in ,

ಪರಿಸರ ಸ್ನೇಹಿ ಗಣೇಶಮೂರ್ತಿ ಪ್ರತಿಷ್ಠಾಪನೆಗೆ ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಕರೆ

suddione whatsapp group join

ಚಿತ್ರದುರ್ಗ, (ಸೆಪ್ಟೆಂಬರ್. 03) : ವಿಷಕಾರಿ ರಾಸಾಯನಿಕ, ಲೋಹದ ಲೇಪದ, ಪ್ಲಾಸ್ಟರ್ ಆಫ್ ಪ್ಯಾರಿಸ್‍ನ ಗಣೇಶನ ಮೂರ್ತಿ ಬಳಕೆ ಮಾಡಬೇಡಿ. ಗಣೇಶ ಚತುರ್ಥಿಯನ್ನು ಪರಿಸ್ನೇಹಿಯಾಗಿ ಆಚರಿಸೋಣ ಎಂದು ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಸಾರ್ವಜನಿಕರಿಗೆ ಮನವಿ ಮಾಡಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಗಣೇಶ ಚತುರ್ಥಿ-2021ರ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಪ್ರಸ್ತುತ ಕೋವಿಡ್-19 ಸಾಂಕ್ರಾಮಿಕ ಸೋಂಕಿನ ಕಾರಣ ಸಾರ್ವಜನಿಕರು ಸಾಧ್ಯವಾದಷ್ಟು ಅರಿಶಿಣ ಗಣೇಶ ಮೂರ್ತಿಗಳ ತಯಾರಿಸಬೇಕು. ಮಾಲಿನ್ಯ ನಿಯಂತ್ರಣ ಮಂಡಳಿಯ ಅರಿಶಿಣ ಗಣೇಶ ಅಭಿಯಾನ “ಅರಿಶಿಣ ಗಣೇಶ ತಯಾರಿಸಿ-ಬಹುಮಾನ ಗೆಲ್ಲಿರಿ” ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕು.

ಗಣೇಶ ಮೂರ್ತಿಗಳ ವಿಸರ್ಜನೆಗೆ ನಿರ್ಧಿಷ್ಟ ಸ್ಥಳದಲ್ಲಿ ತಾತ್ಕಾಲಿಕ ವಿಸರ್ಜನಾ ತೊಟ್ಟಿ, ಮೊಬೈಲ್ ಟ್ಯಾಂಕ್, ಕಲ್ಯಾಣಿಗಳನ್ನು ಪ್ರತಿ ವಾರ್ಡ್‍ನಲ್ಲಿ ಗುರುತಿಸಿ ಮೂರ್ತಿಗಳ ವಿಸರ್ಜನೆಗೆ ಕ್ರಮಕೈಗೊಳ್ಳಬೇಕು. ವಿಸರ್ಜನಾ ತೊಟ್ಟಿಯಲ್ಲಿ ಸಂಗ್ರಹವಾಗುವ ಮಣ್ಣು ಮತ್ತು ಪೂಜೆಗೆ ಬಳಸಿದಂತಹ ಹೂವು, ಹಣ್ಣು, ಬಾಳೆಕಂಬ, ಮಾವಿನ ತೋರಣ ಇತ್ಯಾದಿಗಳನ್ನು  (ಹಸಿ ಕಸ) ಪ್ರತ್ಯೇಕಿಸಿ ಸೂಕ್ತವಾಗಿ  ವಿಲೇವಾರಿಗೆ ಸ್ಥಳೀಯ ಸಂಸ್ಥೆಗಳು ಕ್ರಮವಹಿಸಬೇಕು ಎಂದು ಜಿಲ್ಲಾಧಿಕಾರಿಗಳು ಸೂಚಿಸಿದರು.
ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿ ಈ.ಪ್ರಕಾಶ್ ಮಾತನಾಡಿ, ಜಲಮಾಲಿನ್ಯ ತಡೆಗಟ್ಟುವ ನಿಟ್ಟಿನಲ್ಲಿ ಮಂಡಳಿಯು ಪಿಓಪಿಯಿಂದ ತಯಾರಿಸುವ ವಿಗ್ರಹಗಳನ್ನುಯಾವುದೇ ಜಲಮೂಲಗಳಿಗೆ ವಿಸರ್ಜನೆ ಮಾಡುವುದನ್ನು ನಿರ್ಬಂಧಿಸಿ ಜುಲೈ20, 2016ರಂದು ಅಧಿಸೂಚನೆ ಹಾಗೂ ಆಗಸ್ಟ್21,2019ರಂದು ಮಾರ್ಗಸೂಚಿ ಹೊರಡಿಸಿದೆ. ಪಿಓಪಿ ಮತ್ತು ರಸಾಯನಿಕ ಬಣ್ಣದಿಂದ ತಯಾರಿಸಿದ ವಿಗ್ರಹಗಳನ್ನು ಯಾವುದೇ ಜಲಮೂಲಗಳಲ್ಲಿ ವಿಸರ್ಜನೆಯಾಗದ ರೀತಿಯಲ್ಲಿ ಎಲ್ಲ ಸ್ಥಳೀಯ ಸಂಸ್ಥೆಗಳು ಹಾಗೂ ಗ್ರಾಮ ಪಂಚಾಯಿತಿ ಕ್ರಮಕೈಗೊಳ್ಳಬೇಕು ಎಂದು ಹೇಳಿದರು.

ರಾಜ್ಯ ಮತ್ತು ಹೊರ ಜಿಲ್ಲೆಗಳಿಂದ ಬರುವಂತಹ ಪಿಒಪಿ, ಲೋಹ ಮಿಶ್ರಿತ ಬಣ್ಣದ ವಿಗ್ರಹಗಳನ್ನು ತಡೆಗಟ್ಟಲು ಆರ್‍ಟಿಒ ಮತ್ತು ಪೊಲೀಸ್ ಅಧಿಕಾರಿಗಳು ಚೆಕ್‍ಪೋಸ್ಟ್‍ಗಳಲ್ಲಿ ತಪಸಾಣೆ ನಡೆಸಬೇಕು. ಎಲ್ಲ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಈಗಾಗಲೇ ವಿಸರ್ಜಿಸದೇ ಉಳಿದಿರುವ, ತಯಾರಿಸಿದ ಮಾರಾಟ ಮಾಡಲು ಸಿದ್ಧವಾಗಿರುವ ಪಿಒಪಿ ಅಥವಾ ಲೋಹ ಮಿಶ್ರಿತ ಬಣ್ಣದ ವಿಗ್ರಹಗಳನ್ನು ಸ್ಥಳೀಯ ಮಟ್ಟದ ಅಧಿಕಾರಿಗಳ ಸಮಿತಿಯೊಂದಿಗೆ ತನ್ನ ಸುಪರ್ದಿಗೆ ತೆಗೆದುಕೊಂಡು ಅಂತಹ ವಸ್ತುಗಳನ್ನು ಸ್ಥಳೀಯ ಸಂಸ್ಥೆಗಳಲ್ಲಿ ಇರುವ ಘನತ್ಯಾಜ್ಯ ವಿಲೇವಾರಿ ಘಟಕಗಳಿಗೆ ಸಾಗಿಸಿ ಶ್ರೇಡರ್‍ಗಳನ್ನು ಉಪಯೋಗಿಸಿಕೊಂಡು ಒಂದೇ ಸ್ಥಳದಲ್ಲಿ ವಿಲೇವಾರಿ ಮಾಡಬೇಕು ಎಂದರು.

10 ಲಕ್ಷ ಅರಿಶಿಣ ಗಣೇಶ: ಈ ಬಾರಿಯ ಗಣೇಶ ಚತುರ್ಥಿಯ ವೇಳೆ 10 ಲಕ್ಷ ಅರಿಶಿಣಗಳನ್ನು ನಿಗಧಿತ ಸಮಯದಲ್ಲಿ ನಿರ್ಮಿಸುವ ಗುರಿಯೊಂದಿಗೆ ವಿಶ್ವ ದಾಖಲೆ ನಿರ್ಮಿಸುವ ಪ್ರಯತ್ನಕ್ಕೆ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಮುಂದಾಗಿದೆ.

ಇದೇ ಸೆಪ್ಟೆಂಬರ್ 08 ಬೆಳಿಗ್ಗೆ 6.00 ರಿಂದ 10ನೇ ತಾರೀಖಿನ ಸಂಜೆ 06 ಗಂಟೆಯವರೆಗೆ ಸಾರ್ವಜನಿಕರು ತಯಾರಿಸಿದ ಅರಿಶಿಣ ಗಣೇಶನ ಛಾಯಾಚಿತ್ರವನ್ನು ಮಂಡಳಿಯ ಜಾಲತಾಣಕ್ಕೆ kspcb.karnataka.gov.in, Youtube@kspcbkarntaka, facebook@kspcbofficial,Twitter@karnatakakspcb, Instagram:kspcb_official   ಗೆ ಸಾರ್ವಜನಿಕರು ಕಳಿಸಬೇಕು ಮಾಲಿನ್ಯ ನಿಯಂತ್ರಣಾಧಿಕಾರಿಗಳು ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ರಾಧಿಕಾ ಮಾತನಾಡಿ, ಸಾರ್ವಜನಿಕ ಗಣೇಶೋತ್ಸವ ಆಚರಣೆಗೆ ಸಂಬಂಧಿಸಿದಂತೆ ಸರ್ಕಾರ ಇನ್ನೂ ಅವಕಾಶ ನೀಡಿಲ್ಲ.

ಸೆಪ್ಟೆಂಬರ್ 5 ನಂತರ ಸರ್ಕಾರ ಈ ಕುರಿತು ತೀರ್ಮಾನಕೈಗೊಳ್ಳುವ ಸಾಧ್ಯತೆ ಇದೆ. ಸರ್ಕಾರದ ಅನುಮತಿಯನ್ವಯ ಸಾರ್ವಜನಿಕವಾಗಿ ಇಡಲಾಗುವ ಗಣೇಶ ವಿಗ್ರಹಗಳನ್ನು ಪ್ರತಿಷ್ಠಾಪಿಸಲು ಸಂಬಂಧಿಸಿದ ಸಮಿತಿಯವರು ಕಡ್ಡಾಯವಾಗಿ ಪೊಲೀಸ್ ಇಲಾಖೆಯಿಂದ ನಿಬಂಧನೆಗೊಳಪಟ್ಟು ಅನುಮತಿ ಪಡೆದ ನಂತರವೇ ಸ್ಥಾಪಿಸಬೇಕು ಎಂದು ಹೇಳಿದರು.

ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಸತೀಶ್ ರೆಡ್ಡಿ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಪೌರಾಯುಕ್ತರು, ಮುಖ್ಯಾಧಿಕಾರಿಗಳು, ಪರಿಸರ ಅಭಿಯಂತರರು ಇದ್ದರು.

What do you think?

Written by suddionenews

Leave a Reply

Your email address will not be published. Required fields are marked *

GIPHY App Key not set. Please check settings

ಕೆನಡಾದಲ್ಲಿ ಗೌರಿ ಲಂಕೇಶ್ ದಿನಾಚರಣೆಗೆ ಸಿದ್ಧತೆ

ಅನಿಲ ಬೆಲೆ ಏರಿಕೆಗೆ ತಾಲಿಬಾನ್ ಸಮಸ್ಯೆಯೇ ಕಾರಣ : ಅರವಿಂದ್ ಬೆಲ್ಲದ್