Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ : ಸ್ವಯಂ ಉದ್ಯೋಗ ಸಾಲ ಸೇರಿದಂತೆ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

---Advertisement---

ಚಿತ್ರದುರ್ಗ. ಆ.06: ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ 2024-25ನೇ ಸಾಲಿಗೆ ವಿವಿಧ ಯೋಜನೆಗಳಿಗೆ ಸೇವಾಸಿಂಧು ತಂತ್ರಾಂಶದಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಆಗಸ್ಟ್ 31 ಕೊನೆಯ ದಿನವಾಗಿದೆ.

ಡಿ.ದೇವರಾಜ ಅರಸು ಸ್ವಯಂ ಉದ್ಯೋಗ ವೈಯಕ್ತಿಕ ಸಾಲ ಯೋಜನೆ, ಗಂಗಾಕಲ್ಯಾಣ ನೀರಾವರಿ ಯೋಜನೆ, ಅರಿವು ಶೈಕ್ಷಣಿಕ ಸಾಲ ಯೋಜನೆ, ವಿದೇಶಿ ವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ಸಾಲ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ಸ್ವಯಂ ಉದ್ಯೋಗ ಸಾಲ ಯೋಜನೆ (ವಾಣಿಜ್ಯ ಬ್ಯಾಂಕುಗಳ ಸಹಯೋಗದೊಂದಿಗೆ), ಸ್ವಾತಂತ್ರ್ಯ ಅಮೃತ ಮಹೋತ್ಸವದ ಮುನ್ನಡೆ ಯೋಜನೆ ಹಾಗೂ ಹೊಲಿಗೆ ಯಂತ್ರ ವಿತರಣೆ ಯೋಜನೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಈ ಯೋಜನೆಗಳು ವಿಶ್ವಕರ್ಮ, ಉಪ್ಪಾರ, ಅಂಬಿಗ, ಸವಿತಾ, ಮಡಿವಾಳ, ಅಲೆಮಾರಿ ಮತ್ತು ಅರೆ ಅಲೆಮಾರಿ ಸಮುದಾಯ, ಒಕ್ಕಲಿಗ, ಲಿಂಗಾಯತ, ಕಾಡುಗೊಲ್ಲ, ಮರಾಠ, ಮತ್ತು ಇದರ ಉಪ ಸಮುದಾಯಗಳು ಹೊರತುಪಡಿಸಿ, ಹಿಂದಳಿದ ವರ್ಗಗಳಾದ ಪ್ರವರ್ಗ-1, 2ಎ, 3ಎ, ಮತ್ತು 3ಬಿ ಸಮುದಾಯಗಳಿಗೆ ಅನ್ವಯವಾಗುತ್ತದೆ.
ಅರ್ಜಿ ಸಲ್ಲಿಸುವಾಗ ಅರ್ಜಿದಾರರು ಆಧಾರ್ ಜೋಡಣೆಯಾದ ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆ ಹೋಂದಿರಬೇಕು. ಆಧಾರ್ ಕಾರ್ಡ್ನಲ್ಲಿರುವಂತೆ ಅರ್ಜಿದಾರರ ಹೆಸರು, ಇತರೆ ದಾಖಲಾತಿಗಳಾದ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಬ್ಯಾಂಕ್ ಪಾಸ್ ಪುಸ್ತಕದಲ್ಲಿಯೂ ಇದ್ದು ಹೊಂದಾಣಿಕೆಯಾಗಬೇಕು.

ನಿಗಮದ ಯೋಜನೆಗಳಲ್ಲಿ ಒಂದು ಬಾರಿ ಯಾವುದಾದರು ಯೋಜನೆಯ ಪ್ರಯೋಜನೆ ಪಡೆದಿದ್ದಲ್ಲಿ ಅಂತಹವರು ಹಾಗೂ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ. 2023-24ನೇ ಸಾಲಿನಲ್ಲಿ ಅರ್ಜಿ ಸಲ್ಲಿಸಿ ಸೌಲಭ್ಯ ಪಡೆಯದೇ ಇರುವ ಫಲಾಪೇಕ್ಷಿತರು ಮತ್ತೊಮ್ಮೆ ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ.
ಸೌಲಭ್ಯಗಳನ್ನು ಪಡೆಯಲು ಹಿಂದುಳಿದ ವರ್ಗಗಳ ಅರ್ಜಿದಾರರು ಅರ್ಜಿಗಳನ್ನು ಸೇವಾಸಿಂಧು ಪೋರ್ಟಲ್

http://sevasindhu.karnataka.gov.in    ಮುಖಾಂತರ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾಕೇಂದ್ರಗಳಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್‌ಸೈಟ್  www.dbcdc.karnatak.gov.in

ಅಥವಾ ನಿಗಮದ ದೂರವಾಣಿ ಸಂಖ್ಯೆ 080-22374832, 850770004 ಮತ್ತು 8050770005 ಅಥವಾ ಜಿಲ್ಲಾ ಕಚೇರಿಯ ದೂರವಾಣಿ ಸಂಖ್ಯೆ 08194-220882 ಗೆ ಸಂಪರ್ಕಿಸಬಹುದು ಎಂದು ಡಿ.ಬಿ.ಸಿ.ಡಿ.ಸಿ ಜಿಲ್ಲಾ ವ್ಯವಸ್ಥಾಪಕಿ ಹೆಚ್.ಶಿಲ್ಪಾ ತಿಳಿಸಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment