ಸುದ್ದಿಒನ್,ಬೆಂಗಳೂರು,ಜೂನ್.03: ಕರ್ನಾಟಕ ಕಾಂಗ್ರೆಸ್ನ ಹಿರಿಯ ನಾಯಕ, ಟ್ರಬಲ್ ಶೂಟರ್ ಎಂದೇ ಜನಪ್ರಿಯರಾಗಿರುವ ಡಿ.ಕೆ.ಶಿವಕುಮಾರ್ ಅವರು ತಮ್ಮ ಘೋಷಿತ ಆಸ್ತಿ ವಿವರಗಳ ಪ್ರಕಾರ ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಲು ಸಜ್ಜಾಗಿದ್ದಾರೆ.
2023ರ ವಿಧಾನಸಭಾ ಚುನಾವಣೆಯ ಅಫಿಡವಿಟ್ ಪ್ರಕಾರ, ಡಿ.ಕೆ. ಶಿವಕುಮಾರ್ ಮತ್ತು ಅವರ ಅವಲಂಬಿತರ ಒಟ್ಟು ಆಸ್ತಿಯ ಮೌಲ್ಯ ರೂ. 1,413.78 ಕೋಟಿಗಳಷ್ಟಿದೆ. ಇದು 2018 ರ ಚುನಾವಣಾ ಅಫಿಡವಿಟ್ಗೆ (ರೂ. 840.08 ಕೋಟಿ) ಹೋಲಿಸಿದರೆ ಗಣನೀಯವಾಗಿ ಹೆಚ್ಚಾಗಿದೆ.
ಇನ್ನು ಅವರ ಸಹೋದರ ಹಾಗೂ ಮಾಜಿ ಸಂಸದ ಡಿ.ಕೆ. ಸುರೇಶ್ ಅವರು 2024 ರ ಲೋಕಸಭಾ ಚುನಾವಣೆಯ ಅಫಿಡವಿಟ್ನಲ್ಲಿ ರೂ. 593 ಕೋಟಿ ಮೌಲ್ಯದ ಆಸ್ತಿಯನ್ನು ಘೋಷಿಸಿಕೊಂಡಿದ್ದಾರೆ.















