Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಡಿ.ಕೆ.ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ : ಚಿತ್ರದುರ್ಗದಲ್ಲಿ ಸಂಭ್ರಮಾಚರಣೆ

---Advertisement---

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಜೂನ್‌. 03 : ರಾಜ್ಯದ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಬುಧವಾರ ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆ ಜಿಲ್ಲಾ ಕಾಂಗ್ರೆಸ್ ಕಚೇರಿ ಎದುರು ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷ ಪಿ.ರಘುರವರ ಅಭಿಮಾನಿಗಳು ಪಟಾಕಿ ಸಿಡಿಸಿ ಕೇಕ್ ಕತ್ತರಿಸಿ ಸಂಭ್ರಮಿಸಿದರು.

ರಾಜ್ಯಪಾಲರಾದ ಥಾವರ್‍ಚಂದ್ ಗೆಹ್ಲೋಟ್ ಪ್ರತಿಜ್ಞಾವಿಧಿ ಬೋಧಿಸುತ್ತಿದ್ದಂತೆ ಕಾಂಗ್ರೆಸ್ ಕಾರ್ಯಕರ್ತರು ನೂತನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‍ಗೆ ಜೈಕಾರ ಕೂಗಿದರು.ಪಿ.ರಘು ಫೋಟೋಗಳುಳ್ಳ ಪೋಸ್ಟರ್‍ಗಳನ್ನು ಎತ್ತಿಹಿಡಿದು ಘೋಷಣೆಗಳನ್ನು ಕೂಗುತ್ತಿದ್ದ ಅಭಿಮಾನಿಗಳು ನೂತನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಸಾರಥ್ಯದಲ್ಲಿ ಮುನ್ನಡೆಯುವ ಸರ್ಕಾರ ಅಭಿವೃದ್ದಿಯತ್ತ ಸಾಗಲಿ ಎಂದು ಹಾರೈಸಿದರು.

 

ರಾಜ್ಯದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಹಿಮಾಚಲಪ್ರದೇಶ, ಕೇರಳ, ತೆಲಂಗಾಣ ಮುಖ್ಯಮಂತ್ರಿಗಳು, ಹಾಗೂ ಕಾಂಗ್ರೆಸ್ ಪಕ್ಷದ ವರಿಷ್ಟರು ಸೇರಿದಂತೆ ಅನೇಕ ಗಣ್ಯರು ನೂತನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಹಾಗೂ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಮತ್ತು ಕ್ಯಾಬಿನೆಟ್ ದರ್ಜೆ ಸಚಿವರುಗಳಾಗಿ ಪ್ರಮಾಣ ವಚನ ಸ್ವೀಕರಿಸಿದವರಿಗೆ ಅಭಿನಂದಿಸಿದರು.

ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಕೆ.ಪಾಪಯ್ಯ, ಸಾಧಿಕ್ ಫೈಲ್ವಾನ್, ಅಣ್ಣಿ, ಕೋಟಿ, ಲೋಕೇಶ್, ಕೆ.ರಾಜಣ್ಣ, ಗ್ರಾಮ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಮಂಜುನಾಥ್‍ ಬಳ್ಳೆಕಟ್ಟೆ, ಸತೀಶ್ ಜೆಜೆಹಟ್ಟಿ, ಎಂ.ಕೆ.ಹಟ್ಟಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಗಣೇಶ್, ಸುನಿಲ್‍ಕುಮಾರ್, ಪ್ರಕಾಶ್ ಭರಮಸಾಗರ ಇನ್ನು ಅನೇಕರು ಸಂಭ್ರಮಾಚರಣೆಯಲ್ಲಿ ಪಾಲ್ಗೊಂಡಿದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now