Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಜೂನ್ 3ರ ಸಂಜೆ 4.05ಕ್ಕೆ ಕರ್ನಾಟಕದ 25ನೇ ಮುಖ್ಯಮಂತ್ರಿ ಆಗಿ ಡಿ.ಕೆ.ಶಿವಕುಮಾರ್ ಪ್ರಮಾಣವಚನ ಸ್ವೀಕಾರ

---Advertisement---

ಸುದ್ದಿಒನ್,ಬೆಂಗಳೂರು,ಮೇ.31 :ರಾಜ್ಯ ರಾಜಕೀಯದಲ್ಲಿ ಕಳೆದ ಕೆಲವು ದಿನಗಳಿಂದ ಮನೆಮಾಡಿದ್ದ ತೀವ್ರ ಕುತೂಹಲ ಹಾಗೂ ಹಗ್ಗಜಗ್ಗಾಟಕ್ಕೆ ಕೊನೆಗೂ ತೆರೆ ಬಿದ್ದಿದೆ. ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಿಎಂ ರೇಸ್ ಗೆದ್ದ ಬೆನ್ನಲ್ಲೇ ರಾಜಭವನಕ್ಕೆ ದೌಡಾಯಿಸಿದ ಡಿಕೆಶಿ, ರಾಜ್ಯಪಾಲರನ್ನು ಭೇಟಿ ಮಾಡಿ ಸರ್ಕಾರ ರಚನೆಯ ಹಕ್ಕು ಮಂಡಿಸಿದ್ದಾರೆ. ರಾಜ್ಯಪಾಲರು ಕೂಡ ಹೊಸ ಸರ್ಕಾರ ರಚನೆಗೆ ಗ್ರೀನ್ ಸಿಗ್ನಲ್ ನೀಡಿದ್ದಾರೆ.

ದಶಕಗಳ ಕಾಲ ಪಕ್ಷಕ್ಕಾಗಿ ಮಂಡಿಯೂರಿ ದುಡಿದ, ಕಷ್ಟಕಾಲದಲ್ಲಿ ಕಾಂಗ್ರೆಸ್ ಬೆನ್ನೆಲುಬಾಗಿ ನಿಂತ ‘ಕನಕಪುರ ಬಂಡೆ’ಯ ಅವಿರತ ಹೋರಾಟಕ್ಕೆ ಕೊನೆಗೂ ಹೈಕಮಾಂಡ್ ಸೂಕ್ತ ಪ್ರತಿಫಲ ನೀಡಿದೆ. ಡಿ.ಕೆ. ಶಿವಕುಮಾರ್ ಅವರು ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಜೂನ್ 3ರಂದು ಸಂಜೆ 4.05ಕ್ಕೆ ಲೋಕಭವನದ ಗಾಜಿನ ಮನೆಯಲ್ಲಿ ಅದ್ಧೂರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಹೊಸ ಮುಖ್ಯಮಂತ್ರಿಯ ಪ್ರಮಾಣ ವಚನ ಸ್ವೀಕಾರದ ಜೊತೆಗೇ ಮೊದಲ ಹಂತದ ಸಚಿವ ಸಂಪುಟದ ಪಟ್ಟಿಯೂ ರಿಲೀಸ್ ಆಗುವ ಸಾಧ್ಯತೆಯಿದೆ. ಹೀಗಾಗಿ, ಮೊದಲ ಲಿಸ್ಟ್‌ನಲ್ಲೇ ಸಚಿವ ಸ್ಥಾನ ಗಿಟ್ಟಿಸಿಕೊಳ್ಳಲು ಕಾಂಗ್ರೆಸ್ ಶಾಸಕರು ತೀವ್ರ ಕಸರತ್ತು ನಡೆಸುತ್ತಿದ್ದಾರೆ. ದೆಹಲಿ ಮಟ್ಟದಲ್ಲಿ ಭರ್ಜರಿ ಲಾಬಿ ಕೂಡ ಶುರುವಾಗಿದೆ. ಸಚಿವರ ಪಟ್ಟಿಯನ್ನು ಫೈನಲ್ ಮಾಡಲು ನೂತನ ಸಿಎಂ ಡಿ.ಕೆ. ಶಿವಕುಮಾರ್ ಹಾಗೂ ಹಿರಿಯ ನಾಯಕ ಸಿದ್ದರಾಮಯ್ಯ ಅವರು ನಾಳೆ (ಸೋಮವಾರ) ಹೈಕಮಾಂಡ್ ಭೇಟಿಗೆ ದೆಹಲಿಗೆ ಹಾರಲಿದ್ದಾರೆ ಎನ್ನಲಾಗಿದೆ. ಮೂಲಗಳ ಪ್ರಕಾರ, ಮೊದಲ ಹಂತದಲ್ಲಿ ಮುಖ್ಯಮಂತ್ರಿ ಸೇರಿದಂತೆ ಕೇವಲ 9 ನಾಯಕರು ಮಾತ್ರ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಸಿದ್ದರಾಮಯ್ಯ ಸಾರಥ್ಯದಲ್ಲಿ ‘ಕೋರ್ ಕಮಿಟಿ’ ರಚನೆ?
ಹೊಸ ಸರ್ಕಾರಕ್ಕೆ ಆಡಳಿತಾತ್ಮಕವಾಗಿ ಗೈಡ್ ಮಾಡಲು ಹಾಗೂ ಪಕ್ಷ-ಸರ್ಕಾರದ ನಡುವೆ ಸಮನ್ವಯತೆ ಕಾಪಾಡಲು ಹೈಕಮಾಂಡ್ ಮಾಸ್ಟರ್ ಪ್ಲಾನ್ ಒಂದನ್ನು ಸಿದ್ಧಪಡಿಸಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಹಿರಿಯ ನಾಯಕರನ್ನು ಒಳಗೊಂಡ ‘ಕೋರ್ ಕಮಿಟಿ’ ಅಥವಾ ‘ಮಾರ್ಗದರ್ಶಕ ಸಮಿತಿ’ ರಚನೆಯಾಗುವ ಸಾಧ್ಯತೆ ದಟ್ಟವಾಗಿದೆ. 9 ಸಚಿವರು ಮತ್ತು ಪ್ರಮುಖ ನಾಯಕರಿರುವ ಈ ಹೈಪವರ್ ಸಮಿತಿಯು ಸರ್ಕಾರದ ಪ್ರಮುಖ ನಿರ್ಧಾರಗಳಿಗೆ ದಿಕ್ಸೂಚಿಯಾಗಲಿದೆ.

Join WhatsApp

Join Now

Join Telegram

Join Now