Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಡಿ.ದೇವರಾಜ ಅರಸು ನಿಗಮ: ಅರ್ಜಿ ಸಲ್ಲಿಕೆ ಅವಧಿ ಅ. 15 ರವರೆಗೆ ವಿಸ್ತರಣೆ

---Advertisement---

 

ಚಿತ್ರದುರ್ಗ. ಅ.03: ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ಹಾಗೂ ವಿವಿಧ ಸಮುದಾಯಗಳ ಅಭಿವೃದ್ಧಿ ನಿಗಮಗಳ ವತಿಯಿಂದ 2026-27ನೇ ಸಾಲಿನಲ್ಲಿ ಅನುಷ್ಠಾನಗೊಳಿಸುತ್ತಿರುವ ವಿವಿಧ ಯೋಜನೆಗಳ ಅಡಿಯಲ್ಲಿ ಸಾಲಸೌಲಭ್ಯ ಪಡೆಯಲು ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ಅಕ್ಟೋಬರ್ 15 ರವರೆಗೆ ವಿಸ್ತರಿಸಲಾಗಿದೆ.

ಈ ಮೊದಲು ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 30 ಕೊನೆಯ ದಿನಾಂಕವಾಗಿತ್ತು. ಆದರೆ, ಸಾರ್ವಜನಿಕರು ಹಾಗೂ ಅರ್ಹ ಫಲಾನುಭವಿಗಳಿಗೆ ಅನುಕೂಲವಾಗುವಂತೆ ನಿಗಮದ ವ್ಯವಸ್ಥಾಪಕ ನಿರ್ದೇಶಕರ ಸೂಚನೆಯಂತೆ ಈ ಕಾಲಾವಕಾಶ ವಿಸ್ತರಿಸಲಾಗಿದೆ.

ಈ ದಿನಾಂಕ ವಿಸ್ತರಣೆಯು ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ಕರ್ನಾಟಕ ವಿಶ್ವಕರ್ಮ, ಉಪ್ಪಾರ, ನಿಜಶರಣ ಅಂಬಿಗರ ಚೌಡಯ್ಯ, ಸವಿತಾ ಸಮಾಜ, ಮಡಿವಾಳ ಮಾಚಿದೇವ, ಮರಾಠ, ಒಕ್ಕಲಿಗ, ಅಲೆಮಾರಿ ಮತ್ತು ಅರೆಅಲೆಮಾರಿ, ಕಾಡುಗೊಲ್ಲ, ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮಗಳಿಗೆ ಅನ್ವಯಿಸಲಿದೆ.

ಹಿಂದುಳಿದ ವರ್ಗಗಳ ಅರ್ಹ ಫಲಾನುಭವಿಗಳು ಈ ಅವಧಿ ವಿಸ್ತರಣೆ ಸಮಯಾವಕಾಶ ಬಳಸಿಕೊಂಡು ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಚಿತ್ರದುರ್ಗದ ಜಿಲ್ಲಾ ವ್ಯವಸ್ಥಾಪಕರ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now