾ ದೇಹದ ಬಹುತೇಕ ಆಂತರಿಕ ಅಂಗಾಂಗಗಳಲ್ಲಿ ವ್ಯಾಪಿಸಿರುವ ತೆಳುವಾದ ಅಂಗಾಂಶ ಪದರದಲ್ಲಿ ಕಂಡುಬರುವ ಒಂದು ಬಗೆಯ ಕ್ಯಾನ್ಸರ್ ಅನ್ನು ಈ ಚಿಕಿತ್ಸೆಯಿಂದ ನಿಯಂತ್ರಿಸಬಹುದು ಮತ್ತು ಕೆಲವೊಮ್ಮೆ ಗುಣಪಡಿಸಬಹುದು ಎಂದರು.

ನಂಜಪ್ಪ ಆಸ್ಪತ್ರೆಯಲ್ಲಿ ನಮ್ಮ ತಂಡವು ಕ್ಯಾನ್ಸರ್ ಶಸ್ತ್ರಚಿಕಿತ್ಸಕರು (ಸರ್ಜಿಕಲ್ ಆಂಕಾಲಜಿಸ್ಟ್), ವೈದ್ಯಕೀಯ ಕ್ಯಾನ್ಸರ್ ತಜ್ಞರು (ಮೆಡಿಕಲ್ ಆಂಕಾಲಜಿಸ್ಟ್) ವಿಕಿರಣ ಕ್ಯಾನ್ಸರ್ ತಜ್ಞರು (ರೇಡಿಯೇಷನ್ ಅಂಕಾಲಜಿಸ್ಟ್) ಮತ್ತು ಕ್ಯಾನ್ಸರ್ ರೋಗಶಾಸ್ತ್ರಜ್ಞರು (ಆಂಕೋ ಪ್ಯಾಥಾಲಜಿಸ್ಟ್) ಒಳಗೊಂಡ ಸಮಗ್ರ ಟ್ಯೂಮರ್ ಬೋರ್ಡ್ ಕಾರ್ಯ ವಿಧಾನದ ಮೂಲಕ ಪ್ರತಿಯೊಬ್ಬ ರೋಗಿಗೆ ಸಾಧ್ಯವಾದಷ್ಟು ಅತ್ಯುತ್ತಮ ಚಿಕಿತ್ಸೆ ದೊರೆಯುವಂತೆ ಖಾತರಿ ವಹಿಸಲು ಶ್ರಮಿಸುತ್ತಿದೆ ಎಂದರು.

ಆಸ್ಪತ್ರೆಯು ಅತ್ಯಾಧುನಿಕ ಆಪರೇಷನ್ ಥಿಯೇಟರ್, ಉಪಕರಣಗಳು, ಐಸಿಯು ಹೊಂದಿದೆ. ಪೆರಿಟೋನಿಯಲ್ ಕ್ಯಾನ್ಸರ್ ಹೊಂದಿರುವ ರೋಗಿಗಳಿಗೆ ಹತಾಶ ಸಂದರ್ಭಗಳಲ್ಲಿ ಸಂಪೂರ್ಣ ಸೈಟೋರೆಡಕ್ಟಿವ್ ಶಸ್ತ್ರಚಿಕಿತ್ಸೆಯ ಮೂಲಕ ಭರವಸೆ ಒದಗಿಸುತ್ತೇವೆ ಎಂದು ಮಾಹಿತಿ ನೀಡಿದರು.

ಅನೇಕ ಗೆಡ್ಡೆಗಳಿಗೆ, ಗೆಡ್ಡೆಯ ಬಹುಭಾಗವನ್ನು ಕಡಿಮೆ ಮಾಡಲು ಮತ್ತು ಚಿಕಿತ್ಸೆಯ ಪ್ರತಿಕ್ರಿಯೆಯನ್ನು ಅರಿಯಲು ಮೊದಲು ರಕ್ತದ ಹರಿವಿನ ಮೂಲಕ ಕೆಮೋಥೆರಪಿಯನ್ನು ನೀಡಲಾಗುತ್ತದೆ. ಹೈಪೆಕ್ ಕುರಿತು ಜಾಗತಿಕ ಜಾಗೃತಿ ಹೆಚ್ಚುತ್ತಿದೆ. ರೋಗಿಗಳು ಇದರಿಂದ ಪ್ರಯೋಜನ ಪಡೆಯುತ್ತಿದ್ದಾರೆ. ಭಾರತದಲ್ಲಿ ನಾವು ಹೆಚ್‍ಐಪಿಇಸಿ ಫಲಿತಾಂಶಗಳ ಬಗ್ಗೆ ಧೃಡವಾದ ಪುರಾವೆಗಳನ್ನು ನೀಡುತ್ತಿದ್ದೇವೆ ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮೆಡಿಕಲ್ ಅಂಕಾಲಜಿಸ್ಟ್  ಡಾ.ಪ್ರಸಾದ್ ಪಿ.ಗುಣಾರಿ, ಅರಿವಳಿಕೆ ತಜ್ಞರಾದ ಡಾ.ವಿಜಯ ಚಂದ್ರಪ್ಪ, ಪ್ರಶಾಂತ್, ತ್ರಿವೇಣಿ ಶೆಟ್ಟಿ ಮುಂತಾದವರಿದ್ದರು

Facebook
Twitter
Telegram
WhatsApp
suddionenews

suddionenews

Leave a Comment

Top Stories

ಗೋಲ್ಡ್ ರೇಟ್ ಇಂದು ಕೂಡ ಹೆಚ್ಚಳ : ಗ್ರಾಂಗೆ ಎಷ್ಟು ಏರಿಕೆ ಆಯ್ತು..?

ಬೆಂಗಳೂರು: ಚಿನ್ನ ಬೆಳ್ಳಿಯ ಬೆಲೆಯಲ್ಲಿ ಹಾವು ಏಣಿಯ ಆಟ ಕೆಲ ದಿನದಿಂದ ಕಾಣಿಸ್ತಾ ಇದೆ. ಹಾವು ಮೇಲೇರಿದಂತೆ ಚಿನ್ನದ ಬೆಲೆ ಸರಸರನೆ ಏರುತ್ತಲೆ ಇದೆ. ಇಂದು ಕೂಡ ಇಳಿಕೆಯಾಗದೆ ಏರಿಕೆಯತ್ತಲೇ ಮುಖ ಮಾಡಿದೆ. ಹಾಗಾದ್ರೆ

ಬಿಗ್ ಬಾಸ್ ಮನೆಯಲ್ಲಿ ಅಣ್ಣ-ತಂಗಿ ಯುದ್ಧ : ಶಿಶಿರ್ ಗೆ ಸವಾಲು ಹಾಕಿದ ಚೈತ್ರಾ..!

ಬಿಗ್ ಬಾಸ್ ಕನ್ನಡ ಸೀಸನ್ 11 ನಲ್ಲಿ ಶಿಶಿರ್ ಹಾಗೂ ಚೈತ್ರಾ ಅಣ್ಣ ತಂಗಿಯಂತೆ. ಚೈತ್ರಾ ಕುಗ್ಗಿದಾಗೆಲ್ಲ ಶಿಶಿರ್ ಧೈರ್ಯ ತುಂಬಿದ್ದಾರೆ. ಅದಕ್ಕಾಗಿಯೇ ಬಿಗ್ ಬಾಸ್ ತಂಗಿ ನಿನಗಾಗಿ ಎಂಬ ಫೋಸ್ಟರ್ ಅನ್ನೇ ರಿಲೀಸ್

ಬ್ಯಾಂಕ್‍ಗಳ ಕಾರ್ಯವೈಖರಿಗೆ ಸಂಸದ ಗೋವಿಂದ ಎಂ ಕಾರಜೋಳ ಅಸಮದಾನ

ಚಿತ್ರದುರ್ಗ. ನ.21: ಸರ್ಕಾರ ಬಡವರಿಗಾಗಿ ರೂಪಿಸಿರುವ ಸಹಾಯಧನ ಹಾಗೂ ಸಾಲ ಸೌಲಭ್ಯದ ಸ್ಕೀಂಗಳನ್ನು ಜಾರಿ ಮಾಡುವಲ್ಲಿ ನಿರ್ಲಕ್ಷ್ಯ ತೋರುವ ಬ್ಯಾಂಕುಗಳ ಕಾರ್ಯವೈಖರಿಗೆ ಸಂಸದ ಗೋವಿಂದ ಎಂ ಕಾರಜೋಳ ಅಸಮಾಧಾನ ವ್ಯಕ್ತಪಡಿಸಿದರು. ಇದೇ ಪರಿಸ್ಥಿತಿ ಮುಂದುವರೆದರೆ

error: Content is protected !!